ಬ್ರೇಕಿಂಗ್ ನ್ಯೂಸ್
28-03-24 09:45 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.28: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಅವರು ಮತ್ತೊಮ್ಮೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿದ್ದು, ಕಾಂಗ್ರೆಸ್ ಅಭ್ಯರ್ಥಿಯಾಗಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಇದೇ ವೇಳೆ, ನಾಮಪತ್ರದಲ್ಲಿ ಒಟ್ಟು ಆಸ್ತಿ ಮೌಲ್ಯ 598 ಕೋಟಿ ರೂ. ಎಂದು ಘೋಷಿಸಿದ್ದಾರೆ.
ಡಿಕೆ ಸುರೇಶ್ ಅವರ ಆಸ್ತಿಯಲ್ಲಿ ಕಳೆದ 5 ವರ್ಷದಲ್ಲಿ 259.19 ಕೋಟಿ ರೂಪಾಯಿಯಷ್ಟು ಹೆಚ್ಚಳವಾಗಿದೆ. ಅಲ್ಲದೆ ಒಟ್ಟು 207 ಕೋಟಿ ರೂಪಾಯಿ ಸಾಲ ಇರುವುದಾಗಿ ತೋರಿಸಿದ್ದಾರೆ. ಉಪ ಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ.ಕೆ ಶಿವಕುಮಾರ್ ಅವರ ಕಿರಿಯ ಸಹೋದರ ಸುರೇಶ್ ಅವರು 2019ರ ಸಾರ್ವತ್ರಿಕ ಚುನಾವಣೆಗೆ ಮುನ್ನ 339 ಕೋಟಿ ರೂ. ಆಸ್ತಿ ಮೌಲ್ಯ ಘೋಷಿಸಿದ್ದರು.
ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮೂರು ಬಾರಿ ಸಂಸದರಾಗಿರುವ ಸುರೇಶ್ ಸಲ್ಲಿಸಿರುವ ಅಫಿಡವಿಟ್ ಪ್ರಕಾರ ಬ್ಯಾಂಕ್‌ಗಳಲ್ಲಿ 16.61 ಕೋಟಿ ರೂ. ಠೇವಣಿ ಹೊಂದಿದ್ದಾರೆ. 57 ವರ್ಷದ ಸಂಸದ ಸುರೇಶ್ 32.76 ಕೋಟಿ ಮೌಲ್ಯದ 21 ಸ್ಥಳಗಳಲ್ಲಿ ಕೃಷಿ ಭೂಮಿ, 210.47 ಕೋಟಿ ಮೌಲ್ಯದ 27 ಸ್ಥಳಗಳಲ್ಲಿ ಕೃಷಿಯೇತರ ಭೂಮಿ, 211.91 ಕೋಟಿ ಮೌಲ್ಯದ ಒಂಬತ್ತು ವಾಣಿಜ್ಯ ಕಟ್ಟಡಗಳು ಮತ್ತು 27.13 ಕೋಟಿ ಮೌಲ್ಯದ ಮೂರು ವಸತಿ ಕಟ್ಟಡಗಳನ್ನು ಹೊಂದಿದ್ದಾರೆ. ಇನ್ನು ಡಿ.ಕೆ. ಸುರೇಶ್ ಸ್ವಂತ ಕಾರು ಹೊಂದಿಲ್ಲ. ಮನೆಯಲ್ಲಿ 70 ಲಕ್ಷ ರೂ. ಮೌಲ್ಯದ ಪೀಠೋಪಕರಣ ಹೊಂದಿರುವುದಾಗಿ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಅಳಿಯ, ಖ್ಯಾತ ಹೃದಯ ಶಸ್ತ್ರಚಿಕಿತ್ಸಕ ಡಾ.ಸಿ.ಎನ್.ಮಂಜುನಾಥ್ ಅವರನ್ನು ಬಿಜೆಪಿ-ಜೆಡಿ(ಎಸ್) ಮೈತ್ರಿಕೂಟ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಡಿಕೆ ಸುರೇಶ್ ಎದುರಾಳಿಯಾಗಿ ಕಣಕ್ಕಿಳಿಸಿದೆ. ಮಂಜುನಾಥ್ ಅವರು 17 ವರ್ಷಗಳ ಕಾಲ ಸರ್ಕಾರಿ ಸ್ವಾಮ್ಯದ ಜಯದೇವ ಹೃದಯ, ರಕ್ತನಾಳದ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಮುಖ್ಯಸ್ಥರಾಗಿದ್ದು ಇದೇ ವರ್ಷದ ಜನವರಿಯಲ್ಲಿ ನಿವೃತ್ತರಾಗಿದ್ದರು.
Congress’s Bangalore Rural Lok Sabha election candidate D K Suresh has declared assets worth Rs 593 crore, which is a 75 per cent increase from his worth five years ago, according to his affidavit submitted to the Election Commission on Thursday. Five years ago, Suresh’s assets were worth Rs 338 crore.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm