ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಕೊಂಡಿದೆ, ರಾಜ್ಯಾಧ್ಯಕ್ಷರ ಬದಲಾವಣೆಗೆ ಪ್ರಯತ್ನ ಪಡುತ್ತಿದ್ದೇನೆ ; ಈಶ್ವರಪ್ಪ ರೆಬಲ್

20-03-24 03:20 pm       HK News Desk   ಕರ್ನಾಟಕ

ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಕೊಂಡಿದೆ.‌‌ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ.‌ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಮಾಡಲು ರಾಜ್ಯದಲ್ಲಿ ಪ್ರಯತ್ನ ನಡೆಯುತ್ತಿದೆ.

ಶಿವಮೊಗ್ಗ, ಮಾ.20: ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿಕೊಂಡಿದೆ.‌‌ ಸರ್ವಾಧಿಕಾರಿ ಧೋರಣೆ ತೋರುತ್ತಿದ್ದಾರೆ.‌ ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಮಾಡಲು ರಾಜ್ಯದಲ್ಲಿ ಪ್ರಯತ್ನ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ ಎಂದು ಬಂಡಾಯ ಸ್ಪರ್ಧೆಗಿಳಿದಿರುವ ಕೆ.ಎಸ್ ಈಶ್ವರಪ್ಪ ಸ್ಫೋಟಕ ಹೇಳಿಕೆ ನೀಡಿದ್ದಾರೆ. 

ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಜಿಲ್ಲೆಯ ಎಲ್ಲ ಸ್ವಾಮೀಜಿಗಳೂ ಬೆಂಬಲ ಕೊಡ್ತಿದ್ದಾರೆ.‌ ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿಯೂ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕು ತೊಂದರೆ ಆಗಲ್ಲ, ನೂರಕ್ಕೆ ನೂರು ಗೆಲ್ಲುತ್ತಾರೆ ಅಂತಾ ಸ್ವಾಮೀಜಿಗಳು ಹೇಳಿದ್ದಾರೆ. 

ಈ ಹಂತದಲ್ಲಿ ಯಾರೇ ಬಂದು ಮನವೊಲಿಸಿದರೂ ಹಿಂದೆ ಸರಿಯಲ್ಲ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ನಾನು ಸ್ಪರ್ಧೆ ಮಾಡಿದ್ದರೆ ನೂರಕ್ಕೆ ನೂರು ಗೆಲ್ಲುತ್ತಿದ್ದೆ. ಬಿಜೆಪಿ ಈ ಸಲ 27 ಕ್ಷೇತ್ರದಲ್ಲಿ ಗೆಲ್ಲಬೇಕಿದೆ. ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಒಂದು ಕುಟುಂಬದ ವಿರುದ್ಧ ಸ್ಪರ್ಧೆ ಮಾಡಿದ್ದೇನೆ.‌ ನಾನೇ ಗೆಲ್ಲುತ್ತೇನೆ. ಗೆದ್ದ ನಂತರ ಬಿಜೆಪಿಗೆ ಸೇರುತ್ತೇನೆ ಎಂದು ಈಶ್ವರಪ್ಪ ಹೇಳಿದ್ದಾರೆ.

ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಅದಕ್ಕಾಗಿ ನಾವು ಕೆಲಸ ಮಾಡುತ್ತೇವೆ ಎಂದಿದ್ದಾರೆ.

The party is in the hands of one family. They are showing a dictatorial attitude. Efforts are being made in the state to change the BJP state president. I am also making efforts in that direction," eshwarappa, who is contesting as a rebel, said.