ಬ್ರೇಕಿಂಗ್ ನ್ಯೂಸ್
21-03-24 11:41 am HK News Desk ಕರ್ನಾಟಕ
ಶಿವಮೊಗ್ಗ, ಮಾ 21: ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ. ಯಾವುದೇ ಕಾರಣಕ್ಕೂ ಹಿಂದೆ ಸರಿಯುವ ಮಾತಿಲ್ಲ. ನಾನು ಗೆದ್ದ ನಂತರ ವಿಜಯೇಂದ್ರ ತಮ್ಮ ರಾಜ್ಯಾಧ್ಯಕ್ಷರ ಹುದ್ದೆಗೆ ರಾಜೀನಾಮೆ ಕೊಡುವುದು ನಿಶ್ಚಿತ ಎಂದು ಮಾಜಿ ಸಚಿವ ಕೆ.ಎಸ್ ಈಶ್ವಪ್ಪ ಭವಿಷ್ಯ ನುಡಿದಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆಗೆ ಮುಂದಾಗಿರುವ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಅವರಿಂದು ತಮ್ಮ ನಿವಾಸದಲ್ಲಿ ಬೆಂಬಲಿಗರ ಸಭೆ ನಡೆಸಿ, ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಬಿ.ವೈ ರಾಘವೇಂದ್ರನನ್ನ ಸೋಲಿಸಿ, ಬಿಜೆಪಿ ಕಟ್ಟಾ ಅನುಯಾಯಿಯಾದ ನನ್ನನ್ನು ಗೆಲ್ಲಿಸಬೇಕು ಎಂದು ಮನವಿ ಮಾಡಿದ್ದಾರೆ.
ಈಶ್ವರಪ್ಪ ಸ್ಪರ್ಧೆ ಬಗ್ಗೆ ಇಡೀ ರಾಜ್ಯದಲ್ಲಿ ಚರ್ಚೆ ಆಗ್ತಿದೆ. ಲೋಕಸಭೆ ಚುನಾವಣೆಯಲ್ಲಿ ನಾನು ಗೆಲ್ಲುತ್ತೇನೆ. ಚುನಾವಣಾ ಫಲಿತಾಂಶ ಬಂದು ಬಿಜೆಪಿ ಕಾರ್ಯಕರ್ತರ ವಿಜಯವಾಗುತ್ತಿದ್ದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತಮ್ಮ ಹುದ್ದೆಗೆ ರಾಜೀನಾಮೆ ಕೊಡ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ.
ಮುಂದಿನ ಜೂನ್‌ನಲ್ಲೇ ಪರಿಷತ್ ಸ್ಥಾನ ಖಾಲಿ ಆಗುತ್ತದೆ, ನಿಮ್ಮ ಮಗನನ್ನ ಎಂಎಲ್‌ಸಿ ಮಾಡ್ತೀವಿ. ನಿಮಗೆ ರಾಜ್ಯಪಾಲರ ಹುದ್ದೆ ಕೊಡ್ತೀವಿ ಅಂತ ಬಿಜೆಪಿ ಹೈಕಮಾಂಡ್ ನನಗೆ ಆಫರ್ ಕೊಟ್ಟಿದೆ. ನನಗೆ ಯಾವುದೇ ಸ್ಥಾನಮಾನ ಮುಖ್ಯವಲ್ಲ. ನನಗೆ ಸ್ಥಾನಮಾನ ಬೇಡ, ಪಕ್ಷ ಉಳಿಯಬೇಕು, ಬಿಎಸ್‌ವೈ ಕುಟುಂಬದ ಸರ್ವಾಧಿಕಾರದಿಂದ ಮುಕ್ತವಾಬೇಕು ಎಂಬುದಷ್ಟೇ ಮುಖ್ಯ ಎಂದು ಗುಡುಗಿದ್ದಾರೆ.
ಶಿವಮೊಗ್ಗ ಲೋಕಸಭಾ ಕ್ಷೇತ್ರದ 8 ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ಸಿಗುತ್ತಿದೆ. ಸ್ವಾಮೀಜಿಗಳು ಬೆಂಬಲ ಕೊಡ್ತಿದ್ದಾರೆ, ಸಿಗಂಧೂರು ಚೌಡೇಶ್ವರಿ ದೇವಸ್ಥಾನದಲ್ಲಿ ಆಶೀರ್ವಾದ ದೊರೆತಿದೆ. ಯಾವ ಕಾರಣಕ್ಕೂ ತೊಂದರೆ ಆಗಲ್ಲ, ನೂರಕ್ಕೆ ನೂರು ನೀವು ಗೆಲ್ಲುತ್ತೀರಾ ಎಂದು ಸ್ವಾಮೀಜಿಗಳು ಹೇಳಿದ್ದಾರೆಂದು ತಿಳಿಸಿದ್ದಾರೆ
ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಕ್ಕಿದೆ, ಸರ್ವಾಧಿಕಾರಿ ಧೋರಣೆ ಇದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಎಲ್ಲಾ ಕ್ಷೇತ್ರದಲ್ಲಿ ಗೆದ್ದು ಬಿಜೆಪಿ ಅಧಿಕಾರಕ್ಕೆ ಬರಲಿದೆ. ಬಿಜೆಪಿ ರಾಜ್ಯಾಧ್ಯಕ್ಷರು ಬದಲಾವಣೆ ಮಾಡುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ನಾನು ಸಹ ಆ ದಿಕ್ಕಿನಲ್ಲಿ ಪ್ರಯತ್ನ ಮಾಡ್ತಿದ್ದೇನೆ. ಯಾರೇ ಬಂದು ಮನವೊಲಿಸಿದರೂ ಹಿಂದೆ ಸರಿಯಲ್ಲ. ರಾಜ್ಯದಲ್ಲಿ ಈ ಬಾರಿ ಬಿಜೆಪಿ 28 ಸ್ಥಾನ ಗೆಲ್ಲಬೇಕು. ನಾನು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ನಾನು ಕುಟುಂಬದ ವಿರುದ್ಧ ಸ್ಪರ್ಧೆ ಮಾಡಿ ಗೆಲ್ಲುತ್ತೇನೆ, ಗೆದ್ದ ನಂತರ ಬಿಜೆಪಿ ಸೇರುತ್ತೇನೆ ಎಂದು ನುಡಿದಿದ್ದಾರೆ.
Eshwarappa says will make BJP state president Vijayendra resign soon after I win from shivamogga. The entire BJP should be free from this dicator family of B. S. Yediyurappa.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm