Hanuman Chalisa case: ಬೆಂಗಳೂರು ಹನುಮಾನ್ ಚಾಲೀಸಾ ದಂಗಲ್ ; ಹಿಂದೂ ಕಾರ್ಯಕರ್ತರಿಂದ ರ್‍ಯಾಲಿ, ನಗರತ್​ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ, ಮೋದಿ ಘೋಷಣೆ, ಶೋಭಾ ಕರಂದ್ಲಾಜೆ ವಶಕ್ಕೆ 

19-03-24 01:44 pm       Bangalore Correspondent   ಕರ್ನಾಟಕ

ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಬೆಂಗಳೂರು ಮಾ 18: ನಗರತ್​ಪೇಟೆಯಲ್ಲಿ ಮೊಬೈಲ್ ಅಂಗಡಿಯಲ್ಲಿ ಹನುಮಾನ್ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆಗೆ ಸಂಬಂಧಿಸಿದಂತೆ ನಗರದಲ್ಲಿಂದು ಹಿಂದೂಪರ ಸಂಘಟನೆಗಳು ಶಕ್ತಿ ಪ್ರದರ್ಶನಕ್ಕೆ ಮುಂದಾಗಿದ್ದು, ಇದರಿಂದಾಗಿ ನಗರತ್ ಪೇಟೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ.

ಘಟನೆಗೆ ಖಂಡನೆ ವ್ಯಕ್ತಪಡಿಸಿರುವ ಹಿಂದೂಪರ ಸಂಘಟನೆಗಳು ಇಂದು ಹಲ್ಲೆಗೊಳಗಾದ ಯುವಕ ಮುಖೇಶ್ ಅಂಗಡಿಯಿಂದ ಭಾಗವಧ್ವಜದೊಂದಿಗೆ ಹನುಮಾನ್ ಚಾಲೀಸ ಪಠಣ ಮಾಡಿಕೊಂಡು ಶಾಂತಿಯುತ ಮೆರವಣಿಗೆಯಲ್ಲಿ ಹಮ್ಮಿಕೊಂಡಿದ್ದರು.

ಇದರಂತೆ ನೂರಾರು ಸಂಖ್ಯೆಯ ಹಿಂದೂಪರ ಕಾರ್ಯಕರ್ತರು ನಗರತ್ ಪೇಟೆಗೆ ಸೇರಿದ್ದರು. ಈ ಮೆರವಣಿಗೆಗೆ ಬಿಜೆಪಿ ನಾಯಕರಾದ ಸುರೇಶ್ ಕುಮಾರ್ ಹಾಗೂ ಶೋಭಾ ಕರಂದ್ಲಾಜೆ ಕೂಡ ಭಾಗಿಯಾಗಿದ್ದರು. ಆದರೆ, ಇದಕ್ಕೆ ಪೊಲೀಸರು ಅವಕಾಶ ನೀಡದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಹಿಂದೂಪರ ಸಂಘಟನೆಯ ಕಾರ್ಯಕರ್ತರೊಂದಿಗೆ ಮಾತಿನ ಚಕಮಕಿ ನಡೆಯಿತು.

ಇದೇ ವೇಳೆ ಪೊಲೀಸರು ಸುರೇಶ್ ಕುಮಾರ್ ಅವರನ್ನು ಎಳೆದಾಡಿದ ಬೆಳವಣಿಗೆ ಕೂಡ ಕಂಡು ಬಂದಿತು. ಪೊಲೀಸರ ಈ ಕ್ರಮದ ವಿರುದ್ಧ ಸುರೇಶ್ ಕುಮಾರ್ ಪ್ರತಿಭಟಿಸಿದರು.

ಬಳಿಕ ಪೊಲೀಸರು ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಹಿಂದೂಪರ ಸಂಘಟನೆಗಳ ಕಾರ್ಯಕರ್ತರನ್ನು ವಶಕ್ಕೆ ಪಡೆದರು.

ಹಲ್ಲೆ ಮಾಡಿದ್ದ ಐವರು ಅರೆಸ್ಟ್​​ ;

ಅಂಗಡಿಯಲ್ಲಿ ಜೋರಾಗಿ ಸೌಂಡ್​ ಇಟ್ಟು ಹನುಮಾನ ಚಾಲಿಸಾ ಹಾಡು ಹಾಕಿದ್ದಕ್ಕೆ ಯುವಕನ ಮೇಲೆ ಹಲ್ಲೆ ಮಾಡಲಾಗಿತ್ತು. ಹಲ್ಲೆ ಮಾಡಿದ್ದ ಐವರು ಆರೋಪಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಗ್ಯಾಂಗ್​ ಹಲ್ಲೆ ಮಾಡುತ್ತಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಇನ್ನು ಗಾಯಗೊಂಡ ಮುಖೇಶ್​ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ​ದೂರು ದಾಖಲಿಸಿದ್ದರು. ಯುವಕನ ದೂರಿನನ್ವಯ, ಹಲ್ಲೆ ಮಾಡಿದ್ದ ಸುಲೇಮಾನ್, ತರುಣ್, ಶನವಾಜ್, ರೋಹಿತ್, ಡ್ಯಾನಿಶ್ ವಿರುದ್ಧ ಪೊಲೀಸರು ಐಪಿಸಿ ಸೆಕ್ಷನ್ 506, 504, 149, 307, 323 ಹಾಗೂ 324ರ ಅಡಿಯಲ್ಲಿ ಐವರ ವಿರುದ್ಧ ಎಫ್​ಐಆರ್​ ದಾಖಲಾಗಿದೆ. ಪ್ರಕರಣ ಸಂಬಂಧ ಐವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

Pro-Hindu organizations in the city have come out for a show of strength in connection with the incident in which a young man was attacked for singing Hanuman Chalisa in a mobile shop in Nagaratpet, resulting in a tense situation in Nagaratpet.