ಬ್ರೇಕಿಂಗ್ ನ್ಯೂಸ್
15-03-24 12:09 pm Bangalore Correspondent ಕರ್ನಾಟಕ
ಬೆಂಗಳೂರು, ಮಾ 15: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಪೋಕ್ಸೋ ಪ್ರಕರಣ ದಾಖಲಾಗಿದೆ. ಈ ಬಗ್ಗೆ ಮೊದಲ ಪ್ರತಿಕ್ರಿಯೆಯನ್ನು ಬಿಎಸ್ ಯಡಿಯೂರಪ್ಪ ಅವರು ನೀಡಿದ್ದು, ನಾನು ಆ ಮಹಿಳೆಗೆ ಸಹಾಯ ಮಾಡಲು ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೆ. ಆದರೆ, ಈಗ ನನ್ನ ಮೇಲೆಯೇ ಪ್ರಕರಣ ದಾಖಲಾಗಿದೆ. ನೋಡೋಣ ಮುಂದೆ ಏನಾಗುತ್ತೆ ಎಂದು ಹೇಳಿದ್ದಾರೆ.
ಶುಕ್ರವಾರ ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೆಲ ದಿನಗಳ ಹಿಂದೆ ನಮ್ಮ ಮನೆಗೆ ಸಹಾಯ ಕೇಳಿಕೊಂಡು ಓರ್ವ ಮಹಿಳೆ ಬಂದಿದ್ದಳು. ಏನೋ ಸಮಸ್ಯೆಯಿದೆ ಎಂದು ಆಕೆ ಅಳುತ್ತಿದ್ದಳು, ಆಗ ಆಕೆಯ ಸಮಸ್ಯೆಯನ್ನು ಆಲಿಸಿ, ಪೊಲೀಸ್ ಆಯುಕ್ತರಿಗೆ ಖುದ್ದು ಕರೆ ಮಾಡಿ ಸಮಸ್ಯೆಯನ್ನು ತಿಳಿಸಿ, ಮಹಿಳೆಗೆ ಸಹಾಯ ಮಾಡುವಂತೆ ಸೂಚಿಸಿದ್ದೆ ಎಂದು ವಿವರಿಸಿದರು.
ಆದರೆ, ಬಳಿಕ ಮಹಿಳೆ ನನ್ನ ವಿರುದ್ಧವೇ ಮಾತನಾಡಲು ಶುರು ಮಾಡಿದಳು. ಈ ವಿಷಯದ ಬಗ್ಗೆಯೂ ಪೊಲೀಸ್ ಆಯುಕ್ತರಿಗೆ ತಿಳಿಸಿದ್ದೆ. ಆದರೆ, ಗುರುವಾರ ಪೊಲೀಸರು ನನ್ನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ನೋಡೋಣ ಮುಂದೆನಾಗುತ್ತೆ ಅಂತಾ. ಇದರ ಹಿಂದೆ ರಾಜಕೀಯ ಉದ್ದೇಶ ಇದೆ ಎಂದು ನಾನು ಈಗಲೇ ಹೇಳುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದರು.
ಫೆಬ್ರವರಿ 2ರಂದು ತಮ್ಮ ನಿವಾಸದಲ್ಲಿ ಬಿಎಸ್ ಯಡಿಯೂರಪ್ಪ ಅವರು 17 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಗುರುವಾರ ಸಂಜೆ ಸಂತ್ರಸ್ತೆಯ ತಾಯಿ ನೀಡಿದ ದೂರಿನನ್ವಯ ಪೊಲೀಸರು ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್ 354 (ಎ) ಅಡಿ ಪ್ರಕರಣ ದಾಖಲಿಸಿದ್ದು, ತನಿಖೆ ಆರಂಭಿಸಿದ್ದಾರೆ.
ಇನ್ನು, ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಗೃಹ ಸಚಿವ ಜಿ ಪರಮೇಶ್ವರ್ ಅವರು, ತನಿಖೆ ನಡೆಸಿ ಸತ್ಯಾಸತ್ಯತೆ ಪರಿಶೀಲನೆ ಮಾಡಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಬಿಎಸ್‌ವೈ ವಿರುದ್ದ ಮಹಿಳೆ ದೂರು ನೀಡಿದ ಹಿನ್ನೆಲೆಯಲ್ಲಿ ಪರಿಶೀಲನೆ ಮಾಡಿ ಪೊಲೀಸರು ಕೇಸ್ ದಾಖಲು ಮಾಡಿದ್ದಾರೆ. ಅದರ ಬಗ್ಗೆ ತನಿಖೆ ನಡೆಸುತ್ತಾರೆ. ಅವರು ಕೊಟ್ಟಿರುವ ದೂರಿನ ಬಗ್ಗೆ ತನಿಖೆ ಪೂರ್ಣಗೊಳ್ಳದೆ ಏನೂ ಹೇಳಲು ಆಗುವುದಿಲ್ಲ. ದೂರು ಕೊಟ್ಟ ಮಹಿಳೆಗೆ ಮಾನಸಿಕ ಸಮಸ್ಯೆ ಇದೆ ಎಂದು ಕೆಲವರು ಹೇಳುತ್ತಾರೆ. ಲೈಂಗಿಕ ಕಿರುಕುಳದ ಬಗ್ಗೆ ಟೈಪ್ ಮಾಡಿರುವ ದೂರನ್ನು ಅವರು ನೀಡಿದ್ದಾರೆ ಎಂದರು.
Yediyurappa POCSO case, says just went to help her.According to the first information report (FIR), Yediyurappa allegedly took the minor to a room, closed the door and sexually harassed her. The woman further alleged in the FIR that when she confronted Yediyurappa, he said that he was checking if the girl was raped or not. Yediyurappa later allegedly apologised and asked the woman not to reveal the matter to anyone.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm