ಬ್ರೇಕಿಂಗ್ ನ್ಯೂಸ್
27-03-24 11:07 pm HK News Desk ಕರ್ನಾಟಕ
ಹುಬ್ಬಳ್ಳಿ, ಮಾ 27: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ಅಧಿಕಾರ ಮತ್ತು ಹಣದ ಮದ ಬಂದಿದೆ. ಏಕಸ್ವಾಮ್ಯತ್ವವನ್ನು ಸಾಧಿಸುತ್ತಿದ್ದಾರೆ. ಅವರನ್ನು ಬದಲಾಯಿಸಿ ಬಿಜೆಪಿ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಶಿರಹಟ್ಟಿ ಫಕೀರ ದಿಂಗಾಲೇಶ್ವರ ಸ್ವಾಮೀಜಿ ಪ್ರಹ್ಲಾದ್ ಜೋಶಿ ವಿರುದ್ಧ ಕಿಡಿಕಾರಿದ್ದಾರೆ. ಅದಲ್ಲದೇ ಅಭ್ಯರ್ಥಿಯನ್ನು ಬದಲಾಯಿಸಲು ಬಿಜೆಪಿ ಹೈಕಮಾಂಡ್‌ಗೆ ಮಾರ್ಚ್ 31ರವರೆಗೆ ಡೆಡ್‌ಲೈನ್ ಅನ್ನು ಸ್ವಾಮೀಜಿ ನೀಡಿದ್ದಾರೆ.
ಹುಬ್ಬಳ್ಳಿಯ ಮೂರು ಸಾವಿರ ಮಠದಲ್ಲಿ ನಡೆದ ಸ್ವಾಮೀಜಿಗಳ ಚಿಂತನ - ಮಂಥನ ಸಭೆಯ ಬಳಿಕ ಮಾತನಾಡಿದ ಅವರು, ಧಾರವಾಡ ಕ್ಷೇತ್ರಕ್ಕೆ ಪ್ರಹ್ಲಾದ್ ಜೋಶಿ ಬದಲಿಗೆ ಸೂಕ್ತ ಅಭ್ಯರ್ಥಿಯನ್ನು ಹಾಕಬೇಕು. ಮಾರ್ಚ್ 31ರೊಳಗೆ ಅಭ್ಯರ್ಥಿಯನ್ನು ಬದಲಾವಣೆ ಮಾಡದೇ ಹೋದರೆ ಏಪ್ರಿಲ್ 2ರಂದು ಮತ್ತೆ ಸಭೆ ನಡೆಸುತ್ತೇವೆ. ಮತ್ತೊಮ್ಮೆ ಸಭೆ ನಡೆಸಿ ಮುಂದಿನ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಚುನಾವಣಾ ಬಂದಾಗ ಮಾತ್ರ ಕೇಂದ್ರ ಸಚಿವರಿಗೆ ವೀರಶೈವ ಲಿಂಗಾಯತ ಸ್ವಾಮೀಜಿಗಳು ನೆನಪು ಆಗುತ್ತಾರೆ ಎಂದು ಕಿಡಿಕಾರಿದರು.
ಇನ್ನು, ಧಾರವಾಡ ಲೋಕಸಭಾ ಚುನಾವಣೆ ಸೇರಿ ದಕ್ಷಿಣ ಭಾರತದಲ್ಲಿ ನಡೆಯುವ ವಿವಿಧ ಚುನಾವಣೆಯಲ್ಲಿ ಮಠಾಧೀಶರು ಸ್ಪರ್ಧೆ ಮಾಡಬೇಕು ಎಂಬ ತೀರ್ಮಾನವನ್ನು ಕೈಗೊಳ್ಳಲಾಯ್ತು. ಪ್ರಸ್ತುತ ರಾಜಕೀಯ ವಿದ್ಯಮಾನ, ರಾಜ್ಯದ ಅಭಿವೃದ್ಧಿ ಹಾಗೂ ಇನ್ನಿತರ ಕುರಿತು ಚರ್ಚೆ ನಡೆಸಲಾಯಿತು. ಆದರೆ, ಧಾರವಾಡ ಲೋಕಸಭಾ ಚುನಾವಣೆಗೆ ತಮ್ಮನ್ನು ಕಣಕ್ಕೆ ಇಳಿಸುವ ಬಗ್ಗೆ ಯಾವುದೇ ಚರ್ಚೆ ಆಗಿಲ್ಲ. ನಾಡಿನ ಅನೇಕ ಮಠಗಳ ಮಠಾಧೀಶರರು ಚಿಂಥನ ಮಂಥನ ಸಭೆಯಲ್ಲಿ ಸಲಹೆ ಸೂಚನೆಗಳನ್ನು ನೀಡಿದ್ದಾರೆ ಎಂದರು.
ಬಿಎಸ್ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸಿದ್ದು ಪ್ರಹ್ಲಾದ್ ಜೋಶಿ, ತಾವೇ ಸಿಎಂ ಆಗಬೇಕೆಂದು ಪ್ರಲ್ಹಾದ್ ಜೋಶಿ ಜಾಕೆಟ್ ಹೊಲಿಸಿದ್ರು, ನಮ್ಮ ಹೋರಾಟದಿಂದಾಗಿ ಅವರ ಜಾಕೆಟ್ ಪಾಕೆಟ್ ಸೇರಿತು, ನಾವು ಯಾರ ಒತ್ತಡಕ್ಕೂ ಒಳಗಾಗುವ ಸ್ವಾಮೀಜಿಗಳಲ್ಲ. ಮಾಜಿ ಮುಖ್ಯಮಂತ್ರಿಯೊಬ್ಬರಿಗೆ ಧಾರವಾಡ ಲೋಕಸಭಾ ಚುನಾವಣೆ ಟಿಕೆಟ್ ತಪ್ಪಿಸಲು ಹುನ್ನಾರ ನಡೆಸಲಾಯಿತು. ಆದ್ದರಿಂದ ಪ್ರತಿಯೊಂದು ರೀತಿಯಲ್ಲಿ ನಮಗೆ ಅನ್ಯಾಯ ಆಗಿದೆ ಎಂದ ಅವರು, ನಾನು ಸಹ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ದೂರವಾಣಿ ಕರೆ ಮಾಡಿದಾಗ ಅವರು ನಮ್ಮ ಜೊತೆ ಸರಿಯಾಗಿ ಮಾತನಾಡಿದ್ದಿಲ್ಲ. ನಮ್ಮ ಕೆಲಸ ಮಾಡಲು ಲಿಂಗಾಯತ ನಾಯಕರು ಇಲ್ವಾ ಎಂದು ಕೇಳಿದ್ದರು. ಆದ್ದರಿಂದ ನಾವು ಕೂಡ ಈಗ ಬದಲಾವಣೆ ಬಯಸಿದ್ದೇವೆ ಎಂದು ಹೇಳಿದರು.
ಹಲವು ಶ್ರೀಗಳು ಜೋಶಿಯವರ ಪುತ್ರಿ ವಿವಾಹ ಕಾರ್ಯಕ್ರಮಕ್ಕೆ ಕರೆದು ಕನಿಷ್ಠ ರೀತಿಯಲ್ಲಿ ನಡೆದು, ಭೀಕ್ಷುಕರ ಹಾಗೇ ನಡೆಸಿಕೊಂಡಿದ್ದಾರೆ ಎಂದು ಹರಿಹಾಯ್ದ ಶ್ರೀಗಳು ನಾವು ಪಕ್ಷ ವಿರೋಧಿಗಳಲ್ಲ, ವ್ಯಕ್ತಿಯ ವ್ಯಕ್ತಿತ್ವದ ವಿರೋಧಿಗಳು, ಅದಕ್ಕೆ ಕಾರಣ ಅವರ ನಡೆ, ನುಡಿಗಳು. ವ್ಯಕ್ತಿ ಪ್ರಜ್ಞೆಗಿಂತ ಸಮಷ್ಟಿ ಪ್ರಜ್ಞೆ ನಮ್ಮದಾಗಿದೆ ಎಂದು ಹೇಳಿದರು. ಉತ್ತರ ಕನ್ನಡ, ಹಾವೇರಿ, ಚಿತ್ರದುರ್ಗದ ಮುರುಘಾಮಠ, ಬಾಲ್ಕಿ, ಬೀದರ, ರಾಯಚೂರು, ಬಾಗಲಕೋಟೆ, ವಿಜಯಪುರ ಸೇರಿ ಅನೇಕ ಕಡೆಗಳಿಂದ ಆಗಮಿಸಿದ್ದ ಮೂರು ಸಾವಿರ ಮಠದಲ್ಲಿ ನಡೆದ ಚಿಂತನ - ಮಂಥನ ಸಭೆಯಲ್ಲಿ ಭಾಗವಹಿಸಿದ್ದರು. ಸುಮಾರು ಎರಡು ಗಂಟೆಗಳ ಕಾಲ ನಡೆದ ಸಭೆಯಲ್ಲಿ ಹಲವು ಸಲಹೆ ಸೂಚನೆಯನ್ನು ನೀಡಿದರು.
ಬದಲಾವಣೆಯ ಪ್ರಶ್ನೆಯೇ ಇಲ್ಲ ಎಂದ ಬಿಎಸ್ ವೈ :
ಅಭ್ಯರ್ಥಿಯಾಗಿರುವ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಬದಲಾವಣೆಯ ಪ್ರಶ್ನೆ ಇಲ್ಲ ಎಂದು ಬಿಜೆಪಿ ಕೇಂದ್ರ ಸಂಸದೀಯ ಮಂಡಳಿಯ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದರು. ಇಲ್ಲಿಯ ಕಾರವಾರ ರಸ್ತೆ ಅರವಿಂದನಗರದ ನೂತನ ಬಿಜೆಪಿ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬಹುಶಃ ಶಿರಹಟ್ಟಿ ಫಕೀರ ದಿಂಗಾಲೇಶ್ವ ಸ್ವಾಮೀಜಿ ಜೋಶಿ ಅವರ ಬಗ್ಗೆ ತಪ್ಪಾಗಿ ತಿಳಿದಿರಬೇಕು. ನಾನು ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಮನವಲಿಸಲಾಗುವುದು ಎಂದರು.
ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಬಹಳ ದೊಡ್ಡ ಜನಪ್ರೀಯ ನಾಯಕರು. ಅವರು ಬಹಳ ಅಂತರದಿಂದ ಜಯಗಳಿಸುತ್ತಾರೆ. ಲಿಂಗಾಯತ ಸಮಾಜದ ಎಲ್ಲ ಸ್ವಾಮಿಗಳು ನಮ್ಮ ಪರವಾಗಿದ್ದಾರೆ. ದಿಂಗಾಲೇಶ್ವರ ಸ್ವಾಮೀಜಿ ಅವರು ಜೋಶಿ ಅವರ ಮೇಲೆ ಮಾಡುತ್ತಿರುವ ಆರೋಪ ಹಿಂದೆ ನಮ್ಮ ಪಕ್ಷದ ಯಾವ ನಾಯಕರು ಇಲ್ಲ. ಇದು ಸತ್ಯಕ್ಕೆ ದೂರವಾಗಿದೆ ಎಂದು ಹೇಳಿದರು.
In an intriguing development ahead of the Lok Sabha elections, Veerashaiva Lingayat seers from various mutts who met in Hubballi on Wednesday have set a deadline for the BJP high command to replace Union Minister Pralhad Joshi in Dharwad Lok Sabha Constituency on the basis of what they said ill-treatment meted out to the community and the seers.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm