ಬ್ರೇಕಿಂಗ್ ನ್ಯೂಸ್
23-03-24 06:48 pm HK News Desk ಕರ್ನಾಟಕ
ಶಿವಮೊಗ್ಗ, ಮಾ.23: ‘ಬ್ರಹ್ಮ ಬಂದು ಸಂಧಾನ ನಡೆಸಿದರೂ ನಾನು ಸ್ಪರ್ಧೆಯಿಂದ ಹಿಂದೆ ಸರಿಯುವುದಿಲ್ಲ’ ಎಂದು ಮಾಜಿ ಡಿಸಿಎಂ ಕೆಎಸ್ ಈಶ್ವರಪ್ಪ ಸ್ಪಷ್ಟಪಡಿಸಿದರು.
ಮಲ್ಲೇಶ್ವರ ನಗರದಲ್ಲಿರುವ ತಮ್ಮ ಗೃಹ ಕಚೇರಿಯಲ್ಲಿ ಶನಿವಾರ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, "ನನ್ನ ಸ್ಪರ್ಧೆ ಬಗ್ಗೆ ಮತದಾರರಲ್ಲಿ ಗೊಂದಲ ಸೃಷ್ಟಿಸುವ ಪ್ರಯತ್ನ ನಡೆಯುತ್ತಿದೆ. ಯಾರೇ ಬಂದು ಕೇಳಿದರೂ ನಾನು ಸ್ಪರ್ಧೆ ತೀರ್ಮಾನ ವಾಪಸ್ಸು ಪಡೆಯುವ ಪ್ರಶ್ನೆಯೇ ಇಲ್ಲ," ಎಂದು ಕಡ್ಡಿ ಮುರಿದಂತೆ ಹೇಳಿದರು.
ಬಂಡಾಯ ಸ್ಪರ್ಧೆ ಬಳಿಕ ಯಡಿಯೂರಪ್ಪ, ಅವರ ಕುಟುಂಬದವರು, ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ ಯಾರೂ ಕರೆ ಮಾಡಿಲ್ಲ. ನಾನು ಯಾರಿಗೂ ಬಗ್ಗಲ್ಲ. ರಾಜ್ಯದ 27 ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲುತ್ತದೆ. 28ನೇ ಎಂಪಿಯಾಗಿ ನಾನು ಗೆದ್ದು ನರೇಂದ್ರ ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿ ಮಾಡುತ್ತೇವೆ ಎಂದರು.
"ಬಂಡಾಯ ಸ್ಪರ್ಧೆ ಘೋಷಣೆ ಬಳಿಕ ಲೋಕಸಭೆ ಕ್ಷೇತ್ರದ ಎಲ್ಲ ವಿಧಾನಸಭೆ ಕ್ಷೇತ್ರಗಳಿಗೂ ಭೇಟಿ ನೀಡಿದ್ದೇನೆ. ಎಲ್ಲ ಕಡೆಯಿಂದಲೂ ನಿರೀಕ್ಷೆಗೂ ಮೀರಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಿಂದುತ್ವವಾದಿಗಳು, ಯಡಿಯೂರಪ್ಪ ಕುಟುಂಬದ ವಿರೋಧಿಗಳು, ಕಾಂಗ್ರೆಸ್ ಮತ್ತು ಜೆಡಿಎಸ್‌ನವರು ಖುದ್ದಾಗಿ ಕರೆ ಮಾಡಿ ನಿಮ್ಮ ವಿಚಾರ ಮತ್ತು ಸಿದ್ಧಾಂತಗಳನ್ನು ಮೆಚ್ಚಿ ಸಂಪೂರ್ಣ ಸಹಕಾರ ನೀಡುವುದಾಗಿ ಹೇಳಿದ್ದಾರೆ," ಎಂದು ವಿವರಿಸಿದರು.
