ಬ್ರೇಕಿಂಗ್ ನ್ಯೂಸ್
21-03-24 10:56 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.21: ಮೆಟ್ರೋ ರೈಲು ಸಂಚರಿಸುತ್ತಿದ್ದ ವೇಳೆಯೇ ಹಳಿಗೆ ಹಾರಿ ಮುಂಬೈ ಮೂಲದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿದ್ದಾನೆ. ಬೆಂಗಳೂರಿನ ಅತ್ತಿಗುಪ್ಪೆ ಮೆಟ್ರೋ ರೈಲು ನಿಲ್ದಾಣದಲ್ಲಿ ಘಟನೆ ಸಂಭವಿಸಿದೆ. ಮೃತ ಯುವಕನನ್ನು ಮಹಾರಾಷ್ಟ್ರ ಮೂಲದ ಧೃವ್ ಠಕ್ಕರ್(19) ಎಂದು ಗುರುತಿಸಲಾಗಿದೆ.
ಮಧ್ಯಾಹ್ನ 2.10ಕ್ಕೆ ಘಟನೆ ನಡೆದಿದ್ದು, ಅತ್ತಿಗುಪ್ಪೆ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುವಾಗ ವಿದ್ಯಾರ್ಥಿ ಫೋನಲ್ಲಿ ಮಾತಾಡುತ್ತಲೇ ಹಳಿ ಮೇಲೆ ಹಠಾತ್ ಜಿಗಿದಿದ್ದಾನೆ. ರೈಲು ಆತನ ಮೇಲೆ ಹರಿದಿದ್ದು, ರುಂಡ ಮುಂಡ ಬೇರೆಯಾಗಿತ್ತು. ಅಧಿಕಾರಿಗಳು ಶವವನ್ನು ತೆಗೆಯಲು ಹರಸಾಹಸ ಪಟ್ಟಿದ್ದಾರೆ.
ಇದರಿಂದಾಗಿ ಕೆಲಹೊತ್ತು ಮಾಗಡಿ ರಸ್ತೆಯಿಂದ ಚಲ್ಲಘಟ್ಟದ ವರೆಗೆ ಮೆಟ್ರೋ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. ಪೊಲೀಸರು ಸ್ಥಳ ಮಹಜರು ನಡೆಸಿ ಹಳಿ ಮೇಲೆ ಬಿದ್ದಿದ್ದ ದೇಹದ ಭಾಗಗಳನ್ನು ಸಂಗ್ರಹಿಸಿ ಆಸ್ಪತ್ರೆಗೆ ರವಾನಿಸಿದರು. ಯುವಕ ಬೆಂಗಳೂರಿನ ಕಾನೂನು ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ.
ಘಟನೆಗೆ ಸಂಬಂಧಿಸಿ ಚಂದ್ರಾಲೇಔಟ್ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದು ಆತ್ಮಹತ್ಯೆಯೋ, ಅಲ್ಲವೋ ಎನ್ನುವ ಕುರಿತು ಸಿಸಿಟಿವಿ ಫೂಟೇಜ್ ಸಹಿತ ಪ್ರತ್ಯಕ್ಷದರ್ಶಿಗಳಿಂದ ವಿವರ ಪಡೆದಿದ್ದಾರೆ.
A Mumbai-based student allegedly committed suicide by jumping off the tracks while the metro train was on its way. The incident took place at Athiguppe metro station in Bengaluru. The deceased has been identified as Dhruv Thakkar (19), a native of Maharashtra.
15-10-26 02:30 pm
HK News Staffer
108 ಆಂಬುಲೆನ್ಸ್ ಸ್ಥಗಿತಗೊಳಿಸಿ ಮುಷ್ಕರ ; 108 ಸೇವೆ...
14-10-26 02:02 pm
Siddaramaiah: ಸಿದ್ದರಾಮಯ್ಯ ವಿರುದ್ಧ ನಕಲಿ ಸ್ಟಿಂ...
14-10-26 10:35 am
Siddaramaiah: ವಿವಾದಿತ ವಿಡಿಯೋ ಹಂಚಿಕೆ ; ಮಾನಹಾನಿ...
13-10-26 04:53 pm
ಹಿರಿಯ ಐಪಿಎಸ್ ಅಧಿಕಾರಿ, ಕೆಎಸ್ ಆರ್ ಪಿ ಎಡಿಜಿಪಿ ಎಸ...
13-10-26 03:49 pm
14-10-26 04:59 pm
HK News Staffer
BMW Car News: ಟೈರ್ ಪಂಕ್ಚರ್ ಆಗಿದ್ದಕ್ಕೆ ರಸ್ತೆ ಬ...
14-10-26 12:54 pm
16 ವರ್ಷದ ಬಾಲಕಿಗೆ ರೋಬೋಟ್ ನಿಂದ ಲೈಂಗಿಕ ಕಿರುಕುಳ!...
14-10-26 10:57 am
ರಾಜಧಾನಿ ದೆಹಲಿಯ ಜಂತರ್ ಮಂತರ್ ನಲ್ಲಿ ಇನ್ನು ಮುಂದೆ...
12-10-26 05:22 pm
ಅಕ್ಟೋಬರ್ 7ರ ದಾಳಿ ಸೂತ್ರಧಾರ ಹಮಾಸ್ ಕಮಾಂಡರ್ ಅಬು ಜ...
11-10-26 10:28 pm
15-10-26 06:46 pm
HK News Desk
ನವರಾತ್ರಿ ನೆಪದಲ್ಲಿ ಕುಡ್ಲದ ತುಂಬ ಫ್ಲೆಕ್ಸ್ಗಳದ್ದೇ...
15-10-26 03:30 pm
Sudheer Reddy, Agnes College, ABVP: ಭಾರತ ಮಾತೆ...
15-10-26 12:19 pm
Mangalore Agnes College Protest, ABVP: ಮಂಗಳೂರ...
14-10-26 10:45 pm
UT Khader, News, Mangalore: ನವರಾತ್ರಿ ನೆಪದಲ್ಲಿ...
14-10-26 08:40 pm
15-10-26 05:06 pm
HK News Staffer
Mangaluru Valencia St. Vincent Church Priest...
14-10-26 09:09 pm
Mangalore Valencia Church, Fr Cyprian Pinto:...
14-10-26 08:55 pm
ಒಡಿಶಾದಿಂದ ಕೇರಳಕ್ಕೆ ಡ್ರಗ್ಸ್ ಸಪ್ಲೈ ; ₹1.78 ಕೋಟಿ...
14-10-26 12:23 pm
ಕೌಟುಂಬಿಕ ಕಲಹ ; ಇಬ್ಬರು ಮಕ್ಕಳೊಂದಿಗೆ ತುಂಗಭದ್ರಾ ಕ...
14-10-26 12:21 pm