ಬ್ರೇಕಿಂಗ್ ನ್ಯೂಸ್
26-03-24 03:07 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.26: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಇಬ್ಬರನ್ನು ರಾಜಧಾನಿ ಬೆಂಗಳೂರಿನಲ್ಲಿ ವಶಕ್ಕೆ ಪಡೆದಿದ್ದಾರೆ.
ಈಗಾಗಲೇ ಸ್ಫೋಟದ ಪ್ರಧಾನ ಆರೋಪಿಗಳು ಮುಸಾವೀರ್, ಅಬ್ದುಲ್ ಮತೀನ್ ತಾಹ್ಯ ಎಂದು ಪತ್ತೆ ಹಚ್ಚಲಾಗಿದೆ. ಇವರ ಜೊತೆ ಈ ಆರೋಪಿಗಳು ನಿರಂತರ ಸಂಪರ್ಕದಲ್ಲಿದ್ದರು. ಇವರು ಬೆಂಗಳೂರಿನಲ್ಲಿದ್ದು ಸ್ಲೀಪರ್ ಸೆಲ್ ಆಗಿ ಕಾರ್ಯ ನಿರ್ವಹಿಸಿರುವ ಶಂಕೆ ಇದೆ. ಅಲ್ಲದೆ, ಬೆಂಗಳೂರಿನಲ್ಲಿ ಆಶ್ರಯ ಮತ್ತಿತರ ಅನುಕೂಲ ಮಾಡಿಕೊಟ್ಟಿರುವ ಶಂಕೆಯಲ್ಲಿ ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಆರೋಪಿ ತಮಿಳುನಾಡಿನಿಂದ ಬಂದು ಬಾಂಬ್ ಇಟ್ಟಿದ್ದಾನೆ ಎಂಬ ಮಾಹಿತಿಯನ್ನು ಕಲೆಹಾಕಿದ್ದು ಅದಕ್ಕೂ ಮುನ್ನ ಎರಡು ತಿಂಗಳ ಕಾಲ ತಮಿಳುನಾಡಿನಲ್ಲಿ ಉಳಿದಿದ್ದರು ಎಂಬುದನ್ನು ಪತ್ತೆ ಮಾಡಿದ್ದಾರೆ. ಮುಸಾವಿರ್ ಮತ್ತು ಅಬ್ದುಲ್ ಮತೀನ್ ಎರಡು ತಿಂಗಳು ತಮಿಳುನಾಡಿನ ಲಾಡ್ಜ್‌ನಲ್ಲಿ ಇವರು ಉಳಿದುಕೊಂಡಿರುವುದು ಪತ್ತೆಯಾಗಿದೆ. ಸ್ಫೋಟಕ್ಕೆ ಅವರು ಇಲ್ಲಿ ತರಬೇತಿ ಪಡೆಯುತ್ತಿದ್ದರೇ ಅಥವಾ ಇನ್ನಷ್ಟು ದೊಡ್ಡ ಉಗ್ರ ಕೃತ್ಯದ ತಯಾರಿ ನಡೆಸುತ್ತಿದ್ದರೇ ಎಂಬ ಅಂಶವನ್ನು ತನಿಖೆ ಮಾಡಲಾಗುತ್ತಿದೆ.
ಮತ್ತೊಂದೆಡೆ, ಭಯೋತ್ಪಾದಕ ಎಸೆದುಹೋದ ಕ್ಯಾಪ್‌ನಲ್ಲಿ ಶಂಕಿತನ ಕೂದಲು ದೊರೆತಿದ್ದು, ಅದನ್ನು ಡಿಎನ್‌ಎ ಟೆಸ್ಟ್‌ಗೆ ಒಳಪಡಿಸಲಾಗಿದೆ. ಸದ್ಯ ಸಿಸಿಟಿವಿಗಳನ್ನು ಆಧರಿಸಿ ನಡೆದಿರುವ ತನಿಖೆಯಲ್ಲಿ ಸಿಕ್ಕಿರುವ ಈ ಮಹತ್ವದ ಲೀಡ್ ಎನ್‌ಐಎ ತನಿಖೆಗೆ ಪೂರಕವಾಗಿದೆ.
ತನಿಖೆಯ ಆರಂಭದಲ್ಲಿ ಎನ್‌ಐಎ ನಾಲ್ಕು ಚಿತ್ರಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಶಂಕಿತ ಆರೋಪಿಯ ಮುಖ ಬಹುತೇಕ ಸ್ಪಷ್ಟವಾಗಿ ಕಾಣಿಸಿತ್ತು. ಈ ವ್ಯಕ್ತಿ ಕಂಡುಬಂದರೆ ಮಾಹಿತಿ ನೀಡುವಂತೆ ಸಾರ್ವಜನಿಕರಿಗೆ ಮನವಿ ಮಾಡಿತ್ತು. ಪೋನ್ ನಂಬರ್ ಮತ್ತು ಇ ಮೇಲ್ ಐಡಿ ಕೊಟ್ಟು ಮಾಹಿತಿ ನೀಡುವಂತೆ ಮನವಿ ಮಾಡಿದೆ. ಹಾಗಿದ್ದರೂ ಆರೋಪಿ ಕರ್ನಾಟಕದಲ್ಲಿ ಉಳಿದುಕೊಂಡಿರುವ ಬಗ್ಗೆ ಶಂಕೆಯಿಲ್ಲ.
In the ongoing investigation into the recent bomb blast at Rameshwaram café in Bengaluru, the National Investigation Agency (NIA) has detained two individuals suspected to be connected to the incident. The agency is intensifying its efforts to track down the perpetrator responsible for planting the explosive device.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm