ಬ್ರೇಕಿಂಗ್ ನ್ಯೂಸ್
05-04-24 05:52 pm Bangalore Correspondent ಕರ್ನಾಟಕ
ಬೆಂಗಳೂರು, ಎ.5: ರಾಮೇಶ್ವರ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ತೀರ್ಥಹಳ್ಳಿ ಮೂಲದ ಬಿಜೆಪಿ ಕಾರ್ಯಕರ್ತನನ್ನು ವಶಕ್ಕೆ ಪಡೆದಿದ್ದಾರೆ.
ಸಾಯಿಪ್ರಸಾದ್ ಎನ್ನುವ ಹೆಸರಿನ ತೀರ್ಥಹಳ್ಳಿ ಬಿಜೆಪಿ ಘಟಕದ ಕಾರ್ಯದರ್ಶಿಯನ್ನು ಎನ್ಐಎ ಅಧಿಕಾರಿಗಳು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದ್ದಾರೆ. ಮೊಬೈಲ್ ಅಂಗಡಿಯೊಂದಕ್ಕೆ ದಾಳಿ ನಡೆಸಿದ್ದ ಅಧಿಕಾರಿಗಳು ಅದರ ಮಾಲೀಕನಿಗೆ ಬಿಜೆಪಿ ಮುಖಂಡನ ಸಂಪರ್ಕ ಇರುವುದು ತಿಳಿದುಬಂದಿತ್ತು. ಬಳಿಕ ಸಾಯಿಪ್ರಸಾದ್ ನನ್ನು ವಶಕ್ಕೆ ಪಡೆದು ವಿಚಾರಣೆಗೆ ಬೆಂಗಳೂರಿಗೆ ಒಯ್ದಿದ್ದಾರೆ.
ಮಾ.1ರಂದು ನಡೆದಿದ್ದ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಇಡೀ ದೇಶವನ್ನು ಬೆಚ್ಚಿಬೀಳಿಸಿತ್ತು. ಈಗಾಗಲೇ ಪ್ರಕರಣದಲ್ಲಿ ತೀರ್ಥಹಳ್ಳಿ ಮೂಲದ ಮುಸಾವಿರ್ ಮತ್ತು ಅಬ್ದುಲ್ ಮತೀನ್ ಪ್ರಮುಖ ಆರೋಪಿಗಳೆಂದು ಗುರುತಿಸಲಾಗಿದ್ದು, ಇವರ ಬಗ್ಗೆ ಸುಳಿವು ಕೊಟ್ಟವರಿಗೆ ತಲಾ 10 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ. ಇದಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ಕಳಸ ಮೂಲದ ಮುಜಾಮಿಲ್ ಎಂಬಾತನನ್ನು ಬಂಧಿಸಿದ್ದು, ಆತನೇ ಬಾಂಬ್ ಸ್ಫೋಟದ ಕಚ್ಚಾ ಸಾಮಗ್ರಿಯನ್ನು ಪೂರೈಸಿದ್ದ ಎಂದು ಆರೋಪಿಸಲಾಗಿದೆ.
ಬಿಜೆಪಿ ಕೈವಾಡದ ಬಗ್ಗೆ ಪ್ರಶ್ನಿಸಿದ ಸಚಿವ
ಇದೀಗ ಪ್ರಕರಣದಲ್ಲಿ ಬಿಜೆಪಿ ತೀರ್ಥಹಳ್ಳಿ ಘಟಕದ ಕಾರ್ಯದರ್ಶಿಯನ್ನು ಬಂಧಿಸಿರುವುದು ಭಾರೀ ಕುತೂಹಲಕ್ಕೀಡು ಮಾಡಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪ್ರಮುಖರು, ಬಿಜೆಪಿ ನಾಯಕರನ್ನು ಪ್ರಶ್ನಿಸಿ ಟ್ವೀಟ್ ಮಾಡಿದ್ದಾರೆ. ಸ್ಫೋಟಕ್ಕೆ ನಮ್ಮ ಸರಕಾರವೇ ಕಾರಣವೆಂದು ಮಾತನಾಡುತ್ತಿದ್ದ ಬಿಜೆಪಿ ನಾಯಕರು, ಈಗ ಏನು ಹೇಳುತ್ತಾರೆ. ಎನ್ಐಎ ಬಿಜೆಪಿ ಮುಖಂಡನನ್ನು ವಶಕ್ಕೆ ಪಡೆದಿದ್ದರಿಂದ ಬಿಜೆಪಿಗೆ ಕೆಫೆ ಸ್ಫೋಟದಲ್ಲಿ ಕೈವಾಡ ಇದೆಯೆಂದು ಅರ್ಥವಲ್ಲವೇ ಎಂದು ಪ್ರಶ್ನಿಸಿದ್ದಾರೆ.
BJP Worker Saiprasad from Thirthahalli taken to custody by NIA In Rameshwaram Cafe Blast case. According to the minsters post on X, the BJP worker, identified as Saiprasad, was apprehended from Thirthahalli in Shimoga district, Karnataka.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm