ಬ್ರೇಕಿಂಗ್ ನ್ಯೂಸ್
11-03-24 02:08 pm Bengaluru Correspondent ಕರ್ನಾಟಕ
ಬೆಂಗಳೂರು, ಮಾ.11: ತಮಿಳುನಾಡು, ಪಾಂಡಿಚೇರಿ ಬಳಿಕ ಕರ್ನಾಟಕ ರಾಜ್ಯದಲ್ಲಿಯೂ ಆರೋಗ್ಯಕ್ಕೆ ಹಾನಿಕರ ಎಂದೆನಿಸಿರುವ ಕಾಟನ್ ಕ್ಯಾಂಡಿ ಬಳಕೆಯನ್ನು ನಿಷೇಧ ಮಾಡಲಾಗಿದೆ. ಗೋಬಿ ಮಂಚೂರಿ ನಿಷೇಧ ತೂಗುಗತ್ತಿಯಿಂದ ಸದ್ಯಕ್ಕೆ ಪಾರಾಗಿದೆ. ಗೋಬಿ ತಯಾರಿಕೆಯಲ್ಲಿ ಕೃತಕ ಬಣ್ಣಗಳನ್ನು ಬಳಸುವಂತಿಲ್ಲ ಎಂದು ಷರತ್ತು ವಿಧಿಸಿದೆ.
ಈ ಬಗ್ಗೆ ಸುದ್ದಿಗೋಷ್ಟಿ ಕರೆದು ಮಾಹಿತಿ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಈ ಕುರಿತಾಗಿ ಪ್ರತ್ಯೇಕ ಸುತ್ತೋಲೆ ಹೊರಡಿಸಲಾಗುತ್ತದೆ ಎಂದಿದ್ದಾರೆ. ಕ್ಯಾಂಡಿ ಬ್ಯಾನ್ ಮಾರಾಟ ಮಾಡಿದರೆ ಮತ್ತು ಗೋಬಿ ಮಂಚೂರಿ ತಯಾರಿಕೆಯಲ್ಲಿ ಯಾವುದೇ ಕೃತಕ ಬಣ್ಣ ಬಳಸಿದರೇ ಆಹಾರ ಸುರಕ್ಷಿತೆ ಮತ್ತು ಗುಣಮಟ್ಟ ಕಾಯ್ದೆ 2006 ನಿಯಮ 59ರ ಅಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.
ಗೋಬಿ, ಬಂಬಾಯಿ ಮಿಠಾಯಿ ಕ್ಯಾನ್ಸರ್ಕಾರಕ
ಜನರು ಹೆಚ್ಚಿನ ಸಂಖ್ಯೆಯಲ್ಲಿ ಹೊರಗಡೆ ಫಾಸ್ಟ್ ಫುಡ್ ಅಂಗಡಿಗಳಲ್ಲಿ ಆಹಾರ ಸೇವನೆ ಮಾಡುತ್ತಾರೆ. ಇದರಿಂದ ಕ್ಯಾನ್ಸರ್ ನಂತಹ ಮಾರಣಾಂತಿಕ ಖಾಯಿಲೆ ಏರಿಕೆಯಾಗುತ್ತಿದೆ. ಹೆಚ್ಚು ಕೊಬ್ಬುಕಾರಕ ಅಂಶಗಳು, ಕೃತಕ ಬಣ್ಣಗಳು, ಉಪ್ಪು ಹಾಗೂ ಸಕ್ಕರೆ ಆಹಾರದಲ್ಲಿ ಬಳಕೆಯಾಗುತ್ತಿದೆ. ಹೀಗಾಗಿ ರಾಜ್ಯದ 171 ಕಡೆ ಗೋಬಿ ಮಂಚೂರಿ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ಮಾಡಿದ್ದೇವೆ. ಇದರಲ್ಲಿ 107 ಮಾದರಿಯಲ್ಲಿ ಕೃತಕ ಬಣ್ಣ ಕಂಡುಬಂದಿದೆ. 64 ಕಡೆ ಸುರಕ್ಷಿತ ಮಾದರಿಗಳು ಕಂಡುಬಂದಿದೆ. ಟಾರ್ಟ್ರಾಜಿನ್, ಸನ್ಸೆಟ್ ಯೆಲ್ಲೋ ಮತ್ತು ಕಾರ್ಮೋಸಿನ್ನಂತ ಕೃತಕ ಬಣ್ಣಗಳನ್ನು ಬಳಸಿದ್ದು ಇವು ಆರೋಗ್ಯಕ್ಕೆ ಅಪಾಯಕಾರಿ ಎಂಬುದಾಗಿ ತಜ್ಞರು ಎಚ್ಚರಿಕೆ ನೀಡಿದ್ದಾರೆ. ಆ ನಿಟ್ಟಿನಲ್ಲಿ ನಾವು ಕ್ರಮ ಜರುಗಿಸುತ್ತಿದ್ದೇವೆ ಎಂದು ತಿಳಿಸಿದರು.
ಗೋವಾದಲ್ಲಿ ಗೋಬಿ ಮಂಚೂರಿಯನ್ನು ಸಿಂಥೆಟಿಕ್ ಬಣ್ಣಗಳು, ವಿವಿಧ ರೀತಿಯ ಸಾಸ್ ಮತ್ತು ರೀತಾ ಪೌಡರ್‌ನಿಂದ ತಯಾರಿಸಲಾಗುತ್ತದೆ ಎಂಬ ಕಾರಣ ನೀಡಿ ಗೋವಾದ ಮಾಪುಸಾ ನಗರದಲ್ಲಿ ಗೋಬಿ ಮಂಚೂರಿಯನ್ ನಿಷೇಧಿಸಲಾಗಿದೆ. ಗೋವಾದ ಮಾಪುಸಾ ನಗರದಲ್ಲಿನ ಅಂಗಡಿಗಳಲ್ಲಿ ಗೋಬಿ ಮಂಚೂರಿಯನ್ ಅನ್ನು ಮಾರಾಟ ಮಾಡುವಂತಿಲ್ಲ ಎಂದು ಆದೇಶಿಸಲಾಗಿದೆ. ಹೀಗಾಗಿ ಕರ್ನಾಟಕದಲ್ಲಿಯೂ ಗೋಬಿ ಮಂಚೂರಿ ನಿಷೇಧವಾಗುವ ಮಾತು ಕೇಳಿಬಂದಿತ್ತು.
ರೋಡಮೈನ್-ಬಿ ಅಥವಾ ಆರ್‌ಎಚ್‌ಬಿ ಎಂದು ಕರೆಯುವ ರಾಸಾಯನಿಕವನ್ನು ಜವಳಿ, ಕಾಗದ, ಚರ್ಮ ಮತ್ತು ಬಣ್ಣಗಳ ಉದ್ಯಮದಲ್ಲಿ ಕೆಂಪು ಮತ್ತು ಗುಲಾಬಿ ಬಣ್ಣಕ್ಕಾಗಿ ಬಳಸಲಾಗುತ್ತದೆ. ಈ ರಾಸಾಯನಿಕವು ಆಹಾರದ ಮೂಲಕ ದೇಹ ಸೇರಿದರೆ ಕ್ಯಾನ್ಸರ್ ಕಾಯಿಲೆಗೆ ತುತ್ತಾಗಬೇಕಾಗುತ್ತದೆ ಎಂದು ತಜ್ಞರು ಹೇಳುತ್ತಾರೆ. ಇದು ಕೇವಲ ಹತ್ತಿ ಕ್ಯಾಂಡಿಯಲ್ಲಿ ಮಾತ್ರವಲ್ಲ; ಸಿಹಿ ತಿಂಡಿಗಳು, ಬಣ್ಣದ ಮಿಠಾಯಿಗಳು, ಕೆಂಪು ಮೆಣಸಿನಕಾಯಿಗಳು, ಮೆಣಸಿನ ಪುಡಿ ಇನ್ನೂ ಅನೇಕ ಸಂಸ್ಕರಿಸಿದ ಆಹಾರಗಳಲ್ಲಿ ಕಂಡುಬರುತ್ತದೆ ಎಂದು ಹೇಳಲಾಗುತ್ತದೆ.
The Karnataka Health Department on Monday banned the sale of coloured Gobi Manchurian and Cotton Candy in the state, saying that the use of artificial colouring agents, such as Rhodamine-B, are harmful to health. At a press conference, state Health Minister Dinesh Gundurao addressed the rising concerns over the presence of harmful chemicals in various food items and pressed on the importance of consuming food which is safe for health.
16-07-25 09:36 pm
HK News Desk
ಕೋವಿಡ್ ಮುಗಿದರೂ, ಅದರ ಪರಿಣಾಮ ನಿಂತಿಲ್ಲ..! ನರಮಂಡಲ...
16-07-25 07:05 pm
BESCOM, Cybercrime, Digital Arrest: ಡಿಜಿಟಲ್ ಅ...
16-07-25 03:58 pm
ಕಾವೇರಿ ಆರತಿ ದುಡ್ಡು ಹೊಡೆಯುವ ಸ್ಕೀಮ್, ನೂರು ಕೋಟಿ...
16-07-25 11:47 am
35 IPS Officers Transfer: ರಾಜ್ಯದಲ್ಲಿ 35 ಐಪಿಎಸ...
15-07-25 01:32 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
16-07-25 10:52 pm
Mangalore Correspondent
ಕೆಂಪು ಕಲ್ಲು, ಮರಳು ಸಮಸ್ಯೆಗೆ ಕಾಂಗ್ರೆಸ್ ಸರ್ಕಾರದ...
16-07-25 01:01 pm
Dharmasthala Missing case, Ananya Bhat, Compl...
15-07-25 10:40 pm
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
16-07-25 11:04 pm
Mangalore Correspondent
Mangalore Crime, Konaje Murder: ಒಂಟಿ ಮಹಿಳೆಯ ಅ...
16-07-25 09:48 pm
Sexual Harassment Odisha News; ಪ್ರಾಧ್ಯಾಪಕನಿಂದ...
16-07-25 04:37 pm
Kavoor police constable arrest, Mangalore: ದೂ...
16-07-25 11:42 am
ಸುಂದರವಾಗಿದ್ದಕ್ಕೆ ತಲೆ ಬೋಳಿಸಿ ಮನೆಯಲ್ಲಿ ಕೂಡಿಹಾಕಿ...
15-07-25 10:57 pm