ಬ್ರೇಕಿಂಗ್ ನ್ಯೂಸ್
29-03-24 03:43 pm Bangalore Correspondent ಕರ್ನಾಟಕ
ಬೆಂಗಳೂರು, ಮಾ.29: ಕೋಲಾರ ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಟಿಕೆಟ್ ವಿಚಾರದಲ್ಲಿ ಮುನಿಸಿಕೊಂಡಿದ್ದ ಶಾಸಕರು, ಸಚಿವರು ಸಿಎಂ ಸಿದ್ದರಾಮಯ್ಯ ಮಧ್ಯ ಪ್ರವೇಶ ಮಾಡುತ್ತಿದ್ದಂತೆ ತಣ್ಣಗಾಗಿದ್ದಾರೆ. ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಿದ್ದೇವೆ ಎಂದು ಹೇಳಿದ್ದಾರೆ.
ಪರಿಶಿಷ್ಟ ಜಾತಿಗೆ ಮೀಸಲಾದ ಕ್ಷೇತ್ರದಲ್ಲಿ ಬಲಗೈ ಸಮುದಾಯಕ್ಕೆ ಆದ್ಯತೆ ನೀಡಬೇಕೆಂಬ ಬೇಡಿಕೆಯಿಂದ ರಮೇಶ್ ಕುಮಾರ್ ಬಣ ಹಿಂದೆ ಸರಿದಿದೆ ಎನ್ನಲಾಗುತ್ತಿದೆ. ಆದರೆ ಸಚಿವ ಕೆಎಚ್ ಮುನಿಯಪ್ಪ ಅಳಿಯ ಚಿಕ್ಕಪೆದ್ದಣ್ಣ ಹೊರತಾಗಿ ಬೇರೆ ಎಡಗೈ ಸಮುದಾಯಕ್ಕೆ ಟಿಕೆಟ್ ಕೊಡಬಹುದು ಎಂದು ಷರತ್ತು ಹಾಕಿದ್ದಾರೆ. ಇದರೊಂದಿಗೆ ರಾಜ್ಯಸಭೆ ಪುನರಾಯ್ಕೆ ಅವಕಾಶ ವಂಚಿತರಾದ ಎಲ್.ಹನುಮಂತಯ್ಯ ಅವರಿಗೆ ಅದೃಷ್ಟ ಒಲಿಯುವ ನಿರೀಕ್ಷೆಯಿದೆ.
ಸಚಿವ ಮುನಿಯಪ್ಪ ದೆಹಲಿ ಮಟ್ಟದಲ್ಲಿ ಲಾಬಿ ನಡೆಸಿ ತನ್ನ ಅಳಿಯ ಚಿಕ್ಕಪೆದ್ದಣ್ಣ ಅವರಿಗೆ ಟಿಕೆಟ್ ಫೈನಲ್ ಮಾಡಿಸಿದ್ದಾರೆ ಎಂದು ಆಕ್ರೋಶಗೊಂಡಿದ್ದ ಸಚಿವ ಡಾ.ಎಂ.ಸಿ.ಸುಧಾಕರ್, ಮೇಲ್ಮನೆ ಸದಸ್ಯರಾದ ನಜೀರ್ ಅಹ್ಮದ್, ಅನಿಲ್ ಕುಮಾರ್, ಶಾಸಕರಾದ ಕೆವೈ ನಂಜೇಗೌಡ, ಕೊತ್ತೂರು ಮಂಜುನಾಥ್ ಬುದವಾರ ರಾಜಿನಾಮೆ ನೀಡುವುದಾಗಿ ಹೇಳಿ ಹೈಡ್ರಾಮಾ ನಡೆಸಿದ್ದರು. ಇದರ ಬೆನ್ನಲ್ಲೇ ಗುರುವಾರ ಬೆಂಗಳೂರಿಗೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರೊಂದಿಗೆ ಅತೃಪ್ತ ಶಾಸಕರು ಸಭೆ ನಡೆಸಿದರು. ಸಂಧಾನ ಮಾತುಕತೆ ಬಹುತೇಕ ಫಲ ಕೊಟ್ಟಿದೆ ಎನ್ನಲಾಗುತ್ತಿದ್ದು, ಹೈಕಮಾಂಡ್ ನಿರ್ಧರಿಸುವ ಅಭ್ಯರ್ಥಿಯನ್ನು ಗೆಲ್ಲಿಸಿಕೊಂಡು ಬರುತ್ತೇವೆ ಎಂದಿದ್ದಾರೆ.
ಮುನಿಯಪ್ಪ ಕುಟುಂಬದ ಹೊರತಾಗಿ ಯಾರಿಗೆ ಟಿಕೆಟ್ ಕೊಟ್ಟರು ನಮ್ಮ ಸಮ್ಮತಿಯಿದೆ ಎಂಬ ರಮೇಶ್ ಕುಮಾರ್ ಬಣದ ಅಭಿಪ್ರಾಯವನ್ನು ಹೈಕಮಾಂಡ್ ಗಮನಕ್ಕೆ ತರುವುದಾಗಿವ ಸಿಎಂ ಮತ್ತು ಡಿಕೆಶಿ ಸಭೆಯಲ್ಲಿ ತಿಳಿಸಿದ್ದಾರೆ. ಇದರೊಂದಿಗೆ ಮುನಿಯಪ್ಪ ವಿರೋಧಿ ಬಣ ತಮ್ಮ ಪಟ್ಟು ಯಶಸ್ಸು ಕಂಡ ಖುಷಿಯಲ್ಲಿದ್ದಾರೆ.
L hanumanthaiah mostly to get ticket from kolar after cm siddaramaiah intervenes. A day after five Congress legislators threatened to resign over fielding Food and Civil Supplies Minister K H Muniyappa’s son-in-law Chikka Peddanna from the Kolar Lok Sabha constituency, the disgruntled group agreed to set aside their differences and back the candidate fielded by the party.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm