ಬ್ರೇಕಿಂಗ್ ನ್ಯೂಸ್
04-04-24 12:17 pm HK News Desk ಕರ್ನಾಟಕ
ವಿಜಯಪುರ, ಏ 4: ಕರ್ನಾಟಕದಲ್ಲಿ ಮತ್ತೊಂದು ಬೋರ್ವೆಲ್ ಅವಘಡ ವರದಿಯಾಗಿದ್ದು, ಎರಡು ವರ್ಷದ ಬಾಲಕ ಆಟವಾಡುತ್ತಾ ತೆರೆದ ಕೊಳವೆ ಬಾವಿಗೆ ಬಿದ್ದಿರುವ ಘಟನೆ ವಿಜಯಪುರ ಜಿಲ್ಲೆಯಲ್ಲಿ ನಡೆದಿದೆ.
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಎರಡು ವರ್ಷದ ಸಾತ್ವಿಕ್ ಮುಜಗೊಂಡ ಎಂಬ ಮಗು, ತೆರೆದ ಕೊಳವೆ ಬಾವಿಗೆ ಬಿದ್ದಿದೆ. ಸತೀಶ್ ಮತ್ತು ಪೂಜಾ ದಂಪತಿಯ ಮಗನಾಗಿರುವ ಸಾತ್ವಿಕ್ ಇಂದು ನೆನ್ನೆ ಸಂಜೆ 6 ಗಂಟೆ ಸುಮಾರಿಗೆ ಆಟವಾಡುತ್ತ ಕೊಳವೆ ಬಾವಿಗೆ ಬಿದ್ದಿದ್ದಾನೆ.
ವಿಚಾರ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಇಂಡಿ ಗ್ರಾಮಾಂತರ ಠಾಣೆಯ ಪೊಲೀಸರು, ಅಗ್ನಿ ಶಾಮಕ ದಳ, ತಾಲೂಕು ಆಡಳಿತಾಧಿಕಾರಿಗಳು ದೌಡಾಯಿಸಿದ್ದು, ರಕ್ಷಣಾ ಕಾರ್ಯಚರಣೆಯಲ್ಲಿ ತೊಡಗಿದ್ದಾರೆ. 2 ಬೃಹತ್ ಜೆಸಿಬಿ ಯಂತ್ರಗಳ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ನಿನ್ನೆಯಷ್ಟೇ ಕೊರೆಸಿದ್ದ ಬೋರ್ ವೆಲ್ ;
ಇನ್ನು ಜಮೀನಿನಲ್ಲಿ ಶಂಕರಪ್ಪ ಮುಜಗೊಂಡ ಬೋರ್ವೆಲ್ ಕೊರೆಸಿದ್ದರು. ಸುಮಾರು 500 ಅಡಿ ಆಳ ಕೊರೆಸಲಾಗಿತ್ತು. ಆದ್ರೆ, ನೀರು ಬಾರದ ಕಾರಣ ಮುಚ್ಚದೆ ಹಾಗೆಯೇ ಬಿಟ್ಟಿದ್ದರು ಎಂದು ಹೇಳಲಾಗಿದೆ. ಇದೀಗ ಶಂಕರಪ್ಪ ಮುಜಗೊಂಡ ಮೊಮ್ಮಗ ಸಾತ್ವಿಕ್ ಕೊಳವೆ ಬಾವಿಗೆ ಬಿದ್ದಿದ್ದಾನೆ.
20 ಅಡಿ ಆಳದಲ್ಲಿ ಮಗು ;
ಮೂಲಗಳ ಪ್ರಕಾರ ಕೊಳವೆ ಬಾವಿಗೆ ಬಿದ್ದಿರುವ ಸಾತ್ವಿಕ್ ಸುಮಾರು 15ರಿಂದ 20 ಅಡಿ ಆಳದಲ್ಲಿ ಸಿಲುಕಿರಬಹುದು ಎಂದು ಅಂದಾಜಿಸಲಾಗಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಸಿರುವ ಅಧಿಕಾರಿಗಳು ಕೊಳವೆ ಬಾಲಿಗೆ ಆ್ಯಕ್ಸಿಜನ್ ವ್ಯವಸ್ಥೆ ಮಾಡಿ ಮಗುವಿಗೆ ಆಮ್ಲಜನಕ ಕೊರತೆಯಾಗದಂತೆ ನೋಡಿಕೊಳ್ಳುತ್ತಿದ್ದಾರೆ
ಸ್ಥಳಕ್ಕೆ ಎಸ್ಡಿಆರ್ಎಫ್ ತಂಡ ;
ಬೋರ್ವೆಲ್ ಪಕ್ಕದಲ್ಲಿ 2 JCB ಮೂಲಕ ಹಳ್ಳ ತೆಗೆಯುವ ಕಾರ್ಯ ನಡೆದಿದೆ. ಮಗುವಿನ ರಕ್ಷಣೆಗೆ ಬೆಳಗಾವಿಯಿಂದ ಶ್ರೀಶೈಲ್ ಚೌಗಲಾ ನೇತೃತ್ವದ ರಾಜ್ಯ ವಿಪತ್ತು ನಿರ್ವಹಣಾ ತಂಡ(ಎಸ್ಡಿಆರ್ಎಫ್ ) ಸಹ ಘಟನಾ ಸ್ಥಳಕ್ಕೆ ಆಗಮಿಸುತ್ತಿದೆ. ಇನ್ನು ಸ್ಥಳಕ್ಕೆ ವಿಜಯಪುರ ಜಿಲ್ಲಾ ಪಂಚಾಯಿತಿ ಸಿಇಒ, ಎಸ್ಪಿ ಭೇಟಿ ನೀಡಿ ರಕ್ಷಣಾ ಕಾರ್ಯಚರಣೆಯನ್ನು ಪರಿಶೀಲನೆ ನಡೆಸಿದ್ದಾರೆ. ಮತ್ತೊಂದೆಡೆ ಜಿಲ್ಲಾ ಉಸ್ತುವಾರಿ ಸಚಿವ ಎಂಬಿ ಪಾಟೀಲ್ ಅವರು ಜಿಲ್ಲಾಧಿಕಾರಿಗೆ ಕರೆ ಮಾಡಿ ಘಟನೆ ಸಂಬಂಧ ಮಾಹಿತಿ ಪಡೆದುಕೊಂಡಿದ್ದಾರೆ. ಅಲ್ಲದೇ ಮಗುವಿನ ರಕ್ಷಣೆ ಮಾಡುವಂತೆ ಸೂಚಿಸಿದ್ದಾರೆ.
ರಕ್ಷಣೆಗೆ ಹರಸಾಹಸ ;
ಮಗು ರಕ್ಷಣೆಗಾಗಿ ಕಾರ್ಯಾಚರಣೆ ನಡೆಸಿರುವ ಸಿಬ್ಬಂದಿ ಹಿಟಾಚಿ ಯಂತ್ರವನ್ನು ಬಳಸಿ ಕೊಳವೆಬಾವಿ ಸುತ್ತಲೂ ಅಗೆಯುವ ಕೆಲಸ ಮುಂದುವರೆಸಿದ್ದಾರೆ. ಕೊಳವೆ ಬಾವಿಯ 5 ಅಡಿ ದೂರದಲ್ಲಿ ಮಣ್ಣು ತೆರವು ಮಾಡಲು ಕಾರ್ಯಾಚರಣೆ ಮುಂದುವರಿದಿದೆ. 20 ಅಡಿಯ ವರೆಗೆ ಡಿಗ್ಗಿಂಗ್ ಮಾಡಿ ಬಳಿಕ, ರಂಧ್ರ ಕೊರೆದು, ಮಗು ಇರುವ ಜಾಗ ತಲುಪಲು ಕಾರ್ಯಾಚರಣೆ ನಡೆಸಲಾಗುತ್ತಿದೆ.
ಹಿಟಾಚಿ ಕಾರ್ಯಾಚರಣೆಗೆ ಕಲ್ಲು ಬಂಡೆ ಅಡ್ಡಿಯಾದ ಹಿನ್ನೆಲೆ ಬ್ರೇಕರ್ ಮೂಲಕ ಕಲ್ಲು ಒಡೆಯುವ ಕಾರ್ಯವೂ ಚಾಲ್ತಿಯಲ್ಲಿದೆ. ಕ್ಯಾಮೆರಾ ಬಿಟ್ಟು ಮಗುವಿನ ಚಲನವಲನದ ಮೇಲೆ ನಿಗಾ ಇಡುವುದು, ಆತನಿಗೆ ನೀರು ಸೇರಿ ಅಗತ್ಯ ವಸ್ತುಗಳನ್ನು ಪೂರೈಸಲು ಸಾಧ್ಯವೇ ಎಂಬುದನ್ನು ಪರಿಶೀಲಿಸಲಾಗುತ್ತದೆ.
ರಾಜ್ಯದ ವಿವಿಧೆಡೆ ದಾಖಲಾಗಿದ್ದ ಪ್ರಕರಣಗಳು ;
ಕೊಳವೆ ಬಾವಿಗೆ ಬಿದ್ದು 2000 ರಲ್ಲಿ ದಾವಣಗೆರೆಯಲ್ಲಿ ಬಾಲಕ ಕರಿಯ ಸಾವು, 2007 ರಲ್ಲಿ ರಾಯಚೂರಿನಲ್ಲಿ ಬಾಲಕ ಸಂದೀಪ್ ಸಾವು, 2014 ರಲ್ಲಿ ಬಾಗಲಕೋಟೆಯಲ್ಲಿ 6 ವರ್ಷದ ಬಾಲಕ ತಿಮ್ಮಣ್ಣ ಹಾಗೂ ವಿಜಯಪುರ ಜಿಲ್ಲೆಯ ನಾಗಠಾಣ ಗ್ರಾಮದ ಬಾಲಕಿ ಅಕ್ಷತಾ ಸಾವು, 2017 ರಲ್ಲಿ ಬೆಳಗಾವಿ ಜಿಲ್ಲೆಯ ಅಥಣಿಯಲ್ಲಿ 6 ವರ್ಷದ ಬಾಲಕಿ ಕಾವೇರಿ ಹಾಗೂ ಗದಗ ಜಿಲ್ಲೆಯ ಸವಡಿ ಗ್ರಾಮದ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
A two-year-old boy fell into a defunct open borewell in Indi taluk in Karnataka's Vijayapura on Wednesday evening. The boy, trapped at a depth of 15-20 feet, was seen able to breathe, said rescuers.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm