ಬ್ರೇಕಿಂಗ್ ನ್ಯೂಸ್
03-04-24 12:11 pm Bangalore Correspondent ಕರ್ನಾಟಕ
ಬೆಂಗಳೂರು, ಎ.3: ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಹಿಂದೆಂದೂ ಕಂಡರಿಯದಷ್ಟು ರಾಜಕಾರಣಿಗಳ ಕುಟುಂಬದ ಕುಡಿಗಳೇ ಸ್ಪರ್ಧಾ ಕಣಕ್ಕಿಳಿದಿರುವುದು ಕಂಡುಬಂದಿದೆ. ಮಾಜಿ ಪ್ರಧಾನಿ ಮಗ, ಮೊಮ್ಮಗ, ಅಳಿಯ, ಮಾಜಿ ಸಿಎಂ ಪುತ್ರ, ಸಚಿವರ ಪುತ್ರರು, ಪುತ್ರಿಯರನ್ನೇ ಕಣಕ್ಕಿಳಿಸಿದ್ದು, ಒಂದೇ ಕುಟುಂಬದ ಎರಡು-ಮೂರನೇ ತಲೆಮಾರಿನವರು ರಾಜಕೀಯ ಕಣಕ್ಕಿಳಿದಿದ್ದಾರೆ.
ಇದರಲ್ಲಿ ಪಕ್ಷ ಭೇದ ಕಾಣುತ್ತಿಲ್ಲ. ಎಲ್ಲ ಪಕ್ಷಗಳ ನಾಯಕರೂ ತಮ್ಮ ಕುಟುಂಬಸ್ಥರನ್ನೇ ರಾಜಕೀಯ ಕಣದಲ್ಲಿರಿಸಿ ಪೋಷಿಸಲು ಮುಂದಾಗಿದ್ದಾರೆ. ಈ ಸಲದ ಲೋಕಸಭೆ ಚುನಾವಣೆಯಲ್ಲಿ ಅತಿ ಹೆಚ್ಚು ಕಾಂಗ್ರೆಸ್ ನಾಯಕರ ಕುಡಿಗಳು ಸ್ಪರ್ಧೆಗೆ ಇಳಿದಿದ್ದು, ಅದೃಷ್ಟ ಪರೀಕ್ಷೆಗೆ ಇಳಿದಿವೆ. ಎದುರಾಳಿ ಯಾರೇ ಇರಲಿ, ತಮ್ಮ ಕುಟುಂಬಸ್ಥರೇ ರಾಜಕೀಯ ಕಣದಲ್ಲಿರಬೇಕು, ಅವರೇ ತಮ್ಮ ಮುಂದಿನ ಉತ್ತರಾಧಿಕಾರಿ ಆಗಬೇಕೆಂಬ ಆಕಾಂಕ್ಷೆಯನ್ನು ನಾಯಕರು ಇಟ್ಟುಕೊಂಡಂತಿದ್ದಾರೆ.
ವಿಶೇಷ ಅಂದ್ರೆ, ರಾಜಕೀಯ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಲು ರಾಜಕಾರಣಿಗಳ ಇಡೀ ಕುಟುಂಬಸ್ಥರೇ ಪ್ರಚಾರಕ್ಕೆ ಇಳಿದಿದ್ದಾರೆ. ಇವರಿಗೆ ತಮ್ಮ ಜೀವನದುದ್ದಕ್ಕೂ ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರು ಸಾಥ್ ನೀಡುವ ಮೂಲಕ ತಮ್ಮ ನಾಯಕರ, ಸಾಹೇಬರ ಪುತ್ರ, ಪುತ್ರಿಯರ ಗೆಲುವಿಗಾಗಿ ದುಡಿಯಲು ಮುಂದಾಗಿದ್ದಾರೆ. ಇಂಥ ಕಡೆಯಲ್ಲೆಲ್ಲ ಈ ಬಾರಿ ಕಾಂಚಾಣದ ಸದ್ದು ಮಾತ್ರ ಕೇಳಿಬರುತ್ತದೆ. ಅಲ್ಲಿನ ನಾಯಕರು ಆ ಜಿಲ್ಲೆಯ ಮಟ್ಟಿಗೆ ಸಾಹೇಬರು ಇದ್ದಂತೆ. ಕಾಸು ಕೊಟ್ಟರೆ ಓಟು ಅನ್ನುವ ಮಟ್ಟಿಗೆ ಮತದಾರನೂ ಬದಲಾಗಿದ್ದು, ಕಾರ್ಯಕರ್ತರೊಂದಿಗೆ ಧನಿಕರು ಕಾಸು ಚೆಲ್ಲಲು ಮುಂದಾಗಿದ್ದಾರೆ.
