ಬ್ರೇಕಿಂಗ್ ನ್ಯೂಸ್
13-03-24 10:09 pm HK News Desk ಕರ್ನಾಟಕ
ಬೆಂಗಳೂರು, ಮಾ.13: ಲೋಕಸಭೆ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದ್ದು, ಹಾಲಿ ಸಂಸದರಾದ ಪ್ರತಾಪ್ ಸಿಂಹ, ನಳಿನ್ ಕುಮಾರ್ ಕಟೀಲ್, ಜಿಎಂ ಸಿದ್ದೇಶ್ವರ್, ಡಿವಿ ಸದಾನಂದ ಗೌಡ ಸೇರಿ ಎಂಟು ಸಂಸದರಿಗೆ ಟಿಕೆಟ್ ತಪ್ಪಿದೆ. ಈ ಮೂಲಕ ಬಿಜೆಪಿ ಹೊಸ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಹೊಸ ಪ್ರಯೋಗಕ್ಕೆ ಮುಂದಾಗಿದೆ.
ಬಿಜೆಪಿಯ ರಾಜ್ಯಾಧ್ಯಕ್ಷರಾಗಿ ಮೂರು ವರ್ಷಕ್ಕೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿದ್ದ ನಳಿನ್ ಕುಮಾರ್ ಕಟೀಲ್ ಅವರಿಗೂ ಟಿಕೆಟ್ ಮಿಸ್ ಆಗಿದೆ. ಈ ಬಗ್ಗೆ ಕಟೀಲ್ ಅವರಿಗೆ ಹೈಕಮಾಂಡ್ ಮೊದಲೇ ಸೂಚನೆ ನೀಡಿತ್ತು ಎನ್ನಲಾಗಿದೆ. ಮೈಸೂರು ಸಂಸದ ಪ್ರತಾಪ್ ಸಿಂಹ ತನಗೆ ಟಿಕೆಟ್ ಕೈತಪ್ಪುತ್ತೆ ಎಂದು ತಿಳಿದ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಬೇಸರ ವ್ಯಕ್ತಪಡಿಸಿದ್ದರು. ಆದರೆ, ಕೊನೆಗೂ ಹೈಕಮಾಂಡ್ ಮೈಸೂರಿನಲ್ಲಿ ರಾಜವಂಶಸ್ಥರಿಗೆ ಟಿಕೆಟ್ ನೀಡಿದೆ.
ದಾವಣಗೆರೆ ಜಿಎಂ ಸಿದ್ದೇಶ್ವರ್ ಪತ್ನಿಗೆ ಟಿಕೆಟ್
ಸತತ ನಾಲ್ಕು ಬಾರಿ ಸಂಸದರಾಗಿದ್ದ ಜಿಎಂ ಸಿದ್ದೇಶ್ವರ್ ಅವರಿಗೆ ಈ ಬಾರಿ ಟಿಕೆಟ್ ಕೈತಪ್ಪಿದೆ. ಆದರೆ, ಪಟ್ಟು ಬಿಡದ ಸಿದ್ದೇಶ್ವರ ತನ್ನ ಪತ್ನಿ ಗಾಯತ್ರಿಗೆ ಟಿಕೆಟ್ ಕೊಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಮೂಲಕ ಟಿಕೆಟ್ ಭರವಸೆಯಲ್ಲಿದ್ದ ರೇಣುಕಾಚಾರ್ಯ ಅವರಿಗೆ ಭಾರೀ ನಿರಾಸೆಯಾಗಿದೆ. ದಾವಣಗೆರೆಯಲ್ಲಿ ಕಾಂಗ್ರೆಸ್‌ನಿಂದ ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ಅವರ ಸೊಸೆ, ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಪತ್ನಿ ಪ್ರಭಾ ಮಲ್ಲಿಕಾರ್ಜುನ ಅವರು ಸ್ಪರ್ಧೆ ಮಾಡುವ ಸಾಧ್ಯತೆ ಹೆಚ್ಚಿದೆ. ಹೀಗಾಗಿಯೇ ಮಹಿಳಾ ಅಭ್ಯರ್ಥಿಯನ್ನು ಬಿಜೆಪಿ ಹಾಕಿದೆ ಎನ್ನಲಾಗುತ್ತಿದೆ.
ಡಿವಿ ಸದಾನಂದ ಗೌಡರು ರಾಜಕೀಯದಿಂದ ದೂರ ಉಳಿಯುವುದಾಗಿ ಹೇಳಿದ್ದರು. ಬಳಿಕ ಮತ್ತೆ ಸ್ಪರ್ಧೆಗೆ ಆಸಕ್ತಿ ವಹಿಸಿದರೂ ಹೈಕಮಾಂಡ್ ಅವರಿಗೆ ಟಿಕೆಟ್ ನಿರಾಕರಿಸಿದೆ. ಚಾಮರಾಜ ನಗರದ ಸಂಸದ ಶ್ರೀನಿವಾಸ್ ಪ್ರಸಾದ್, ತುಮಕೂರಿನ ಜಿ.ಎಸ್. ಬಸವರಾಜು, ಹಾವೇರಿಯ ಶಿವಕುಮಾರ್ ಉದಾಸಿ ಮೊದಲೇ ಚುನಾವಣಾ ನಿವೃತ್ತಿ ಘೋಷಣೆ ಮಾಡಿದ್ದರು.
ಬೆಂಗಳೂರು ಉತ್ತರದಲ್ಲಿ ಡಿ.ವಿ. ಸದಾನಂದ ಅವರ ಬದಲಿಗೆ ಶೋಭಾ ಕರಂದ್ಲಾಜೆ ಅವರಿಗೆ ಟಿಕೆಟ್ ನೀಡಲಾಗಿದೆ. ದಕ್ಷಿಣ ಕನ್ನಡದಲ್ಲಿ ನಳಿನ್ ಕುಮಾರ್ ಕಟೀಲ್ ಅವರ ಬದಲು ಬ್ರಿಜೇಶ್ ಚೌಟ ಆಯ್ಕೆಯಾಗಿದ್ದಾರೆ. ಮೈಸೂರು- ಕೊಡಗಿನಲ್ಲಿ ಪ್ರತಾಪ್‌ಸಿಂಹ ಅವರ ಬದಲು ಯದುವೀರ್ ಒಡೆಯರ್ ಅವರಿಗೆ ಟಿಕೆಟ್ ನೀಡಲಾಗಿದೆ. ಹಾವೇರಿಯಲ್ಲಿ ಶಿವಕುಮಾರ್ ಉದಾಸಿ ಅವರ ಬದಲಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟಿಕೆಟ್ ಪಡೆದಿದ್ದಾರೆ. ಬಳ್ಳಾರಿ ಕ್ಷೇತ್ರದಲ್ಲಿ ಹಾಲಿ ಸಂಸದ ದೇವೇಂದ್ರಪ್ಪ ಬದಲು ಶ್ರೀರಾಮುಲು ಟಿಕೆಟ್ ಪಡೆದಿದ್ದಾರೆ. ತುಮಕೂರಿನಲ್ಲಿ ಹಾಲಿ ಸಂಸದರಾದ ಜಿ.ಎಸ್. ಬಸವರಾಜು ಅವರ ಬದಲಿಗೆ ವಿ ಸೋಮಣ್ಣ ಅವರಿಗೆ ಟಿಕೆಟ್ ಸಿಕ್ಕಿದೆ. ದಾವಣಗೆರೆ ಕ್ಷೇತ್ರದಲ್ಲಿ ಜಿ.ಎಂ. ಸಿದ್ದೇಶ್ವರ್ ಅವರಿಗೆ ಟಿಕೆಟ್ ಮಿಸ್ ಆಗಿದ್ದರೂ ಅವರ ಪತ್ನಿ ಗಾಯತ್ರಿ ಸಿದ್ದೇಶ್ವರ್ ಅವರಿಗೆ ಟಿಕೆಟ್ ಸಿಕ್ಕಿದೆ. ಚಾಮರಾಜನಗರದಲ್ಲಿ ಶ್ರೀನಿವಾಸ ಪ್ರಸಾದ್ ಅವರ ಬದಲಿಗೆ ಮಾಜಿ ಶಾಸಕ ಬಾಲರಾಜು ಟಿಕೆಟ್ ಪಡೆದಿದ್ದಾರೆ.
The BJP on Wednesday, 13 March, released its much-anticipated second list of candidates for the 2024 Lok Sabha elections. The list features the names of candidates for 20 seats in Karnataka. The BJP central leadership sprung a surprise by choosing to field fresh faces in 10 constituencies — including Mysuru and Dakshina Kannada.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm