Mysuru, Vishwanath, Yaduveer Wadiyar: ಯದುವೀರ್ ಅವರನ್ನು ಅವಿರೋಧ ಆಯ್ಕೆ ಮಾಡಬೇಕು, ಕಾಂಗ್ರೆಸನ್ನು ಕೇಳಿಕೊಳ್ಳುತ್ತೇನೆ ; ವಿಜಯೇಂದ್ರ ಭೇಟಿ ಬೆನ್ನಲ್ಲೇ ವರಸೆ ಬದಲಿಸಿದ ಎಚ್.ವಿಶ್ವನಾಥ್ 

03-04-24 09:44 pm       HK News Desk   ಕರ್ನಾಟಕ

ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿದ್ದ ವಿಧಾನ ಪರಿಷತ್‌ ಸದಸ್ಯ ಎಚ್. ವಿಶ್ವನಾಥ್‌ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬುಧವಾರ ಭೇಟಿಯಾಗಿ ಚರ್ಚಿಸಿದ್ದು ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.

ಮೈಸೂರು, ಎ.3: ಬಿಜೆಪಿಯಿಂದ ಅಂತರ ಕಾಯ್ದುಕೊಂಡು ಕಾಂಗ್ರೆಸ್‌ ಜೊತೆ ಗುರುತಿಸಿಕೊಂಡಿದ್ದ ವಿಧಾನ ಪರಿಷತ್‌ ಸದಸ್ಯ ಎಚ್. ವಿಶ್ವನಾಥ್‌ ಅವರನ್ನು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಹಾಗೂ ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ಬುಧವಾರ ಭೇಟಿಯಾಗಿ ಚರ್ಚಿಸಿದ್ದು ಚುನಾವಣೆಯಲ್ಲಿ ಬೆಂಬಲಿಸುವಂತೆ ಕೋರಿದರು.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಎಚ್. ವಿಶ್ವನಾಥ್, ‘ರಾಜ ಪ್ರಭುತ್ವದ ಕುಡಿ ಪ್ರಜಾಪ್ರಭುತ್ವದ ಪ್ರತಿನಿಧಿಯಾಗಲು ಸ್ಪರ್ಧಿಸಿದ್ದಾರೆ. ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕಿದೆ. ಕಾಂಗ್ರೆಸ್‌ಗೆ ಇನ್ನೂ ಕಾಲ ಮಿಂಚಿಲ್ಲ. ಅನ್ನ, ಅಕ್ಷರ, ಆರೋಗ್ಯ ಕೊಟ್ಟ ಯದುವಂಶಕ್ಕೆ ಗೌರವ ಕೊಟ್ಟು ಯದುವೀರ್ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಬೇಕು’ ಎಂದು ಹೇಳಿದರು.

Yaduveer Krishnadatta Chamaraja Wadiyar may contest from Mysuru as BJP  plans changes in dozen constituencies - The Economic Times

ಮೈಸೂರಿನ ಅರಸರು ಜಾತಿ ಮುಂದಿಟ್ಟು ಅಭಿವೃದ್ಧಿ ಮಾಡಿಲ್ಲ. ಯದುವಂಶದವರು ಜಾತಿ ಮೀರಿದವರು ಎಂದರು. ನಾನು ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಲು ಕಾಂಗ್ರೆಸ್ ಟಿಕೆಟ್ ಕೇಳಿದ್ದು ಸತ್ಯ. ವಿಷಯಾಧಾರಿತವಾಗಿ ಬಿಜೆಪಿ ಟೀಕಿಸಿದ್ದೂ ಸತ್ಯ. ಆದರೆ, ಯದುವೀರ್‌ ಸ್ಪರ್ಧಿಸಿದ್ದರಿಂದ ಅವರನ್ನು ಬೆಂಬಲಿಸುವ ನಿರ್ಧಾರ ಕೈಗೊಂಡಿದ್ದೇನೆ. ಅವರು ಯಾವುದೇ ಪಕ್ಷದಿಂದ ಕಣಕ್ಕಿಳಿದಿದ್ದರೂ ಅವರ ವಿರುದ್ಧ ಸ್ಪರ್ಧಿಸದಿರುವ ತೀರ್ಮಾನ ಮಾಡುತ್ತಿದ್ದೆ ಎಂದರು.

Mysuru Vishwanath to support Yaduveer Wadiyar after BJP state president Vijayendra met him at this residence along with Yaduveer Wadiyar