Anath Kumar Hegde, Jagadish Shettar, BJP list: 'ಬೆಂಕಿ ಚೆಂಡು' ಸಂಸದ ಅನಂತ ಹೆಗಡೆ ಔಟ್ ; ಉತ್ತರ ಕನ್ನಡಕ್ಕೆ ಕಾಗೇರಿ, ಬೆಳಗಾವಿಗೆ ಜಗದೀಶ್ ಶೆಟ್ಟರ್, ಚಿಕ್ಕಬಳ್ಳಾಪುರಕ್ಕೆ ಸುಧಾಕರ್, ಚಿತ್ರದುರ್ಗ ವೇಟಿಂಗ್ ಲಿಸ್ಟ್ ! ಕಂಗನಾಗೆ ಟಿಕೆಟ್, ವರುಣ್  ಗಾಂಧಿಗೆ ಡೌಟ್

24-03-24 10:17 pm       Bangalore Correspondent   ಕರ್ನಾಟಕ

ಬಿಜೆಪಿ ಐದನೇ ಪಟ್ಟಿಯಲ್ಲಿ 111 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಅಂತಿಮಗೊಳಿಸಿದೆ. ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಘೋಷಣೆ ಮಾಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನ ಬಾಕಿ ಉಳಿಸಿಕೊಂಡಿದೆ. 

ಬೆಂಗಳೂರು, ಮಾ.24: ಬಿಜೆಪಿ ಐದನೇ ಪಟ್ಟಿಯಲ್ಲಿ 111 ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಿಸಿದ್ದು ರಾಜ್ಯದ ನಾಲ್ಕು ಕ್ಷೇತ್ರಗಳ ಅಭ್ಯರ್ಥಿ ಅಂತಿಮಗೊಳಿಸಿದೆ. ಬೆಳಗಾವಿ, ಉತ್ತರ ಕನ್ನಡ, ಚಿಕ್ಕಬಳ್ಳಾಪುರ, ರಾಯಚೂರು ಕ್ಷೇತ್ರಗಳಿಗೆ ಹೊಸ ಮುಖಗಳನ್ನು ಘೋಷಣೆ ಮಾಡಿದೆ. ಚಿತ್ರದುರ್ಗ ಲೋಕಸಭಾ ಕ್ಷೇತ್ರವನ್ನ ಬಾಕಿ ಉಳಿಸಿಕೊಂಡಿದೆ. 

ಬೆಳಗಾವಿಯ ಹಾಲಿ ಸಂಸದೆ ಮಂಗಳಾ ಅಂಗಡಿ ಅವರಿಗೆ ಟಿಕೆಟ್‌ ಕೈತಪ್ಪಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರಿಗೆ ಅಲ್ಲಿನ ಟಿಕೆಟ್‌ ನೀಡಲಾಗಿದೆ. ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಮಾಜಿ ಸಚಿವ ಡಾ.ಕೆ ಸುಧಾಕರ್‌ ಗೆ ಟಿಕೆಟ್‌ ನೀಡಿದ್ದಾರೆ, ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ, ಹಿಂದು ಫೈರ್ ಬ್ರಾಂಡ್ ಅನಂತ್‌ ಕುಮಾರ್ ಹೆಗಡೆಗೆ ಟಿಕೆಟ್‌ ಕೊಕ್ ನೀಡಿದ್ದು, ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್‌ ನೀಡಲಾಗಿದೆ. ರಾಯಚೂರಿನಿಂದ ರಾಜಾ ಅಮರೇಶ್ವರ ನಾಯಕ ಅವರಿಗೆ ಹೈಕಮಾಂಡ್‌ ಟಿಕೆಟ್‌ ನೀಡಿದೆ. 

Vishweshwar Hegde Kageri

Karnataka Medical Education Minister K Sudhakar's father, domestic help  test positive for coronavirus

Jagadish Shettar to contest from Belagavi: Sitting MP Mangala | Bengaluru -  Hindustan Times

ಕರ್ನಾಟಕದ 28 ಲೋಕಸಭಾ ಕ್ಷೇತ್ರಗಳ ಫೈಕಿ 20 ಕ್ಷೇತ್ರಗಳ ಅಭ್ಯರ್ಥಿಗಳನ್ನ ಎರಡು ವಾರಗಳ ಹಿಂದೆಯೇ ಘೋಷಿಸಿತ್ತು. ಇದೀಗ ನಾಲ್ಕು ಕ್ಷೇತ್ರಗಳ ಅಭ್ಯರ್ಥಿಯನ್ನ ಘೋಷಿಸಿದ್ದು, ಇನ್ನೂ ಒಂದು ಕ್ಷೇತ್ರದಲ್ಲಿ ಅಭ್ಯರ್ಥಿ ಘೋಷಣೆ ಬಾಕಿ ಉಳಿಸಿದೆ. ಚಿತ್ರದುರ್ಗ ಕ್ಷೇತ್ರದಿಂದ ಗೋವಿಂದ ಕಾರಜೋಳ ಹೆಸರನ್ನು ರಾಜ್ಯ ನಾಯಕರು ಶಿಫಾರಸು ಮಾಡಿದ್ದರು. ಆದರೆ ಈ ಹೆಸರನ್ನು ಅಂತಿಮಗೊಳಿಸಲು ಹೈಕಮಾಂಡ್ ನಾಯಕರು ಒಪ್ಪಿಗೆ ನೀಡಿಲ್ಲ. 

ಉಳಿದಂತೆ ಐದನೇ ಪಟ್ಟಿಯಲ್ಲಿ ಉತ್ತರ ಪ್ರದೇಶದ ಮಂಡಿ ಕ್ಷೇತ್ರದಿಂದ ನಟಿ ಕಂಗನಾ ರನೌತ್, ಮೇನಕಾ ಗಾಂಧಿ ಸುಲ್ತಾನ್ ಪುರ, ರಾಮಾಯಣ ನಟ ಅರುಣ್ ಗೋವಿಲ್ ಮೀರತ್, ಜಿತಿನ್ ಪ್ರಸಾದ್ ಫಿಲಿಬಿತ್, ರವಿಶಂಕರ್ ಪ್ರಸಾದ್ ಪಾಟ್ನಾದಿಂದ ಟಿಕೆಟ್ ಗಿಟ್ಟಿಸಿದ್ದಾರೆ. ಮೇನಕಾ ಪುತ್ರ ಅರುಣ್ ಗಾಂಧಿಗೆ ಇನ್ನೂ ಟಿಕೆಟ್ ಘೋಷಣೆ ಆಗಿಲ್ಲ. ಬಿಜೆಪಿಯಿಂದ ಅಂತರ ಕಾಯ್ದುಕೊಂಡಿರುವ ಅರಣ್ ಟಿಕೆಟ್ ಸಿಗದೇ ಇದ್ದರೆ ಪಕ್ಷೇತರ ಸ್ಪರ್ಧೆಗೆ ಒಲವು ಹೊಂದಿದ್ದಾರೆ.

Anath Kumar Hegde mp ticket missed for uttar karnataka, Jagadish Shettar gets ticket from Belagavi.