ರಾಜ್ಯದ 28 ಸ್ಥಾನಗಳ ಪೈಕಿ 14 ಕಡೆ ಕಾಂಗ್ರೆಸ್ ತನ್ನ ನಾಯಕರ ವಂಶದ ಕುಡಿಗಳನ್ನೇ ಕಣಕ್ಕಿಳಿಸಿದೆ. ಬಿಜೆಪಿ ನಾಲ್ಕು ಕಡೆ ವಂಶ ರಾಜಕಾರಣ ಇದ್ದರೆ, ಜೆಡಿಎಸ್ ಎರಡು ಕಡೆ ವಂಶಸ್ಥರೇ ನೇರವಾಗಿ ಸ್ಪರ್ಧಾ ಕಣಕ್ಕಿಳಿದಿದ್ದಾರೆ. ಕಾಂಗ್ರೆಸಿನಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿಸಿಎಂ ಡಿಕೆಶಿ ಸೋದರ ಡಿಕೆ ಸುರೇಶ್, ಚಾಮರಾಜನಗರ ಕ್ಷೇತ್ರದಲ್ಲಿ ಸಚಿವ ಮಹದೇವಪ್ಪ ಪುತ್ರ ಸುನಿಲ್ ಬೋಸ್, ಬಾಗಲಕೋಟ ಕ್ಷೇತ್ರದಲ್ಲಿ ಸಚಿವ ಶಿವಾನಂದ ಪಾಟೀಲ್ ಪುತ್ರಿ ಸಂಯುಕ್ತಾ ಪಾಟೀಲ್, ಬೆಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಸಚಿವ ರಾಮಲಿಂಗಾರೆಡ್ಡಿ ಪುತ್ರಿ ಸೌಮ್ಯಾ ರೆಡ್ಡಿ, ಬೆಳಗಾವಿ ಕ್ಷೇತ್ರದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್, ಚಿಕ್ಕೋಡಿ ಕ್ಷೇತ್ರದಲ್ಲಿ ಸಚಿವ ಸತೀಶ್ ಜಾರಕಿಹೊಳಿ ಪುತ್ರಿ ಪ್ರಿಯಾಂಕ ಜಾರಕಿಹೊಳಿ, ಬೀದರ್ ಕ್ಷೇತ್ರದಲ್ಲಿ ಸಚಿವ ಈಶ್ವರ ಖಂಡ್ರೆ ಪುತ್ರ ಸಾಗರ ಖಂಡ್ರೆ, ದಾವಣಗೆರೆಯಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪತ್ನಿ ಪ್ರಭಾ ಮಲ್ಲಿಕಾರ್ಜುನ, ಬೆಂಗಳೂರು ಉತ್ತರ ಕ್ಷೇತ್ರದಲ್ಲಿ ಮಾಜಿ ಸ್ಪೀಕರ್ ಎಂ.ವಿ.ವೆಂಕಟರಮಣಪ್ಪ ಪುತ್ರ ಪ್ರೊ.ರಾಜೀವ ಗೌಡ ಕಣದಲ್ಲಿದ್ದಾರೆ.
ಚಿಕ್ಕಬಳ್ಳಾಪುರ ಕ್ಷೇತ್ರದಲ್ಲಿ ಕಾಂಗ್ರೆಸಿನ ಮಾಜಿ ಸಚಿವ ಎಂ.ಆರ್ ಸೀತಾರಾಂ ಪುತ್ರ ರಕ್ಷಾ ರಾಮಯ್ಯ, ಶಿವಮೊಗ್ಗದಲ್ಲಿ ಮಾಜಿ ಸಿಎಂ ಎಸ್.ಬಂಗಾರಪ್ಪ ಪುತ್ರಿ ಗೀತಾ ಶಿವರಾಜ್ ಕುಮಾರ್, ಹಾಸನದಲ್ಲಿ ಮಾಜಿ ಸಚಿವ ಪುಟ್ಟಸ್ವಾಮಿ ಗೌಡ ಮೊಮ್ಮಗ ಶ್ರೇಯಸ್ ಪಟೇಲ್, ಕಲಬುರಗಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯ ಅಳಿಯ ರಾಧಾಕೃಷ್ಣ, ಕೋಲಾರದಲ್ಲಿ ಬೆಂಗಳೂರಿನ ಮಾಜಿ ಮೇಯರ್ ವಿಜಯಕುಮಾರ್ ಅವರ ಪುತ್ರ ಕೆವಿ ಗೌತಮ್ ಸ್ಪರ್ಧಾ ಕಣದಲ್ಲಿದ್ದಾರೆ.
ಇನ್ನು ಬಿಜೆಪಿಯಲ್ಲಿ ಶಿವಮೊಗ್ಗ ಕ್ಷೇತ್ರದಲ್ಲಿ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪುತ್ರ ರಾಘವೇಂದ್ರ, ದಾವಣಗೆರೆಯಲ್ಲಿ ಹಾಲಿ ಸಂಸದ ಜಿಎಂ ಸಿದ್ದೇಶ್ವರ ಅವರ ಪತ್ನಿ ಗಾಯತ್ರಿ, ಕೊಪ್ಪಳದಲ್ಲಿ ಶಾಸಕ ರಾಘವೇಂದ್ರ ಹಿಟ್ನಾಳ್ ಅವರ ಸೋದರ ರಾಜಶೇಖರ ಹಿಟ್ನಾಳ್ ಕಣದಲ್ಲಿದ್ದಾರೆ. ಜೆಡಿಎಸ್ ನಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪುತ್ರ ಕುಮಾರಸ್ವಾಮಿ ಮಂಡ್ಯದಲ್ಲಿ, ಅಳಿಯ ಡಾ.ಸಿ.ಎನ್.ಮಂಜುನಾಥ್ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಚಿಹ್ನೆಯಲ್ಲಿ, ಗೌಡರ ಮೊ ಮ್ಮಗ ಪ್ರಜ್ವಲ್ ರೇವಣ್ಣ ಹಾಸನ ಕ್ಷೇತ್ರದಲ್ಲಿ ಜೆಡಿಎಸ್ ಕಣದಲ್ಲಿದ್ದಾರೆ.
14 constituencies to have leaders from family politics, first time in Karnataka state history. Entire families have got into the field for campaigning for their own family member for the coming lok sabha elections.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm