ಬ್ರೇಕಿಂಗ್ ನ್ಯೂಸ್
25-03-24 10:56 am Bangalore Correspondent ಕರ್ನಾಟಕ
ಬೆಂಗಳೂರು, ಮಾ.25: ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಬಿಟ್ಟು ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಕಟ್ಟಿ ಶಾಸಕನಾಗಿದ್ದ, ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಮತ್ತೆ ಬಿಜೆಪಿ ಸೇರಿದ್ದಾರೆ. ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಯಾಗಿದ್ದಾರೆ.
ಜನಾರ್ದನ ರೆಡ್ಡಿ ಮತ್ತು ಅವರ ಪತ್ನಿ ಅರುಣಾ ಲಕ್ಷ್ಮೀ ಹಾಗೂ ಬೆಂಬಲಿಗರು ಪಕ್ಷದ ಬಾವುಟವನ್ನು ರಾಜ್ಯಾಧ್ಯಕ್ಷರಿಂದ ಸ್ವೀಕರಿಸಿ ತಮ್ಮ ಪಕ್ಷವನ್ನು ಬಿಜೆಪಿ ಜೊತೆ ವಿಲೀನ ಮಾಡಿದ್ದಾರೆ. ಸಾಮಾನ್ಯ ಕಾರ್ಯಕರ್ತನಾಗಿ ಪಕ್ಷ ಸೇರುತ್ತಿದ್ದೇನೆ, ಪಕ್ಷ ಯಾವುದೇ ಜವಾಬ್ದಾರಿ ಕೊಟ್ಟರೂ ಕೊಡದಿದ್ದರೂ ಪಕ್ಷದ ಗೆಲುವಿಗೆ ದುಡಿಯುತ್ತೇನೆ. ಬಿಎಸ್ ಯಡಿಯೂರಪ್ಪ ಅವರು ಈ ಪಕ್ಷವನ್ನು ಇಷ್ಟು ಮೇಲೆ ತಂದಿದ್ದಾರೆ. ಮತ್ತೆ ಪಕ್ಷ ಸೇರಲು ಅವಕಾಶ ನೀಡಿದ್ದಾರೆ ಎಂದು ಇದೇ ವೇಳೆ ಜನಾರ್ದನ ರೆಡ್ಡಿ ಹೇಳಿದ್ದಾರೆ.
ಮುಖಂಡರಾದ ಶ್ರೀರಾಮುಲು, ಆನಂದ ಸಿಂಗ್, ಸಿಟಿ ರವಿ, ಅಶ್ವಥ್ಥ ನಾರಾಯಣ ಮತ್ತಿತರರು ಇದ್ದರು. ವಿಧಾನಸಭೆ ಚುನಾವಣೆ ವೇಳೆಗೆ ಬಳ್ಳಾರಿ, ಚಿತ್ರದುರ್ಗ ಭಾಗದಲ್ಲಿ ತಮ್ಮದೇ ಪಕ್ಷದಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಬಿಜೆಪಿ ಸೋಲಿಗೆ ಜನಾರ್ದನ ರೆಡ್ಡಿ ಕೊಡುಗೆ ನೀಡಿದ್ದರು. ಬಿಜೆಪಿ ಸೇರಲು ಬಿಡಲಿಲ್ಲ, ಸ್ಪರ್ಧೆಗೆ ಟಿಕೆಟ್ ನೀಡಲಿಲ್ಲ ಎಂಬ ಬೇಸರದಲ್ಲಿ ಜನಾರ್ದನ ರೆಡ್ಡಿ ಪ್ರತ್ಯೇಕ ಪಕ್ಷ ಕಟ್ಟಿದ್ದರು. ಇತ್ತೀಚೆಗೆ ರಾಜ್ಯಸಭೆ ಚುನಾವಣೆಯ ಒಂದು ದಿನದ ಮೊದಲು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರು ಜನಾರ್ದನ ರೆಡ್ಡಿ ಅವರನ್ನು ಭೇಟಿಯಾಗಿ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸುವಂತೆ ಮನವಿ ಮಾಡಿದ್ದರು. ಮನವಿಗೆ ಸ್ಪಂದಿಸಿದ್ದ ಜನಾರ್ದನ ರೆಡ್ಡಿ ರಾಜ್ಯಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿದ್ದರು.
ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸ್ಥಾಪಿಸಿ ಗಂಗಾವತಿಯಿಂದ ಸ್ಪರ್ಧಿಸಿ ಗೆದ್ದಿದ್ದ ಜನಾರ್ದನ ರೆಡ್ಡಿ ಅವರನ್ನು ಬಿಜೆಪಿಗೆ ಕರೆತರಲು ಯಡಿಯೂರಪ್ಪ ಶತಾಯಗತಾಯ ಪ್ರಯತ್ನ ಪಟ್ಟಿದ್ದರು. ಬಳ್ಳಾರಿಯಲ್ಲಿ ಅಣ್ಣ ತಮ್ಮಂದಿರು ಮತ್ತು ರಾಮುಲು ನಡುವೆ ವೈಮನಸ್ಸು ಹೊಂದಿದ್ದ ರೆಡ್ಡಿಯನ್ನು ಪಕ್ಷಕ್ಕೆ ಕರೆತರುವುದರಿಂದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಲಾಭ ಆಗಬಹುದೆಂಬ ಲೆಕ್ಕಾಚಾರ ಇದೆ. ಅಲ್ಲದೆ, ಆ ಭಾಗದಲ್ಲಿ ಹಳೆ ಜಗಳ ಬಿಟ್ಟು ಒಟ್ಟಾಗಿ ಚುನಾವಣೆ ಎದುರಿಸಲು ಯಡಿಯೂರಪ್ಪ ಸೂಚಿಸಿದ್ದಾರೆ. ಇತ್ತೀಚೆಗೆ ಜನಾರ್ದನ ರೆಡ್ಡಿ ದೆಹಲಿಯಲ್ಲಿ ಅಮಿತ್ ಷಾರನ್ನು ಭೇಟಿ ಆದಾಗಲೇ ಮತ್ತೆ ಬಿಜೆಪಿ ಸೇರುತ್ತಾರೆ ಎಂಬ ಮಾತು ಕೇಳಿಬಂದಿತ್ತು.
Kalyana Rajya Pragathi Paksha leader and Gangavati MLA Gali Janardhana Reddy is set to rejoin the BJP today.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm