ಬ್ರೇಕಿಂಗ್ ನ್ಯೂಸ್
16-03-24 07:23 pm HK News Desk ಕರ್ನಾಟಕ
ಕಲಬುರಗಿ, ಮಾ.16: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಖಾತೆ ತೆರೆಯದ ಗ್ಯಾರಂಟಿ ನೀಡುವಂತೆ ಪ್ರಧಾನಿ ನರೇಂದ್ರ ಮೋದಿ ಜನತೆಯಲ್ಲಿ ಮನವಿ ಮಾಡಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ತವರು ಜಿಲ್ಲೆಯಿಂದ ಲೋಕಸಭಾ ಚುನಾವಣಾ ಪ್ರಚಾರ ಆರಂಭಿಸಿದ ಮೋದಿ, ಹಲವಾರು ಗ್ಯಾರಂಟಿ ಕೊಟ್ಟಿರುವಾಗ ರಾಜ್ಯದ ಜನ ನನಗೆ ರಾಜ್ಯದಲ್ಲಿ ಲೋಕಸಭಾ ಚುನಾವಣೆಯಲ್ಲಿ ಖಾತೆ ತೆರೆಯದ ಗ್ಯಾರಂಟಿ ನೀಡಿ ಎಂದರು.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಸಮಾಜ ಘಾತುಕ ಶಕ್ತಿಗಳ ರಕ್ಷಣೆಗೆ ನಿಂತಿದ್ದರಿಂದ ಎಲ್ಲವೂ ಹದಗೆಡುತ್ತಿದೆ. ಸಣ್ಣ ಸಣ್ಣ ಕಾಮಗಾರಿಗಳನ್ನು ಮಾಡಲು ಸರ್ಕಾರದ ಬಳಿ ಹಣ ಇಲ್ಲ. ಪರಿಸ್ಥಿತಿ ಹೀಗಿರುವಾಗ ಅಭಿವೃದ್ಧಿ ಕಾರ್ಯಗಳನ್ನು ಮಾಡಲು ಹೇಗೆ ಸಾಧ್ಯ ಎಂದು ಮೋದಿ ರಾಜ್ಯ ಸರ್ಕಾರದ ವಿರುದ್ಧ ಆರೋಪ ಪಟ್ಟಿಯನ್ನೇ ಮಾಡಿದರು. ಸರ್ಕಾರದ ಭೃಷ್ಟಾಚಾರಕ್ಕೆ ಕಡಿವಾಣ ಹಾಕಲು ಕೇಂದ್ರ ಸರ್ಕಾರ ನಿಗಾ ವಹಿಸುವಂತೆ ತಮಗೆ ಬಲ ತುಂಬಬೇಕು. ಅದಕ್ಕಾಗಿ 28ಕ್ಕೆ 28 ಸೀಟುಗಳನ್ನು ಗೆಲ್ಲಿಸಿ ಎಂದು ಮನವಿ ಮಾಡಿದರು.
ರಣಕಹಳೆ ಮೊಳಗಿಸಿದ ಮೋದಿ
ಲೋಕಸಮರಕ್ಕೆ ಮುಹೂರ್ತ ಘೋಷಣೆಯಾಗುತ್ತಿದ್ದ ವೇಳೆಯೇ ಪ್ರಧಾನಿ ನರೇಂದ್ರ ಮೋದಿ ಬಿಜೆಪಿಯ ಮೊದಲ ಪ್ರಚಾರ ಸಭೆಯನ್ನುದ್ದೇಶಿಸಿ ರಣಕಹಳೆ ಮೊಳಗಿಸಿದರು. ಅರ್ಧ ಗಂಟೆಯ ಭಾಷಣದಲ್ಲಿ ಖರ್ಗೆಯವರನ್ನು ಟೀಕಿಸುವುದಿರಲಿ, ಅವರ ಹೆಸರನ್ನು ಕೂಡ ತೆಗೆದುಕೊಳ್ಳಲಿಲ್ಲ. `ಅಬ್ ಕೀ ಬಾರ್ ಚಾರ್ ಸೌ ಪಾರ್’ ಎಂದು ದೃಢ ವಿಶ್ವಾಸದೊಂದಿಗೆ ಘೋಷಣೆ ಮೊಳಗಿಸಿ ನೆರೆದಿದ್ದ ಸಹಸ್ರಾರು ಜನರನ್ನು ಹುರಿದುಂಬಿಸಿದರು.
ನನ್ನ ಮಾತನ್ನು ಕನ್ನಡದಲ್ಲೂ ಕೇಳಿ
ಕನ್ನಡ ಭಾಷೆ ಬಗ್ಗೆ ತಾವು ಹೆಚ್ಚಿನ ಗೌರವ ಹೊಂದಿದ್ದು, ಅದಕ್ಕಾಗಿ ಕನ್ನಡಿಗರು ತಮ್ಮ ಭಾಷಣವನ್ನು ಕನ್ನಡದಲ್ಲೂ ಕೇಳುವಂತಾಗಲೆಂದು ಸಾಮಾಜಿಕ ಜಾಲತಾಣ `ಎಕ್ಸ್’ನಲ್ಲಿ ವ್ಯವಸ್ಥೆ ಮಾಡಲಾಗಿದೆ. `ನಮೋ ಇನ್ ಕನ್ನಡ’ ಮೂಲಕ ಜನರು ತಮ್ಮನ್ನು ಸಂಪರ್ಕಿಸಬಹುದು. ಆ ಮೂಲಕ ನಿಮ್ಮ ಸೇವೆಗೆ ಹಾಜರಾಗಲು ಸಾಧ್ಯವಾಗುತ್ತದೆ. ಅಲ್ಲದೇ ನೀವು ಕೂಡ `ಮೋದಿ ನನ್ನ ಜೇಬಿನಲ್ಲಿದ್ದಾರೆ’ ಎಂದು ಹೇಳಿಕೊಳ್ಳಬಹುದೆಂದರು. ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರ ದಂಡೇ ಪಾಲ್ಗೊಂಡಿತ್ತು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ, ಭಗವಂತ ಖೂಬಾ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಸಚಿವರಾದ ಮಾಲೀಕಯ್ಯ ಗುತ್ತೇದಾರ್, ನರಸಿಂಹ ನಾಯಕ್, ಸುನೀಲ ವಲ್ಯಾಪುರೆ, ಸಂಸದ, ಬಿಜೆಪಿ ಅಭ್ಯರ್ಥಿ ಡಾ. ಉಮೇಶ ಜಾಧವ್ ಸೇರಿದಂತೆ ಹಲವಾರು ಮುಖಂಡರು, ಜಿಲ್ಲೆಯ ಹಾಲಿ-ಮಾಜಿ ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು.
Prime Minister Narendra Modi started campaigning for the Lok Sabha elections from Kalaburagi and attacked the Congress. Addressing a public meeting at the residence of AICC President Mallikarjuna Kharge, Prime Minister Narendra Modi alleged that the law and order in the state has deteriorated under the Congress rule, and that the government is indulging in looting while the people are facing hardships.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 09:41 pm
Mangalore Correspondent
Mangalore Job Scam, Police, Lawrence Dsouza,...
19-05-25 05:22 pm
Akanksha Suicide, Dharmasthala, Mangalore: ಏರ...
19-05-25 12:31 pm
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
19-05-25 09:38 pm
Mangalore Correspondent
Belagavi Murder, Mother in law: ಸೊಸೆಗೆ ಮಕ್ಕಳಾ...
19-05-25 03:35 pm
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm