ಮೋದಿ ಭಾವಚಿತ್ರಕ್ಕಾಗಿ ಕೋರ್ಟ್‌ ಮೊರೆ ಹೋದ ಈಶ್ವರಪ್ಪ ; ಮೋದಿ ಅವರಪ್ಪನ ಅಸ್ತಿನಾ? ರಾಘವೇಂದ್ರ ವಿರುದ್ಧ ಈಶ್ವರಪ್ಪ ಗರಂ 

06-04-24 08:26 pm       Bangalore Correspondent   ಕರ್ನಾಟಕ

ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿನ ಕೆಎಸ್. ಈಶ್ವರಪ್ಪ ಬಂಡಾಯ ಇದೀಗ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು, ಇದೀಗ ಈಶ್ವರಪ್ಪ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಬೆಂಗಳೂರು, ಏ 07: ರಾಜ್ಯದ ಗಮನ ಸೆಳೆದಿರುವ ಶಿವಮೊಗ್ಗ ಕ್ಷೇತ್ರದಲ್ಲಿನ ಕೆಎಸ್. ಈಶ್ವರಪ್ಪ ಬಂಡಾಯ ಇದೀಗ ಮತ್ತೊಂದು ಮಗ್ಗುಲಿಗೆ ಹೊರಳಿದೆ. ಲೋಕಸಭೆ ಚುನಾವಣಾ ಪ್ರಚಾರದ ವೇಳೆ ಪ್ರಧಾನಮಂತ್ರಿ ಮೋದಿಯವರ ಫೋಟೋ ಬಳಸುವ ವಿಚಾರ ವಿವಾದಕ್ಕೀಡಾಗಿದ್ದು, ಇದೀಗ ಈಶ್ವರಪ್ಪ ನ್ಯಾಯಾಲಯದ ಮೆಟ್ಟಿಲೇರಿದ್ದಾರೆ.

ಈಶ್ವರಪ್ಪ ಪ್ರಚಾರದ ವೇಳೆ ಮೋದಿ ಭಾವಚಿತ್ರ ಬಳಸಿದ್ದಕ್ಕೆ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವ್ಯಂಗ್ಯವಾಡಿದ್ದರು.

ಈ ಹಿನ್ನೆಲೆಯಲ್ಲಿ ರಾಘವೇಂದ್ರ ಅವರಿಗೆ ತಿರುಗೇಟು ನೀಡಿದ್ದ ಈಶ್ವರಪ್ಪ, ಮೋದಿ ಅವರಪ್ಪನ ಆಸ್ತಿಯೇ, ಮೋದಿ ಭಾವಚಿತ್ರವನ್ನು ಯಾರಾದರೂ ಬಳಸಬಹುದು ಎಂದು ಹೇಳಿದ್ದರು. ಇದೀಗ ಮೋದಿ ಫೋಟೋ ಬಳಕೆಗಾಗಿ ಕೋರ್ಟ್​ ಮೊರೆಹೋಗಿದ್ದಾರೆ. ಶುಕ್ರವಾರ ಕೆವಿಯಟ್‌ ಅರ್ಜಿ ಸಲ್ಲಿಸಿದ್ದಾರೆ.

Ks Eshwarappa Goes Court For Narendra Modi Photo,Lok Sabha Elections :  ನರೇಂದ್ರ ಮೋದಿ ಭಾವಚಿತ್ರಕ್ಕಾಗಿ ಕೋರ್ಟ್‌ ಮೊರೆ ಹೋದ ಕೆಎಸ್‌ ಈಶ್ವರಪ್ಪ; ಶಿವಮೊಗ್ಗದಲ್ಲಿ  ಮೋದಿ VS ಮೋದಿ ಫೈಟ್‌! - lok ...

ತಮ್ಮ ಪುತ್ರ ಕಾಂತೇಶ್‌ಗೆ ಹಾವೇರಿ ಬಿಜೆಪಿ ಟಿಕೆಟ್‌ ನೀಡದ್ದರಿಂದ ಬಂಡಾಯವೆದ್ದಿರುವ ಕೆಎಸ್‌ ಈಶ್ವರಪ್ಪ ಶಿವಮೊಗ್ಗದಲ್ಲಿ ಬಿವೈ ರಾಘವೇಂದ್ರ ಎದುರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ನಿರ್ಧರಿಸಿದ್ದಾರೆ. ಪ್ರಚಾರದಲ್ಲಿ ಬಿಜೆಪಿ ಚಿಹ್ನೆ ಹೊರತುಪಡಿಸಿ ಮೋದಿ ಭಾವಚಿತ್ರವನ್ನು ಈಶ್ವರಪ್ಪ ಬಳಸುತ್ತಿದ್ದಾರೆ.

ಇನ್ನು, ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೆಎಸ್‌ ಈಶ್ವರಪ್ಪ ಅವರನ್ನು ಮನವೊಲಿಸಲು ಬಿಜೆಪಿ ನಾಯಕರು ಪ್ರಯತ್ನಿಸುತ್ತಿದ್ದಾರೆ.

ಇತ್ತೀಚೆಗೆ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್‌ ಶಾ ದೂರವಾಣಿ ಮೂಲಕ ಈಶ್ವರಪ್ಪ ಅವರ ಜೊತೆ ಮಾತನಾಡಿ, ದೆಹಲಿಗೆ ಬರುವಂತೆ ಸೂಚಿಸಿದ್ದರು. ಅದರ ಬೆನ್ನಲ್ಲೇ ದೆಹಲಿಗೆ ತೆರಳಿದ್ದ ಕೆಎಸ್‌ ಈಶ್ವರಪ್ಪ ಅವರಿಗೆ ಅಮಿತ್‌ ಶಾ ಸಿಕ್ಕಿಲ್ಲ. ಆದ್ದರಿಂದ ನಿರಾಸೆಯಲ್ಲೇ ರಾಜ್ಯಕ್ಕೆ ವಾಪಸ್‌ ಆಗಿ, ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದರು.

ನಾನು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡುವುದಕ್ಕೆ ಹೈಕಮಾಂಡ್ ನಾಯಕರ ಸಮ್ಮತಿ ಇರಬಹುದು. ಬಹಿರಂಗವಾಗಿ ಅಲ್ಲವಾದರೂ ಒಳಗಿಂದೊಳಗೆ ಅವರಿಗೆ ನಾನು ಬಂಡಾಯವಾಗಿ ಸ್ಪರ್ಧಿಸುವ ಬಗ್ಗೆ ಒಲವಿರಬಹುದು. ರಾಜ್ಯದಲ್ಲಿ ಅಪ್ಪ-ಮಕ್ಕಳ ಹಿಡಿತದಿಂದ ಪಕ್ಷವನ್ನು ಹೊರ ತರುವುದಕ್ಕಾಗಿ ಹೈಕಮಾಂಡ್‌ ನಾಯಕರು ನನ್ನ ಸ್ಪರ್ಧೆ ಬಗ್ಗೆ ಒಲವು ಹೊಂದಿರಬಹುದು ಎಂದು ಹೇಳಿದ್ದರು.

ರಂಗೇರಿದ ಶಿವಮೊಗ್ಗ ಲೋಕಸಭಾ ಕದನ!

ಕೆಎಸ್‌ ಈಶ್ವರಪ್ಪ ಅವರ ಬಂಡಾಯದಿಂದ ಶಿವಮೊಗ್ಗ ಲೋಕಸಭಾ ಕ್ಷೇತ್ರ ಈ ಬಾರಿ ರಾಜ್ಯದ ಗಮನ ಸೆಳೆಯುತ್ತಿದೆ. ಬಿಜೆಪಿ ಅಭ್ಯರ್ಥಿಯಾಗಿ ಹಾಲಿ ಸಂಸದ ಬಿವೈ ರಾಘವೇಂದ್ರ ಸ್ಪರ್ಧಿಸುತ್ತಿದ್ದರೆ, ಕಾಂಗ್ರೆಸ್‌ ಅಭ್ಯರ್ಥಿಯಾಗಿ ಗೀತಾ ಶಿವರಾಜಕುಮಾರ್‌ ಸ್ಪರ್ಧಿಸುತ್ತಿದ್ದಾರೆ. ಈ ಬಾರಿ ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ ಏರ್ಪಟ್ಟಿದ್ದು, ಕೆಎಸ್‌ ಈಶ್ವರಪ್ಪ ಅವರ ಬಂಡಾಯ ಯಾರಿಗೆ ಅನುಕೂಲ ಮಾಡಿಕೊಡುತ್ತದೆ ಎಂಬುದು ಕುತೂಹಲ ಮೂಡಿಸಿದೆ

Rebel KS Eshwarappa files caveat over use of Modi photo in Lok Sabha election campaign in Shivamogga. Former deputy chief minister and BJP leader K.S. Eshwarappa has filed a caveat in the Karnataka High Court to ensure no ex-parte order is passed if the Shivamogga district BJP moves court seeking an order restricting him from using the portrait of Prime Minister Narendra Modi in his Lok Sabha election campaign.