ಬ್ರೇಕಿಂಗ್ ನ್ಯೂಸ್
18-03-24 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.18: ಮಾಜಿ ಸಿಎಂ, ಬೆಂಗಳೂರು ಉತ್ತರ ಕ್ಷೇತ್ರದಿಂದ ಟಿಕೆಟ್ ತಪ್ಪಿಸಿಕೊಂಡಿರುವ ಸಂಸದ ಸದಾನಂದ ಗೌಡ ಬಿಜೆಪಿ ತೊರೆಯುವ ಸಾಧ್ಯತೆ ಕಂಡುಬಂದಿದ್ದು, ಕಾಂಗ್ರೆಸ್ ಸೇರಿ ಮೈಸೂರಿನಿಂದ ಸ್ಪರ್ಧಿಸಲಿದ್ದಾರೆ ಎಂಬ ಮಾತು ಕೇಳಿಬಂದಿದೆ.
ಮೈಸೂರಿನಲ್ಲಿ ಬಿಜೆಪಿ ಅಭ್ಯರ್ಥಿ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ವಿರುದ್ಧ ಡಿವಿ ಸದಾನಂದಗೌಡ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್ ಮುಂದಾಗಿದೆ. ಕಾಂಗ್ರೆಸ್ ನಾಯಕರು ಸದಾನಂದಗೌಡ ಜೊತೆ ಮಾತುಕತೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೇಳಿಕೆ ನೀಡಿರುವ ಡೀವಿ, ನಾಳೆಯೇ ತನ್ನ ನಿರ್ಧಾರವನ್ನು ತಿಳಿಸುವುದಾಗಿ ಹೇಳಿದ್ದಾರೆ.
ಸದಾನಂದಗೌಡ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಾಗಿದ್ದು, 2011ರಲ್ಲಿ ದಿಢೀರ್ ಆಗಿ ಮುಖ್ಯಮಂತ್ರಿಯಾಗಿದ್ದರು. ಎನ್‌ಡಿಎ ಸರಕಾರದಲ್ಲಿ ರೈಲು, ಕಾನೂನು ಮತ್ತು ಸಂಸದೀಯ ಇಲಾಖೆ, ಸಾಂಖ್ಯಿಕ ಮತ್ತು ಯೋಜನೆ ಜಾರಿ ಇಲಾಖೆಯ ಕೇಂದ್ರ ಸಚಿವರಾಗಿಯೂ ಸದಾನಂದಗೌಡ ಕಾರ್ಯ ನಿರ್ವಹಿಸಿದ್ದಾರೆ.
ಈ ಬಾರಿ ಲೋಕಸಭೆ ಚುನಾವಣೆ ಮೊದಲೇ ತನ್ನ ರಾಜಕೀಯ ನಿವೃತ್ತಿ ಬಗ್ಗೆ ಹೇಳಿಕೆ ನೀಡಿ ಸಂಚಲನ ಸೃಷ್ಟಿಸಿದ್ದರು. ಇತ್ತೀಚೆಗೆ ಬಿಜೆಪಿ ಅಭ್ಯರ್ಥಿ ಪಟ್ಟಿಯಲ್ಲಿ ಬೆಂಗಳೂರು ಉತ್ತರ ಕ್ಷೇತ್ರವನ್ನು ಶೋಭಾ ಕರಂದ್ಲಾಜೆಗೆ ಬಿಟ್ಟು ಕೊಟ್ಟಿದ್ದರು. ಇದರಿಂದ ಮುನಿಸಿಕೊಂಡಿದ್ದ ಡಿವಿ ಅವರನ್ನು ಕಾಂಗ್ರೆಸ್ ನಾಯಕರು ಸಂಪರ್ಕ ಮಾಡಿದ್ದಾರೆ. ಹಾಗಿದ್ದರೂ ತಾನೆಂದೂ ಕಾಂಗ್ರೆಸ್ ಸೇರೋದಿಲ್ಲ ಎಂದೇ ಹೇಳುತ್ತಿದ್ದರು. ಕಾಂಗ್ರೆಸ್ ಮೈಸೂರು ಲೋಕಸಭಾ ಕ್ಷೇತ್ರದಲ್ಲಿ ಒಕ್ಕಲಿಗ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಮುಂದಾಗಿದ್ದು, ಸಮರ್ಥ ಅಭ್ಯರ್ಥಿಗಳಿಗಾಗಿ ಹುಡುಕಾಟ ನಡೆಸುತ್ತಿದೆ. ಹೀಗಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ಮತ್ತಿತರ ನಾಯಕರು ಡಿವಿ ಸದಾನಂದಗೌಡ ಅವರನ್ನು ಸಂಪರ್ಕಿಸಿ ಮನವೊಲಿಸಿದ್ದಾರೆ ಎಂದು ತಿಳಿದುಬಂದಿದೆ.
Veteran BJP leader, former Karnataka CM and Union Minister DV Sadananda Gowda may quit the party and contest from Mysuru as Congress candidate. The 72-year old leader is celebrating his birthday today (Monday).
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm