Shivamogga, Congress Ayanur Manjunath: ನೈರುತ್ಯ ಪದವೀಧರ ಕ್ಷೇತ್ರ ; ಕಾಂಗ್ರೆಸ್ ಅಭ್ಯರ್ಥಿಯಾಗಿ ಆಯನೂರು ಮಂಜುನಾಥ್, ಬಿಜೆಪಿಯಲ್ಲಿ ಯಾರು ? 

22-03-24 05:21 pm       HK News Desk   ಕರ್ನಾಟಕ

ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ‌.‌

ಶಿವಮೊಗ್ಗ, ಮಾ.22: ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಅಭ್ಯರ್ಥಿಯಾಗಿ ಕೆಪಿಸಿಸಿ ವಕ್ತಾರ ಆಯನೂರು ಮಂಜುನಾಥ್ ಅವರನ್ನು ಕಾಂಗ್ರೆಸ್ ಆಯ್ಕೆ ಮಾಡಿದೆ‌.‌

ಕಳೆದ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿಯಿಂದ ಕಾಂಗ್ರೆಸ್ ಸೇರಿದ್ದ ಆಯನೂರು ಅವರಿಗೆ ಕಾಂಗ್ರೆಸ್ ಅಭ್ಯರ್ಥಿಯಾಗಿಸಿದ್ದು ಗೊಂದಲಕ್ಕೆ ತೆರೆಬಿದ್ದಿದೆ.‌ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಣೆ ಮಾಡಿದ್ದಾರೆ. 

ಈ ಹಿಂದೆಯೂ ಆಯನೂರು ಮಂಜುನಾಥ್ ನೈರುತ್ಯ ಪದವೀಧರ ಕ್ಷೇತ್ರದಿಂದ ಬಿಜೆಪಿಯಿಂದ ಆಯ್ಕೆಯಾಗಿ ಶಾಸಕರಾಗಿದ್ದರು. 2023 ರ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ಒಳಗಡೆ ಈಶ್ವರಪ್ಪ ನಡುವೆ ಸಿಟ್ಟುಗೊಂಡು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸೀಟು ಸಿಗದೆ ಜೆಡಿಎಸ್ ಪಕ್ಷದಿಂದ ಸ್ಪರ್ಧಿಸಿದ್ದರು.

ಮುಂದಿನ ಜೂನ್ ತಿಂಗಳಲ್ಲಿ ನೈರುತ್ಯ ಪದವೀಧರ ಕ್ಷೇತ್ರ ಸೇರಿದಂತೆ ಹತ್ತಕ್ಕೂ ಹೆಚ್ಚು ವಿಧಾನ ಪರಿಷತ್ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಕಾಂಗ್ರೆಸ್ ಅಭ್ಯರ್ಥಿ ಹೆಸರನ್ನು ಲೋಕಸಭೆ ಚುನಾವಣೆ ನಡುವಲ್ಲೇ ಪ್ರಕಟಿಸಿದ್ದು ಪ್ರಚಾರಕ್ಕೆ ಇಳಿಯುವಂತೆ ಸೂಚನೆ ನೀಡಿದೆ. ಬಿಜೆಪಿಯಿಂದ ಮಾಜಿ ಶಾಸಕ ರಘುಪತಿ ಭಟ್ ಆ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಆದರೆ ಲೋಕಸಭೆ ಚುನಾವಣೆ ಮುಗಿಯದೆ ಟಿಕೆಟ್ ಘೋಷಣೆ ಕಷ್ಟ.

The Congress party has announced Ayanur Manjunath as its candidate for the South-West graduate constituency of the Vidhan Parishad. This decision comes after Manjunath resigned from his Parishad membership, joined the JDS, and contested, but lost, in the last assembly elections due to not receiving a BJP ticket from the Shimoga constituency.