ಬ್ರೇಕಿಂಗ್ ನ್ಯೂಸ್
18-03-24 07:07 pm HK News Desk ಕರ್ನಾಟಕ
ಶಿವಮೊಗ್ಗ, ಮಾ 18: ಸುಳ್ಳುಗಳ ಮೇಲೆ ಸುಳ್ಳುಗಳನ್ನು ಹೇಳುವುದು ಕಾಂಗ್ರೆಸ್‌ನ ಕೆಲಸವಾಗಿದೆ. ಕರ್ನಾಟಕದಲ್ಲಿ ನಾಲ್ವರು ಸಿಎಂಗಳ ಜೊತೆಗೆ ದಿಲ್ಲಿಯ ಕಲೆಕ್ಷನ್ ಮಿನಿಸ್ಟರ್ ಬೇರೆ ಇದ್ದು, ಕರ್ನಾಟಕವನ್ನು ಲೂಟಿ ಮಾಡುತ್ತಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಶಿವಮೊಗ್ಗ ನಗರದಲ್ಲಿ ಆಯೋಜಿಸಿದ್ದ ವಿಕಸಿತ ಭಾರತ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಬಳಿ ಅಭಿವೃದ್ಧಿಯ ಅಜೆಂಡಾ ಇಲ್ಲ. ಸುಳ್ಳು ಹೇಳುವುದೇ ಕಾಂಗ್ರೆಸ್‌ನ ಮೊದಲ ಅಜೆಂಡಾ, ತಮ್ಮ ಸುಳ್ಳುಗಳನ್ನು ಸಮರ್ಥಿಸಿಕೊಳ್ಳಲು ಮತ್ತೊಂದು ಸುಳ್ಳು ಹೇಳುವುದು ಅವರ ಎರಡನೇ ಅಜೆಂಡಾ. ಕರ್ನಾಟಕದಲ್ಲೂ ಕಾಂಗ್ರೆಸ್ ಇದನ್ನೇ ಮಾಡಿದೆ. ಸರ್ಕಾರ ರಚಿಸಿದ ಬಳಿಕ ಜನರಿಗೆ ಸುಳ್ಳಿನ ಮೇಲೆ ಸುಳ್ಳುಗಳನ್ನು ಹೇಳಿದೆ. ಆ ಸುಳ್ಳುಗಳನ್ನು ಸಮರ್ಥಿಸಿಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡುತ್ತದೆ. ಮೋದಿ ಮೇಲೆ ಆರೋಪ ಮಾಡುತ್ತದೆ. ಕಾಂಗ್ರೆಸ್‌ನ ಒಂದೇ ಒಂದು ಮಂತ್ರ ಅಂದರೆ ಅದು ಜನರನ್ನು ಲೂಟಿ ಮಾಡುವುದು ಎಂದು ಆಕ್ರೋಶ ವ್ಯಕ್ತಪಡಿಸಿದರು.
ದಿಲ್ಲಿ ಕಾಂಗ್ರೆಸ್ ನಾಯಕರು ಅವಕಾಶ ಸಿಕ್ಕಾಗಲೆಲ್ಲಾ ಕರ್ನಾಟಕವನ್ನು ಎಟಿಎಂ ಮಾಡಿಕೊಂಡಿದ್ದಾರೆ. ಭ್ರಷ್ಟಾಚಾರದಲ್ಲಿ ಮುಳುಗಿದ್ದವರು ಇಂದು ಒಂದಾಗಿದ್ದಾರೆ. ಕರ್ನಾಟಕದಲ್ಲಿ ಒಬ್ಬರು ಮುಖ್ಯಮಂತ್ರಿ ಇದ್ದಾರೆ, ಮುಖ್ಯಮಂತ್ರಿ ಆಕಾಂಕ್ಷಿ ಇದ್ದಾರೆ. ಸೂಪರ್ ಸಿಎಂ ಇದ್ದಾರೆ, ಶ್ಯಾಡೋ ಸಿಎಂ ಇದ್ದಾರೆ. ಈ ನಾಲ್ವರು ಸಿಎಂಗಳ ಜೊತೆ ದಿಲ್ಲಿಯ ಕಲೆಕ್ಷನ್ ಮಿನಿಸ್ಟರ್ ಕೂಡ ಇದ್ದು, ಕರ್ನಾಟಕವನ್ನು ಲೂಟಿ ಮಾಡುತ್ತಿದ್ದಾರೆ. ರಾಜ್ಯ ಸರ್ಕಾರದ ವಿರುದ್ಧ ಇರುವ ನಿಮ್ಮ ಕೋಪ ನನಗೆ ಅರ್ಥ ಆಗ್ತಿದೆ. ಅದನ್ನು ಈ ಚುನಾವಣೆಯಲ್ಲಿ ತೋರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮಂತ್ರ ಕಣ, ಶಕ್ತಿ ಕಣ, ತಾಯಿ ಕಣ, ದೇವಿ ಕಣ ಎಂದು ಕುವೆಂಪು ಅವರ ಕವಿತೆಯನ್ನು ಉಲ್ಲೇಖಿಸಿದ ಮೋದಿ, ಕರ್ನಾಟಕದ ದೊಡ್ಡ ಶಕ್ತಿ ಕುವೆಂಪು ಆಗಿದ್ದು, ಅವರು ಕೂಡ ಮಹಿಳೆಯರ ಶಕ್ತಿ ಬಗ್ಗೆ ವರ್ಣಿಸಿದ್ದಾರೆ. ಆದರೆ, ನಾರಿಯರ ವಿಕಾಸ ಆಗುವುದು ಕಾಂಗ್ರೆಸ್‌ನವರಿಗೆ ಇಷ್ಟವಿಲ್ಲ. ಕಾಂಗ್ರೆಸ್ ಒಡೆದು ಆಳುವ ನೀತಿಯನ್ನು ಅನುಸರಿಸುತ್ತಿದೆ. ದೇಶವನ್ನು ವಿಭಜಿಸುವ ಮಾತುಗಳನ್ನು ಕಾಂಗ್ರೆಸ್ ಸಂಸದರು ಆಡುತ್ತಿದ್ದಾರೆ. ದೇಶವನ್ನು ಅಪಮಾನ ಮಾಡುವ ನಾಟಕವನ್ನು ಕಾಂಗ್ರೆಸ್‌ನವರು ಆಡುತ್ತಿದ್ದಾರೆ. ಇದರ ಪ್ರತಿಫಲವನ್ನು ಕಾಂಗ್ರೆಸ್‌ನವರು ಅನುಭವಿಸಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜೂನ್ 4ಕ್ಕೆ 400 ಸೀಟ್‌ಗಳು ಎನ್‌ಡಿಗೆ ಬರಲಿವೆ. ವಿಕಸಿತ ಭಾರತಕ್ಕಾಗಿ, ವಿಕಸಿತ ಕರ್ನಾಟಕಕ್ಕಾಗಿ ಹಾಗೂ ಭ್ರಷ್ಟಾಚಾರಿಗಳ ವಿರುದ್ಧ ಹೋರಾಡಲು, ಯುವಜನರ ಅಭಿವೃದ್ಧಿಗಾಗಿ, ರೈತರ ಅಭಿವೃದ್ಧಿಗಾಗಿ 400ಕ್ಕಿಂತ ಹೆಚ್ಚು ಕ್ಷೇತ್ರಗಳನ್ನು ಎನ್‌ಡಿಎ ಗೆಲ್ಲಬೇಕಿದೆ. ಆದ್ದರಿಂದ ಕರ್ನಾಟಕದ 28 ಕ್ಷೇತ್ರಗಳಲ್ಲಿ ಎನ್‌ಡಿಎ ಅಭ್ಯರ್ಥಿಗಳನ್ನು ಗೆಲ್ಲಿಸಬೇಕು ಎಂದ ಅವರು, ಎನ್‌ಡಿಎಗೆ ಈ ಬಾರಿ 400 ಮೀರಿ ಎಂದು ಜನರ ಬಳಿಯಿಂದ ಹೇಳಿಸಿದರು.
Prime Minister Narendra Modi on Monday addressed a rally in Karnataka's Shivamogga ahead of the much anticipated Lok Sabha elections. Addressing a rally, he said, "4 June ko 400 paar. Karnataka voters have a big responsibility in this mission. Why are we talking about 400 seats? 400 paar for Viksit Bharat, Viksit Karnataka."
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm