ಬ್ರೇಕಿಂಗ್ ನ್ಯೂಸ್
01-04-24 10:10 pm Bangalore Correspondent ಕರ್ನಾಟಕ
ಬೆಂಗಳೂರು, ಏ 01: ಹೆಚ್.ಡಿ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿದ್ದಾರೆ, ಬದುಕಿದ್ದು ಸತ್ತಂತೆ ಎಂದು ಡಿಕೆಶಿ ವಾಗ್ದಾಳಿ ನಡೆಸಿದ್ದಾರೆ.
ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ರಾಜ್ಯದ ಜನರಿಗೆ ನಾವು ಹೇಳಿದಂತೆ ಮಾತು ಉಳಿಸಿಕೊಂಡಿದ್ದೇವೆ. ಮಂಡ್ಯದ ಜನತೆ ಸ್ವಾಭಿಮಾನಕ್ಕೆ ಮತಕೊಡಿ ಎಂದು ಮನವಿ ಮಾಡಿದರು.
ಮಂಡ್ಯ ರಾಜಕಾರಣ ನೋಡಿದರೆ ನಾಚಿಗೆ ಆಗುತ್ತೆ. ಕುಮಾರಸ್ವಾಮಿ ಕಮಲದ ಧ್ವಜ ಹಾಕಿಕೊಂಡಿದ್ದಾರೆ. ಬದುಕಿದ್ದು ಸತ್ತಂತೆ ಎಂದರು. ಕಳೆದ ಬಾರಿ ಮೈತ್ರಿಯಂತೆ ಅವರಿಗೆ ಸಹಾಯ ಮಾಡಲು ಬಂದಿದ್ದೆ. ಆದರೆ ಅವರಿಗೆ ಅಧಿಕಾರ ಉಳಿಸಿಕೊಳ್ಳಲು ಆಗಿಲ್ಲ. ಆದರೆ ಈಗ ತಮ್ಮ ಅಧಿಕಾರ ತೆಗೆದವರ ಜೊತೆಯೇ ಹೋಗಿದ್ದಾರೆ ಎಂದರು.
ಕುಮಾರಸ್ವಾಮಿ ಹಾಸನದಿಂದ ರಾಮನಗರಕ್ಕೆ ಬಂದಿದ್ದರು. ಇದೀಗ ಮಂಡ್ಯಕ್ಕೆ ಬಂದಿದ್ದಾರೆ. ಪ್ರಜಾಪ್ರಭುತ್ವದಲ್ಲಿ ಯಾರು ಎಲ್ಲಿ ಬೇಕಾದರೂ ಸ್ಪರ್ಧೆ ಮಾಡಬಹುದು, ಮಾಡಲಿ. ಬೆಂಗಳೂರು ಗ್ರಾಮಾಂತರದಲ್ಲಿ ಭಾವನನ್ನು ಬಿಜೆಪಿಯಿಂದ ನಿಲ್ಲಿಸಿದ್ದಾರೆ. ಎಲ್ಲಾ ಕಡೆ ನೀವೇ ನಿಂತರೆ ಕಾರ್ಯಕರ್ತರು ಏನು ಮಾಡುತ್ತಾರೆ ಎಂದು ಡಿಕೆ ಪ್ರಶ್ನಿಸಿದರು.
ಇದಕ್ಕೂ ಮುನ್ನ ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸಿದ ಶಿವಕುಮಾರ್, ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ʼವಿಷʼ ಹೇಳಿಕೆ ನೀಡಿದ್ದೇನೆ. ಕುಂಬಳಕಾಯಿ ಕಳ್ಳ ಎಂದರೆ ಸುಮಲತಾ ಅವರು ಏಕೆ ಹೆಗಲು ಮುಟ್ಟಿ ನೋಡಿಕೊಳ್ಳಬೇಕು? ನಾನು ಸುಮಲತಾ ಅವರ ಸುದ್ದಿಗೆ ಹೋಗಿಲ್ಲ, ಅವರ ಸುದ್ದಿ ನನಗೆ ಅವಶ್ಯಕತೆ ಇಲ್ಲ. ಅಂಬರೀಷ್ ಅವರಿಗೆ ಕಾಂಗ್ರೆಸ್ ಪಕ್ಷ ಏನು ಮಾಡಿದೆ ಎನ್ನುವುದು ಇಡೀ ದೇಶಕ್ಕೆ ಗೊತ್ತಿದೆ. ಅವರು ಕೊನೆಯುಸಿರು ಬಿಡುವ ವೇಳೆಯಲ್ಲಿ ಏನು ಹೇಳಿದರು ಎಂಬುದು ಗೊತ್ತಿದೆ. ನಾವು ಈಗ ಆ ವಿಚಾರಗಳನ್ನು ಮಾತನಾಡುವುದಿಲ್ಲ.
ನಾನು ಸುಮಲತಾ ಅವರ ವಿಚಾರಕ್ಕೆ ಇಂದು ಹೋಗಲ್ಲ, ನಾಳೆಯೂ ಹೋಗಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ. ಅವರ ಬಗ್ಗೆ ನಾನೇಕೆ ತಲೆ ಕೆಡಿಸಿಕೊಳ್ಳಬೇಕು. ಪಕ್ಷದ ಸಿದ್ಧಾಂತದ ಬಗ್ಗೆ ಮಾತನಾಡಲಿ, ಉತ್ತರ ಕೊಡುತ್ತೇನೆ. ಅವರು ಪಕ್ಷದ ಸಿದ್ಧಾಂತದಿಂದ ಹೊರಗೆ ಬರಲಿ, ಆನಂತರ ಮಾತನಾಡುವʼ ಎಂದರು.
Mandya politics is a shame says DK Shivakumar, Hd Kumaraswamy is just like dead. He was talking against BJP party and now he's joined hands with them.
14-08-26 08:42 pm
HK News Staffer
ಗುಟ್ಕಾ-ಪಾನ್ ಮಸಾಲಾ ನಿಷೇಧಕ್ಕೆ 48 ಗಂಟೆಯಲ್ಲೇ ಯು-...
14-08-26 05:32 pm
ಅನುಭವ ಇಲ್ಲದ ಮಂಗ ಯತೀಂದ್ರಗೆ ಮೈಸೂರು ಜಿಲ್ಲಾ ಉಸ್ತು...
13-08-26 10:19 pm
ಆದಿವಾಸಿ ಮತ್ತು ಅಲೆಮಾರಿ ಸಮುದಾಯಗಳ ಅಭಿವೃದ್ಧಿಗೆ ವಿ...
13-08-26 08:09 pm
ಜೈಲಿನಲ್ಲಿದ್ದರೂ ಚಟ ಬಿಡದ ಪ್ರಜ್ವಲ್ ರೇವಣ್ಣ ! ಪೆನ್...
13-08-26 07:14 pm
11-08-26 10:25 pm
HK News Staffer
ಇಬ್ಬರು ಸಹೋದರಿಯರ ಇಸ್ಲಾಂ ಮತಾಂತರ ಎತ್ತಿಹಿಡಿದ ಅಲಹಾ...
11-08-26 04:49 pm
ಕಾಶ್ಮೀರಿ ಪಂಡಿತರನ್ನು ಗುರಿಯಾಗಿಸಿ ಉಗ್ರರ ಬೆದರಿಕೆ...
11-08-26 04:32 pm
ಮೋದಿ ಸೆಲ್ಫಿ ವಿಡಿಯೋ ತೆಗೆದು ಹಾಕಿದ್ದ ಫೇಸ್ಬುಕ್ ಕಂ...
05-08-26 08:36 pm
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
16-08-26 09:33 pm
Mangaluru Staffer
After Rotten Chicken Scare at KFC, McDonald’s...
16-08-26 08:29 pm
McDonald's City Centre Raid, Mangalore: ಕೆಎಫ್...
16-08-26 08:20 pm
ಫೈವ್ ಸ್ಟಾರ್ ಹೊಟೇಲ್ ರೈಡ್ ಆದ್ರೂ ಕೊಳೆತ ಮಾಂಸ ಇಟ್ಕ...
16-08-26 04:14 pm
ಸ್ವಾತಂತ್ರ್ಯ ದಿನಾಚರಣೆ ವೇಳೆ ವಂದೇ ಮಾತರಂ ಗೀತೆಗೆ ಸ...
16-08-26 03:47 pm
17-08-26 10:54 am
HK News Staffer
ಕಾಸರಗೋಡು ; ತಂದೆ, ಮಗಳು ಒಂದೇ ಕುಣಿಕೆಗೆ ನೇಣು ಬಿಗಿ...
16-08-26 09:03 pm
Kfc Raid, City Centre, Mangalore: ಸಿಟಿ ಸೆಂಟರ್...
15-08-26 09:06 pm
ಸ್ವಾತಂತ್ರ್ಯ ದಿನದಂದೇ ಚಾಮರಾಜನಗರದಲ್ಲಿ ಗುಂಡಿನ ಸದ್...
15-08-26 06:11 pm
David Dsouza Murder, Arrest: ಡೇವಿಡ್ ಹತ್ಯೆ ಪ್ರ...
15-08-26 05:09 pm