ಬ್ರೇಕಿಂಗ್ ನ್ಯೂಸ್
21-03-24 12:10 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ತಮಿಳುನಾಡಿನಿಂದ ಬಂದು ಬಾಂಬ್ ಇಡುತ್ತಾರೆಂಬ ಹೇಳಿಕೆ ಬೆಂಗಳೂರು ಉತ್ತರ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕುತ್ತಿಗೆ ಹಿಡಿದಿದೆ. ನೀತಿ ಸಂಹಿತೆ ಜಾರಿ ಇದ್ದರೂ ಕೋಮು ಭಾಷಣ ಮಾಡಿದ ಆರೋಪದಲ್ಲಿ ಶೋಭಾ ಕರಂದ್ಲಾಜೆ ವಿರುದ್ಧ ಚುನಾವಣಾ ಆಯೋಗ ನೋಟಿಸ್ ಜಾರಿ ಮಾಡಿದೆ. ಡಿಎಂಕೆ ದೂರು ಆಧರಿಸಿ ಚುನಾವಣಾ ಆಯೋಗ ಕ್ರಮಕ್ಕೆ ಮುಂದಾಗಿದೆ.
ಕೇಂದ್ರ ಸಚಿವೆ ಶೋಭಾ ವಿರುದ್ಧ ಚುನಾವಣಾ ಆಯೋಗಕ್ಕೆ ಡಿಎಂಕೆ ನಾಯಕರು ದೂರು ನೀಡಿದ್ದಾರೆ. ಶೋಭಾ ಕರಂದ್ಲಾಜೆ ದ್ವೇಷ ಹರಡುವ ಕೆಲಸ ಮಾಡ್ತಿದ್ದಾರೆ, ಕನ್ನಡಿಗರು-ತಮಿಳಿಗರ ಮಧ್ಯೆ ದ್ವೇಷ ಮೂಡಿಸುತ್ತಿದ್ದಾರೆ. ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸ್ವತಃ ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಆಗ್ರಹಿಸಿದ್ದರು. ಅಲ್ಲದೆ, ಮಧುರೈನಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ. ಇದರ ಬೆನ್ನಲ್ಲೇ ತನ್ನ ಹೇಳಿಕೆ ಬಗ್ಗೆ ಶೋಭಾ ಕರಂದ್ಲಾಜೆ ಸಾಮಾಜಿಕ ಜಾಲತಾಣದಲ್ಲಿ ಕ್ಷಮೆ ಯಾಚಿಸಿದ್ದರು.


ಇದೇ ವೇಳೆ, ಚಿಕ್ಕಪೇಟೆ ಚುನಾವಣಾಧಿಕಾರಿ ನೀಡಿದ ದೂರಿನ ಮೇರೆಗೆ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ದಾಖಲು ಮಾಡಲಾಗಿದೆ. ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಅವರು ಮೊಬೈಲ್ ಶಾಪ್ ಮಾಲೀಕನ ಮೇಲೆ ಹಲ್ಲೆ ಮಾಡಿದ್ದಕ್ಕೆ ನಗರತ್ ಪೇಟೆಯಲ್ಲಿ ಪ್ರತಿಭಟನೆ ಮಾಡಿ ಭಾಷಣ ಮಾಡಿದ್ದರು. ಈ ಸಂಬಂಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 153a, 295a, RP act 123(3a) ಅಡಿಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ತೇಜಸ್ವಿ ಸೂರ್ಯ ಕೋಮು ದ್ವೇಷಕ್ಕೆ ಪ್ರಚೋದನೆ ಮಾಡಿದ್ದಾರೆಂದು ಪೊಲೀಸರಿಗೆ ದೂರು ನೀಡಲಾಗಿದೆ.
Hanuman Chalisa Bangalore, FIR on Shobha Karandlaje, and Tejasvi Surya for violating the rules of the election code of conduct and instigating people to disturb communal harmony in Bangalore.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm