ಬ್ರೇಕಿಂಗ್ ನ್ಯೂಸ್
21-03-24 12:57 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಪಕ್ಷದ ಜವಾಬ್ದಾರಿ ವಹಿಸಿದವರು ಸ್ವಾರ್ಥಿಗಳಾಗಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಕುಟುಂಬ, ಮಕ್ಕಳು, ಜಾತಿ, ತನ್ನವರಿಗೆ ಸೀಮಿತ ಮಾಡಿದ್ದಾರೆ. ಪಕ್ಷಕ್ಕಾಗಿ ದುಡಿದವರನ್ನು ಕಡೆಗಣಿಸುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನು ಶುದ್ಧೀಕರಣ ಮಾಡಲು ಲೋಕಸಭೆ ಚುನಾವಣೆ ಬಳಿಕ ವೇಗ ಕೊಡಲಾಗುವುದು ಎಂದು ಕಾಂಗ್ರೆಸ್ ಸೇರುತ್ತಾರೆ ಎನ್ನಲಾಗಿದ್ದ ಮಾಜಿ ಸಿಎಂ ಡಿವಿ ಸದಾನಂದ ಗೌಡ ಹೇಳಿದ್ದಾರೆ.
ಕಾಂಗ್ರೆಸ್‌ನಿಂದ ನನಗೆ ಆಹ್ವಾನ ಬಂದಿರುವುದು ನಿಜ. ಟಿಕೆಟ್ ಕೊಟ್ಟು ನಿಮ್ಮನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದು ಆಹ್ವಾನ ಬಂದಿತ್ತು. ಆದರೆ ನಾನು, ಕಾಂಗ್ರೆಸ್ ಸೇರಲ್ಲ ಎಂದು ಮಾಜಿ ಸಿಎಂ ಡಿವಿ ಸದಾನಂದ ಗೌಡ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಸಂಜಯ ನಗರ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮತ್ತೊಮ್ಮೆ ತನ್ನ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿದರು. ಟಿಕೆಟ್ ಕೈತಪ್ಪಿದ್ದರಿಂದ ನೋವಾಗಿದ್ದು ನಿಜ. ಆದರೆ ನನ್ನ ಈ ಸ್ಥಿತಿಗೆ ಕಾರಣರಾದವರು ಪಶ್ಚಾತ್ತಾಪ ಅನುಭವಿಸುತ್ತಾರೆ ಎಂದು ಶಾಪ ಹಾಕಿದರು.
ರಾಜ್ಯದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರವಾದ ವಾತಾವರಣ ಸೃಷ್ಟಿಯಾಗಬೇಕು. ಅವರು ಪರಿವರ್ತನೆಯ ಹರಿಕಾರ. ಮತ್ತೊಮ್ಮೆ ಮೋದಿ ಪ್ರಧಾನಿ ಆಗಬೇಕು. ಮೋದಿ ಹೇಳಿದಂತೆ ಪರಿವಾರವಾದ, ಭ್ರಷ್ಟಾಚಾರವಾದ, ಜಾತಿವಾದ ಮುಕ್ತವಾದ ಪಕ್ಷ ಬಿಜೆಪಿ ಆಗಬೇಕು. ಶುದ್ದೀಕರಣದ ಅಭಿಯಾನಕ್ಕೆ ವೇಗ ಕೊಡಲು ನನ್ನಿಂದ ಮಾತ್ರ ಸಾಧ್ಯ. ಪಕ್ಷದಲ್ಲಿ ಒಂದಷ್ಟು ಜನರು ಶುದ್ಧೀಕರಣ ಬಯಸುತ್ತಿದ್ದಾರೆ. ಅವರನ್ನು ಕ್ರೋಢೀಕರಿಸಲಾಗುತ್ತದೆ ಎಂದು ಡಿವಿಎಸ್ ಹೇಳಿದರು.
ಆಡಳಿತ ಮಾಡುವವರು ಸತ್ಯವಂತರಾಗಬೇಕು. ಬೆಂಗಳೂರು ಉತ್ತರದಲ್ಲಿ ಟಿಕೆಟ್‌ಗಾಗಿ ನನ್ನ ಒಬ್ಬನ ಹೆಸರು ಮಾತ್ರ ಇತ್ತು. 142 ಜನರು ನನ್ನ ಹೆಸರನ್ನು ಆಯ್ಕೆ ಮಾಡಿದ್ದರು. ಆದರೆ ಇದನ್ನು ಕೇಂದ್ರದಲ್ಲಿ ಮಂಡನೆ ಮಾಡಲು ಸಾಧ್ಯವಾಗದವರು ನಮ್ಮ ನಾಯಕರಾಗಲ್ಲ. ಕೆ.ಎಸ್ ಈಶ್ವರಪ್ಪ ಈಗಾಗಲೇ ಹಲವಾರು ಸಂಗತಿಗಳನ್ನು ಹೇಳಿದ್ದಾರೆ. ಮುಂದೆ ನಮ್ಮ ಅಹವಾಲನ್ನು ಕೇಂದ್ರ ನಾಯಕರಿಗೆ ತಿಳಿಸುತ್ತೇವೆ ಎಂದರು.
Senior Bharatiya Janata Party leader and former Karnataka Chief Minister DV Sadananda Gowda has quit politics after being snubbed for the upcoming Lok Sabha elections, he said at a press conference in Bengaluru on Thursday.
19-05-25 04:00 pm
HK News Desk
Bjp, Radha Mohan Das Agarwal: 1971ರ ಯುದ್ಧ ಗೆಲ...
17-05-25 01:44 pm
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
19-05-25 02:25 pm
HK News Desk
ಚಾರ್ಮಿನಾರ್ ಬಳಿಯ ಗುಲ್ಜಾರ್ ಹೌಸ್ನಲ್ಲಿ ಬೆಂಕಿ ಅವ...
19-05-25 01:46 pm
Brijesh Chowta, Tejaswi Surya: ಪಾಕ್ ಪ್ರೇರಿತ ಭ...
18-05-25 08:23 pm
ಪಾಕ್ ಪರವಾಗಿ ಬೇಹುಗಾರಿಕೆ ; ಭಾರತೀಯ ಸೇನಾ ಮಾಹಿತಿ ಸ...
17-05-25 10:51 pm
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
19-05-25 12:31 pm
Mangalore Correspondent
Akanksha Death, Punjab, Dharmasthala, Mangalo...
18-05-25 12:42 pm
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
19-05-25 03:35 pm
HK News Desk
Reshma Bariga, FIR, Mangalore; ಆಪರೇಶನ್ ಸಿಂಧೂರ...
18-05-25 07:45 pm
Suhas Shetty, BJP Corporator Shweta Poojary,...
18-05-25 07:35 pm
Bangalore Cigarette Murder, Video Viral: ಕಾರಿ...
17-05-25 05:00 pm
Mangalore Stabbing, Panemangalore, Crime, Att...
16-05-25 11:06 pm