ಬ್ರೇಕಿಂಗ್ ನ್ಯೂಸ್
27-03-24 11:53 am HK News Desk ಕರ್ನಾಟಕ
ಶಿವಮೊಗ್ಗ, ಮಾ.27: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ ಸಂಬಂಧಿಸಿ ಎನ್ಐಎ ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.
ತೀರ್ಥಹಳ್ಳಿ ಪಟ್ಟಣದ 5ಕ್ಕೂ ಹೆಚ್ಚು ಕಡೆ ಎನ್‌ಐಎ ಟೀಂ ದಾಳಿ ನಡೆಸಿದ್ದು ಹಲವರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆಸಲಾಗಿದೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ, ಇಂದಿರಾನಗರ, ಬೆಟಮಕ್ಕಿಯಲ್ಲಿ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು ಶಂಕಿತರ ಮನೆಗಳಲ್ಲಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರಿನಿಂದ 5 ಕ್ಕೂ ವಾಹನದಲ್ಲಿ ಬಂದಿರುವ 15 ಕ್ಕೂ ಹೆಚ್ಚು ಎನ್‌ಐಎ ಅಧಿಕಾರಿಗಳು ಸ್ಥಳೀಯ ಪೊಲೀಸರ ನೆರವಿನಲ್ಲಿ ಎನ್‌ಐಎ ದಾಳಿ ನಡೆಸಿದ್ದಾರೆ. ಕೆಲವು ಶಂಕಿತರ ಮನೆಗಳನ್ನು ಗುರಿಯಾಗಿಸಿ ದಾಳಿ ನಡೆದಿದ್ದು ತೀವ್ರ ಶೋಧ ನಡೆಸಿದ್ದಾರೆ.
ಕೆಫೆ ಬ್ಲಾಸ್ಟ್ ಕೇಸ್ ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿ ಇಬ್ಬರನ್ನು ವಶಕ್ಕೆ ಪಡೆದಿದ್ದು ಅದರ ಬೆನ್ನಲ್ಲೇ ತೀರ್ಥಹಳ್ಳಿಯಲ್ಲಿ ದಾಳಿಯಾಗಿದೆ. ಹೀಗಾಗಿ ಕೆಫೆ ಬಾಂಬ್ ಸ್ಫೋಟದ ಕೃತ್ಯವನ್ನು ತೀರ್ಥಹಳ್ಳಿ ಮೂಲದವರೇ ಮಾಡಿರುವ ಬಗ್ಗೆ ಗಂಭೀರ ಅನುಮಾನ ಮೂಡಿದೆ. ಈಗಾಗಲೇ ತೀರ್ಥಹಳ್ಳಿ ಮೂಲದ ಮುಸಾವಿರ್ ಎಂಬಾತ ರಾಮೇಶ್ವರ ಕೆಫೆಯಲ್ಲಿ ಬಾಂಬ್ ಇಟ್ಟಿರುವುದಾಗಿ ಕೆಲವು ಸಾಕ್ಷ್ಯಗಳನ್ನು ಉಲ್ಲೇಖಿಸಿ ವರದಿಯಾಗಿತ್ತು.
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರೀಕ್, ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮೂಲದ ನಿವಾಸಿಯಾಗಿದ್ದ. ಇದೀಗ ಅದೇ ಜಾಗದಲ್ಲಿ ಎನ್ಐಎ ದಾಳಿ ನಡೆದಿರುವುದರಿಂದ ಸಂಬಂಧಿಕರ ಮನೆಗಳಲ್ಲಿ ಶೋಧ ನಡೆಸಿದ್ದಾರೆ ಎನ್ನಲಾಗುತ್ತಿದೆ.
National Investigation Agency (NIA) officials conducted simultaneous raids at several locations in Thirthahalli on Wednesday morning reportedly in connection with the Bengaluru Rameshwaram Cafe blast case.
12-01-26 08:20 pm
Mangaluru
ಮನೆ ಕಟ್ಟಲು ಅಡಿಪಾಯ ತೆಗೆಯುವ ವೇಳೆ 1 ಕೆಜಿಯಷ್ಟು ನಿ...
10-01-26 10:28 pm
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
12-01-26 11:00 pm
HK staffer
ಕುಂಬಳೆ ಟೋಲ್ ಗೇಟ್ ವಿರುದ್ಧ ರಸ್ತೆ ತಡೆದು ಪ್ರತಿಭಟನ...
12-01-26 05:01 pm
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
12-01-26 08:03 pm
Mangaluru Staffer
ಭಾರತ ರಕ್ತಪಾತಕ್ಕೆ ಇನ್ನಷ್ಟು ಸಿದ್ಧವಾಗಬೇಕು ; ಚೀನಾ...
11-01-26 10:39 pm
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm