ಬ್ರೇಕಿಂಗ್ ನ್ಯೂಸ್
06-04-24 10:12 pm HK News Desk ಕರ್ನಾಟಕ
ಕಾರವಾರ, ಎ.6: ನರೇಂದ್ರ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕೆಂದು ಪ್ರಾರ್ಥಿಸಿ ಯುವಕನೊಬ್ಬ ತನ್ನ ಕೈ ಬೆರಳನ್ನು ಕತ್ತರಿಸಿ ಕಾಳಿ ಮಾತೆಗೆ ರಕ್ತ ಅರ್ಪಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಸೋನಾರವಾಡದಲ್ಲಿ ನಡೆದಿದೆ.
ಕೈಬೆರಳು ಕತ್ತರಿಸಿ ಕಾಳಿ ಮಾತೆಗೆ ಅರ್ಪಿಸಿದ ವ್ಯಕ್ತಿಯನ್ನು ಅರುಣ್ ವರ್ಣೇಕರ್ ಎಂದು ಗುರುತಿಸಲಾಗಿದೆ. ಈ ವ್ಯಕ್ತಿ ಮೋದಿಗಾಗಿ ಗುಡಿಯೊಂದನ್ನು ನಿರ್ಮಿಸಿ ಪೂಜೆ ಮಾಡುತ್ತಿದ್ದಾರೆ. ಬೆರಳು ಕತ್ತರಿಸಿಕೊಂಡು ಅರುಣ್, ‘ಮೋದಿ ಮತ್ತೆ ಪ್ರಧಾನಿಯಾಗಬೇಕು’ ಎಂದು ಗೋಡೆ ಮೇಲೆ ರಕ್ತದಲ್ಲಿ ರಕ್ತದಲ್ಲಿ ಬರೆದಿದ್ದಾರೆ. ಬೆರಳು ತುಂಡು ಮಾಡಿಕೊಂಡು ಅದರಿಂದ ಸುರಿದ ರಕ್ತದಲ್ಲಿ, ‘‘ಮಾ ಕಾಳಿಮಾತಾ ಮೋದಿ ಬಾಬಾಕೋ ರಕ್ಷಾ ಕರೋ’’ ಎಂದು ಬರೆದಿದ್ದಾರೆ. ‘‘ಮೋದಿ ಬಾಬ ಪಿಎಂ, 3 ಬಾರ್ 78ತಕ್ 378, 378+ ಮೇರಾ ಮೋದಿ ಬಾಬಾ ಸಬ್ ಸೆ ಮಹಾನ್ ’ ಎಂದು ಗೋಡೆ ಮೇಲೆ ಹಾಗೂ ಪೋಸ್ಟರ್ ನಲ್ಲಿ ಅರುಣ್ ಬರೆದಿದ್ದಾರೆ.
ಮೋದಿ ಮೊದಲ ಬಾರಿ ಚುನಾವಣೆಗೆ ನಿಂತಾಗ ಕೂಡ ಇದೇ ಅರುಣ್ ರಕ್ತದಲ್ಲಿ ಕಾಳಿಗೆ ಹರಕೆ ಇಟ್ಟಿದ್ದರು. ಈ ಹಿಂದೆಯೂ ಬೆರಳು ಕೊಯ್ದುಕೊಂಡು ಮೋದಿ ಗೆಲುವಿಗಾಗಿ ಕಾಳಿ ಮಾತೆಗೆ ಹರಕೆ ನೀಡಿದ್ದರು. ಇದು ಕೊನೆಯ ಬಾರಿ. ಮೋದಿ ಮತ್ತೆ ಪ್ರಧಾನಿಯಾಗಬೇಕು ಎಂದು ಬೆರಳನ್ನೇ ತುಂಡರಿಸಿ ಕಾಳಿಗೆ ಅರ್ಪಿಸಿದ್ದಾರೆ. ಕಳೆದ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕೂಡ ಮೋದಿ ಗೆಲುವಿಗಾಗಿ ಪ್ರಾರ್ಥಿಸಿ ಅರುಣ್ ವರ್ಣೇಕರ್ ಬೆರಳು ಕತ್ತರಿಸಿ ಕಾಳಿ ಮಾತೆಗೆ ರಕ್ತದ ತಿಲಕವಿಟ್ಟಿದ್ದರು. 2019ರಲ್ಲಿ ಲೋಕಸಭೆ ಚುನಾವಣೆಗೂ ಮುನ್ನ ಕತ್ತಿಯಿಂದ ಬೆರಳು ಕತ್ತರಿಸಿಕೊಂಡಿದ್ದು ಸುದ್ದಿಯಾಗಿತ್ತು.
ಜತೆಗೆ ಸಾಯಿ ಬಾಬಾ, ಪ್ರಧಾನಿ ಮೋದಿಯ ಫೋಟೊಗೂ ರಕ್ತದ ತಿಲಕವಿಟ್ಟಿದ್ದರು. ಕಳೆದ ವರ್ಷ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿಯಾಗುವ ಇಂಗಿತ ವ್ಯಕ್ತಪಡಿಸಿದ್ದರು. ಅಂಕೋಲಾಕ್ಕೆ ಪ್ರಧಾನಿ ಭೇಟಿ ನೀಡಿದ ಸಂದರ್ಭದಲ್ಲಿ ಅವರನ್ನು ಭೇಟಿಯಾಗಲು ಪ್ರಯತ್ನಿಸಿದ್ದರು. ಆದರೆ, ಅವರ ಬಯಕೆ ಈಡೇರಿರಲಿಲ್ಲ.
A man in Karnataka, identified as Arun Varnekar, known for his unwavering support for Prime Minister Narendra Modi, shocked many by chopping off the forefinger of his left hand. Varnekar performed this extreme act as a sacrifice to Goddess Kali, praying for PM Modi's third term in office. Residing in Sonarwada area of Karwar city, Varnekar's dedication to PM Modi goes beyond conventional measures. He has constructed a temple dedicated to the Prime Minister in his home and conducts regular special prayers in his honor.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
24-02-25 02:50 pm
Mangalore Correspondent
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
Singari Beedi Robbery, IPS, crime: ಸಿಂಗಾರಿ ಬೀ...
21-02-25 08:22 pm
24-02-25 10:51 pm
HK News Desk
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm
Visa fraud, Bangalore crime, Arrest: ವಿದೇಶಿ ವ...
22-02-25 10:36 pm