"ಅವರ ಭಾವನೆಗಳಲ್ಲಿ ಯಡಿಯೂರಪ್ಪ ವಿರುದ್ಧದ ಕೋಪ, ನನ್ನ ಬಗ್ಗೆ ಪ್ರೀತಿ ಕಾಣುತ್ತಿದೆ. ಯಾವುದೇ ಕಾರಣಕ್ಕೆ ಮುಂದಿಟ್ಟ ಹೆಜ್ಜೆಯನ್ನು ಹಿಂತೆಗೆಯಬಾರದು ಎಂದು ಮನವಿ ಮಾಡಿದ್ದಾರೆ. ಇದರಿಂದ ಚುನಾವಣೆಯಲ್ಲಿ ನೂರಕ್ಕೆ ನೂರು ಗೆಲ್ಲುವ ವಿಶ್ವಾಸ ಮೂಡಿಸಿದೆ," ಎಂದು ಭರವಸೆ ವ್ಯಕ್ತಪಡಿಸಿದರು.
ರಾಷ್ಟ್ರ ಭಕ್ತರ ಬಳಗದ ಹೆಸರಲ್ಲಿ ಪ್ರಚಾರ ಆರಂಭಿಸಲಾಗಿದ್ದು ಮಾ. 28ರಂದು ಬೆಳಗ್ಗೆ 11ಗಂಟೆಗೆ ತಮ್ಮ ಮನೆ ಆವರಣದಲ್ಲೇ ಚುನಾವಣೆ ಕಚೇರಿಯನ್ನು ತೆರೆಯಲಾಗುವುದು. ಐವರು ಹಿಂದೂ ಪ್ರಮುಖರು ಕಚೇರಿಯನ್ನು ಉದ್ಘಾಟಿಸುವರು. ಅದಕ್ಕೆ ಮೊದಲು ಮಾ. 26ರಂದು ಬೆಳಗ್ಗೆ 11 ಗಂಟೆಗೆ ಶಿವಮೊಗ್ಗ ನಗರ ಮತ್ತು ಗ್ರಾಮಾಂತರ ಕ್ಷೇತ್ರಗಳ ಬೂತ್ ಮಟ್ಟದ ಸಮಾವೇಶ ನಡೆಸಲಾಗುವುದು ಎಂದು ಈಶ್ವರಪ್ಪ ತಿಳಿಸಿದರು.
ಲೋಕಸಭೆ ಚುನಾವಣೆ ಬಳಿಕ ಬಿಜೆಪಿಯಲ್ಲಿ ಬಹಳಷ್ಟು ಬದಲಾವಣೆಗಳು ಘಟಿಸಲಿವೆ. ಒಂದೇ ಕುಟುಂಬದ ಹಿಡಿತದಿಂದ ಬಿಜೆಪಿ ಹೊರಬರುತ್ತದೆ. ಯಡಿಯೂರಪ್ಪ ಪುತ್ರ ಬಿವೈ ರಾಘವೇಂದ್ರಗೆ ಸೋಲಾಗುವುದು ಖಚಿತ. ಬಿವೈ ವಿಜಯೇಂದ್ರ ರಾಜೀನಾಮೆ ನೀಡಬೇಕಾಗುತ್ತದೆ. ಆಗ ಕುಟುಂಬದ ಹಿಡಿತ ಕೈತಪ್ಪಿ ನಿಷ್ಠಾವಂತ ಕಾರ್ಯಕರ್ತರು ಮತ್ತು ಮುಖಂಡರಿಗೆ ಅವಕಾಶಗಳು ಸಿಗಲಿವೆ ಎಂದು ಕೆಎಸ್ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಹಾನಗರ ಪಾಲಿಕೆ ಮಾಜಿ ಮೇಯರ್‌ಗಳಾದ ಸುವರ್ಣಾ ಶಂಕರ್, ಏಳುಮಲೈ, ಮಾಜಿ ಉಪ ಮೇಯರ್‌ಗಳಾದ ಶಂಕರ ಗನ್ನಿ, ಲಕ್ಷ್ಮಿಶಂಕರನಾಯ್ಕ್, ಸದಸ್ಯ ಇ ವಿಶ್ವಾಸ್, ಮಹಾಲಿಂಗಶಾಸ್ತ್ರಿ ಮತ್ತಿತರರು ಇದ್ದರು.
Eshwarappa says will contest independently even if God says don't, Eshwarappa turns angry on BJP Leaders. Raghavendra losing MP elections is for sure. People of shivamogga will sure make me Victorious he added.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm