ಬ್ರೇಕಿಂಗ್ ನ್ಯೂಸ್
06-04-24 09:46 pm Bangalore Correspondent ಕರ್ನಾಟಕ
ಬೆಂಗಳೂರು, ಎ.6: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗಲೇ ಬಿಜೆಪಿಯಲ್ಲಿ ಟಿಕೆಟ್ ತಪ್ಪಿದ ಸಂಸದರು ಮತ್ತು ಅತೃಪ್ತ ನಾಯಕರ ಬಗ್ಗೆ ದೆಹಲಿ ಹೈಕಮಾಂಡ್ ನಿಗಾ ಇಟ್ಟಿದ್ದು ತೊಂದರೆ ಎದುರಾಗಬಲ್ಲ, ಪೈಪೋಟಿ ಇರುವ ಕ್ಷೇತ್ರಗಳಲ್ಲಿ ಎಚ್ಚರಿಕೆ ವಹಿಸಿದೆ.
ಬಿಜೆಪಿ ಈ ಬಾರಿ 25 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಮೂರು ಸ್ಥಾನಗಳನ್ನು ಮೈತ್ರಿಕೂಟ ಜೆಡಿಎಸ್‌ಗೆ ಬಿಟ್ಟುಕೊಟ್ಟಿದೆ. ಹಾಲಿ ಸಂಸದರ ಪೈಕಿ ಅರ್ಧಕ್ಕಿಂತ ಹೆಚ್ಚು ಮಂದಿಯನ್ನು ಬದಲಿಸಲಾಗಿದೆ. ಟಿಕೆಟ್ ಸಿಗದ ನಾಯಕರು ಹಾಗೂ ಅವರ ಬೆಂಬಲಿಗರು ಅಸಮಾಧಾನಗೊಂಡಿದ್ದು ಪಕ್ಷಕ್ಕೆ ಯಾವ ರೀತಿ ಡ್ಯಾಮೇಜ್ ಮಾಡುತ್ತಿದ್ದಾರೆ ಎನ್ನುವ ಬಗ್ಗೆ ಪ್ರತ್ಯೇಕ ತಂಡದ ಮೂಲಕ ದೆಹಲಿ ನಾಯಕರು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಅತೃಪ್ತರಲ್ಲಿ ಕೆಲವರು ಪಕ್ಷದ ಅಭ್ಯರ್ಥಿಗಳ ಪರ ಪ್ರಚಾರ ಮಾಡುತ್ತಿಲ್ಲ, ಹೀಗಾಗಿ ಪಕ್ಷದ ಅಭ್ಯರ್ಥಿಗಳು ಮುಜುಗರಕ್ಕೀಡಾಗುತ್ತಿದ್ದಾರೆ ಎನ್ನುವ ಮಾಹಿತಿ ಕೇಂದ್ರಕ್ಕೆ ಹೋಗಿದೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಇತ್ತೀಚೆಗೆ ರಾಜ್ಯಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಭಿನ್ನಮತೀಯ ನಾಯಕರಿಗೆ ಎಚ್ಚರಿಕೆ ನೀಡಿದ್ದರು. ಪಕ್ಷದ ಕೆಲವು ನಾಯಕರೊಂದಿಗೆ ಅಮಿತ್ ಶಾ ಸಂಧಾನವನ್ನೂ ನಡೆಸಿದ್ದರು. ಭಿನ್ನಮತ ಇರುವ ಕ್ಷೇತ್ರಗಳ ಬಗ್ಗೆ ಅಮಿತ್ ಶಾ ಅವರಿಗೆ ಹೆಚ್ಚಿನ ಮಾಹಿತಿಯಿದೆ ಎಂದು ಮೂಲಗಳು ತಿಳಿಸಿವೆ.
ಪ್ರತಿ ಕ್ಷೇತ್ರದಲ್ಲಿ ಆಗುತ್ತಿರುವ ಬೆಳವಣಿಗೆ, ನಾಯಕರ ಹೇಳಿಕೆಗಳನ್ನು ಗಮನಿಸಲು ಅಮಿತ್ ಶಾ ಪ್ರತ್ಯೇಕ ತಂಡ ಇಟ್ಟುಕೊಂಡಿದ್ದಾರೆ. ಈ ತಂಡವು ಬಿಜೆಪಿ ರಾಜ್ಯ ಉಸ್ತುವಾರಿ ಮತ್ತು ದೆಹಲಿಗೆ ಮಾಹಿತಿ ರವಾನಿಸುತ್ತದೆ ಎನ್ನಲಾಗಿದೆ. ಮೈಸೂರು, ಚಿಕ್ಕಬಳ್ಳಾಪುರ, ಹಾಸನ, ಕೊಪ್ಪಳ, ಬೆಳಗಾವಿ, ಬೆಳಗಾವಿ, ಬೆಂಗಳೂರು ಉತ್ತರ ಮತ್ತು ಇತರ ಕೆಲವು ಕ್ಷೇತ್ರಗಳ ಮೇಲೆ ಕಣ್ಗಾವಲು ಇಡಲಾಗಿದೆ.
ಕಳೆದ ವಿಧಾನಸಭಾ ಚುನಾವಣೆಯಲ್ಲೂ ಪಕ್ಷದ ನಾಯಕರ ಒಳ ಜಗಳವೇ ವ್ಯತಿರಿಕ್ತ ಫಲಿತಾಂಶಕ್ಕೆ ಕಾರಣವಾಗಿತ್ತು. ಗೆಲ್ಲುವ ಅವಕಾಶವಿದ್ದ 20 ಸ್ಥಾನಗಳನ್ನು ಕಳೆದುಕೊಂಡಿದ್ದರು. ಪಕ್ಷದ ನಾಯಕರ ನಡುವಿನ ಕಿತ್ತಾಟದಿಂದಾಗಿ ನಕಾರಾತ್ಮಕ ಫಲಿತಾಂಶ ಬಂದಿತ್ತು. ಲೋಕಸಭೆ ಚುನಾವಣೆಯಲ್ಲಿ ಅದು ಮರುಕಳಿಸದಂತೆ ದೆಹಲಿ ನಾಯಕರೇ ನಿಗಾ ಇಟ್ಟಿದ್ದಾರೆ.
With the Lok Sabha elections in Karnataka just days away, BJP's Delhi team is keeping a keen eye on some contested constituencies. BJP has 25 MPs in the state, one independent, one JDS and one Congress MP. The BJP is contesting 25 seats this time, leaving three seats to its ally JD(S). A senior leader said that more than half of the sitting MPs have been replaced and the leaders who did not get tickets and their supporters are upset. Some of them said that they are not campaigning for our party candidates, thus the party candidates are getting embarrassed.
09-04-26 04:33 pm
HK News Staffer
ಶರಣ್ಯ ನಾಪತ್ತೆ ಪ್ರಕರಣದಲ್ಲಿ ಟ್ವಿಸ್ಟ್ ; ನಕ್ಸಲ್ ಲ...
09-04-26 03:37 pm
ರಾಜ್ಯದಲ್ಲಿ ಆಟೋ ಗ್ಯಾಸ್ ಕೊರತೆಯಾಗಿದೆ ಎಂಬ ವದಂತಿಗೆ...
08-04-26 09:35 pm
ಜಯಮೃತ್ಯುಂಜಯ ಸ್ವಾಮೀಜಿ ಬೆತ್ತಲೆ ವೀಡಿಯೋ ಕೇಸಿಗೆ ಟ್...
08-04-26 08:44 pm
ಚಂದ್ರದ್ರೋಣ ಪರ್ವತ ಶ್ರೇಣಿಗೆ ಪ್ರವಾಸ ಬಂದಿದ್ದ ಕೇರಳ...
08-04-26 02:09 pm
09-04-26 07:43 pm
HK News Staffer
ಕದನ ವಿರಾಮದ ಅಂತಿಮ ಕ್ಷಣದಲ್ಲಿ ಇಸ್ರೇಲ್, ಯುಎಇ, ಕತಾ...
08-04-26 06:59 pm
ಜಾಗತಿಕ ಮಾರುಕಟ್ಟೆ : ಇರಾನ್-ಅಮೆರಿಕ ಕದನ ವಿರಾಮ ಹಿನ...
08-04-26 02:39 pm
ಅಮೆರಿಕ–ಇರಾನ್ ನಡುವೆ 2 ವಾರಗಳ ಕದನ ವಿರಾಮ ಘೋಷಣೆ; ಟ...
08-04-26 10:36 am
ಇರಾನ್ ಗೆ ಆರ್ಥಿಕ ನೆರವಿಗೆ ಮುಂದಾಗಿದ್ದ ಕಾಶ್ಮೀರಿಗಳ...
07-04-26 10:44 pm
07-04-26 01:22 pm
HK News Staffer
ಧರ್ಮಸ್ಥಳ ಬಂಗ್ಲೆಗುಡ್ಡೆ ಕಾಡಿನಲ್ಲಿ ಅಪರಿಚಿತ ಶವ ಪತ...
06-04-26 07:58 pm
ಉಡುಪಿ ; ಬಾವಿಗೆ ಬಿದ್ದು ಮೂರು ದಿನ ನರಳಾಡಿತ್ತು ವೃದ...
06-04-26 07:43 pm
ಕೇರಳಕ್ಕೆ ಅಕ್ರಮ ಜಾನುವಾರು ಸಾಗಣೆ; ಕಡಬದಲ್ಲಿ ಪೊಲೀಸ...
03-04-26 11:43 am
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
09-04-26 01:03 pm
HK News Staffer
Arif Murder, Seven Arrested, Mangalore: ಟ್ಯಾಬ...
08-04-26 07:48 pm
ಡ್ರಗ್ಸ್ ಪೆಡ್ಲಿಂಗ್ ; ತಾವಾಗಿಯೇ ಗಾಂಜಾ, ಡ್ರಗ್ಸ್ ತ...
08-04-26 05:53 pm
Gurupura Accident, Mangalore: ಮೂಡುಬಿದ್ರೆ ಎಕ್ಸ...
08-04-26 04:29 pm
Mangalore Crime, Bunder Murder: ಮೀನುಗಾರಿಕೆ ದಕ...
08-04-26 01:06 pm