ಬ್ರೇಕಿಂಗ್ ನ್ಯೂಸ್
23-03-24 10:45 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.23: ರಾಜ್ಯಕ್ಕೆ ಎನ್‌ಡಿಆರ್‌ಎಫ್ ನಿಧಿ, ಬರ ಪರಿಹಾರದ ಹಣವನ್ನು ತಕ್ಷಣ ಬಿಡುಗಡೆಗೊಳಿಸಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಬಾಗಿಲು ಬಡಿದಿದ್ದೇವೆ. ಇವತ್ತು ಕೊಡ್ತಾರೆ, ನಾಳೆ ಕೊಡ್ತಾರೆ ಅಂತ ಐದು ತಿಂಗಳು ಕಾದಿದ್ದು ಈಗ ಕೋರ್ಟ್ ಮೆಟ್ಟಿಲೇರದೆ ಬೇರೆ ದಾರಿ ಇರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರದಿಂದ ನಮ್ಮ ಪಾಲಿನ ಪರಿಹಾರ ಬರುತ್ತದೆ ಎಂದು ಕಾದು ಕಾದು ಸಾಕಾಗಿತ್ತು. ಸಂವಿಧಾನದ ಪರಿಚ್ಛೇದ 32ರ ಅಡಿಯಲ್ಲಿ ನಾವು ನಮ್ಮ ಕಾನೂನುಬದ್ಧ ಹಕ್ಕನ್ನು ಚಲಾಯಿಸಿ ಕೋರ್ಟ್ ಮೆಟ್ಟಿಲೇರಿದ್ದೇವೆ ಎಂದರು.
ಬರ, ಅತಿವೃಷ್ಟಿಯಂತಹ ಸಂದರ್ಭದಲ್ಲಿ ಜನರಿಗೆ ತುರ್ತಾಗಿ ಸ್ಪಂದಿಸಬೇಕು ಎನ್ನುವ ಉದ್ದೇಶದಿಂದಲೇ ವಿಪತ್ತು ನಿರ್ವಹಣಾ ಕಾನೂನು ಮಾಡಲಾಗಿದೆ. ಆದರೆ, ಕಾನೂನು ಬದ್ದವಾಗಿ ನಮಗೆ ಬರಬೇಕಾದ ಹಣದಲ್ಲಿ ಒಂದು ಪೈಸೆಯನ್ನೂ ಕೇಂದ್ರ ಕೊಟ್ಟಿಲ್ಲ. ನಾವು ಒಕ್ಕೂಟ ವ್ಯವಸ್ಥೆಯಲ್ಲಿ ಇದ್ದೇವೆ. ರಾಜ್ಯದಲ್ಲಿ 240 ತಾಲೂಕುಗಳಲ್ಲಿ 223 ತಾಲೂಕುಗಳನ್ನು ಬರ ಪೀಡಿತ ಅಂತ ಘೋಷಿಸಲಾಗಿದೆ. ನಾಲ್ಕು ಬಾರಿ ಮೌಲ್ಯಮಾಪನ ಮಾಡಿದ್ದೇವೆ. 48 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ಬೆಳೆ ನಷ್ಟ ಆಗಿದೆ. 3 ಬಾರಿ ಸತತವಾಗಿ ಕೇಂದ್ರಕ್ಕೆ ಮನವಿ ಪತ್ರ ಬರೆದಿದ್ದರೂ ಕೇಂದ್ರ ಸರ್ಕಾರ ಗಮನ ಕೊಟ್ಟಿಲ್ಲ ಎಂದರು.
ನಿಯಮ ಪ್ರಕಾರ ರಾಜ್ಯ ಸರ್ಕಾರ ಮನವಿ ಮಾಡಿದ ವಾರದಲ್ಲಿ ಕೇಂದ್ರದ ತಂಡ ಬರಬೇಕು. ಆದರೆ, ಅಕ್ಟೋಬರ್‌ನಲ್ಲಿ ಕೇಂದ್ರ ತಂಡ ರಾಜ್ಯಕ್ಕೆ ಬಂದು ಪರಿಶೀಲನೆ ನಡೆಸಿ ವರದಿ ನೀಡಿದೆ. ವರದಿ ಕೊಟ್ಟ ಒಂದು ತಿಂಗಳಲ್ಲಿ ರಾಜ್ಯಕ್ಕೆ ಬರ ಪರಿಹಾರ ಕೊಡುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಬೇಕಿತ್ತು. ಆದರೆ, ಇದುವರೆಗೂ ಕೇಂದ್ರ ರಾಜ್ಯದ ಜನರಿಗೆ ಸ್ಪಂದಿಸಿಲ್ಲ ಎಂದು NDRF ನಿಯಮಾವಳಿಗಳನ್ನು ಮಾಧ್ಯಮಗಳ ಎದುರಿಗೆ ಓದಿದರು.
Tired of waiting for drought relief funds, the Congress-ruled Karnataka government has dragged the Union government to the Supreme Court seeking release of the financial aid that has not come for several months.The state government on Saturday filed a writ petition before the Supreme Court under Article 32 of the Constitution. The government has sought financial aid under the National Disaster Response Fund (NDRF).
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 10:40 pm
Mangalore Correspondent
Udupi Rain, Fishermen Missing: ಉಡುಪಿ ; ಭಾರೀ ಗ...
15-07-25 10:13 pm
Kmc Manipal Hospital, Mangalore, Health Card:...
15-07-25 07:19 pm
Karkala Parashurama Theme Park: ಕಾರ್ಕಳ ಪರಶುರಾ...
15-07-25 02:28 pm
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
15-07-25 10:57 pm
HK News Desk
Lawrence Bishnoi, Bangalore, Crime: ಡಾನ್ ಲಾರೆ...
15-07-25 06:52 pm
Mangalore, Moodbidri college, Rape, Blackmail...
15-07-25 06:07 pm
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm