Shivamogga news, Thirthahalli, River: ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ಹೋದ ಮೂವರು ಯುವಕರು ನೀರುಪಾಲು

01-04-24 10:47 pm       HK News Desk   ಕರ್ನಾಟಕ

ರಂಜಾನ್ ಉಪವಾಸ ಮುಗಿಸಿ ತುಂಗಾ ನದಿಯಲ್ಲಿ ಈಜಲು ಹೋಗಿದ್ದ ಮೂವರು SSLC ವಿದ್ಯಾರ್ಥಿಗಳ ಪೈಕಿ ಇಬ್ಬರು ನೀರುಪಾಲಾಗಿದ್ದು, ಓರ್ವ ನಾಪತ್ತೆಯಾಗಿರುವ ಘಟನೆ ನಡೆದಿದೆ. ಇಬ್ಬರು ಬಾಲಕರ ಶವ ಪತ್ತೆಯಾಗಿದೆ. 

ತೀರ್ಥಹಳ್ಳಿ, ಏ 01: ರಂಜಾನ್ ಉಪವಾಸ ಮುಗಿಸಿ ಈಜಲು ಹೋಗಿದ್ದ ಮೂವರು ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ತುಂಗಾ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ.

ತೀರ್ಥಹಳ್ಳಿ ರಾಮ ಮಂಟಪದ ಪಕ್ಕ ಈ ಘಟನೆ ನಡೆದಿದೆ. ರಫನ್, ಇಯನ್, ಸಮ್ಮರ್ ಮೃತ ಬಾಲಕರು. 

ಮೂವರು ಹುಡುಗರು ರಂಜಾನ್ ಉಪವಾಸ ಮುಗಿಸಿ ಸ್ನಾನಕ್ಕೆ ಈಜಲು ಹೋಗಿ ನಾಪತ್ತೆಯಾಗಿದ್ದರು ಬಳಿಕ ಕುಟುಂಬಸ್ಥರು ಹುಡುಕಾಟ ಆರಂಭಿಸಿದರು. ಮೂವರು ಬಾಲಕರ ಶವ ಪತ್ತೆಯಾಗಿದೆ. ಸತತವಾಗಿ ಒಂದು ಘಂಟೆಯಿಂದ ತುಂಗಾ ನದಿಯ ತೀರದಲ್ಲಿ ಅಗ್ನಿ ಶಾಮಕ ದಳ ಮತ್ತು ಪೊಲೀಸರು ಹುಡುಕಾಟ ನಡೆಸಿ ಮೃತದೇಹ ಹೊರ ತೆಗೆದಿದ್ದಾರೆ. ಕುಟುಂಬದ ಆಕ್ರಂದನ ಮುಗಿಲು ಮುಟ್ಟಿದೆ.

Three youths drowned at Tunga river at Thirthahalli in Shivamogga, two dead bodies of the SSLC students has been found, and the search for the other is going on.