ಬ್ರೇಕಿಂಗ್ ನ್ಯೂಸ್
06-04-24 10:42 pm HK News Desk ಕರ್ನಾಟಕ
ವಿಜಯಪುರ, ಏ 06: ಸಚಿವ ದಿನೇಶ್ ಗುಂಡೂರಾವ್ ಮನೆಯಲ್ಲೇ ಅರ್ಧ ಪಾಕಿಸ್ತಾನ ಇದೆ. ದಿನೇಶ್ ಗುಂಡೂರಾವ್‌ಗೆ ದೇಶ ವಿರೋಧಿ ಹೇಳಿಕೆ ನಿಡೋದು ಚಟವಾಗಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿಕಾರಿದ್ದಾರೆ. ಈ ಮೂಲಕ ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಎನ್‌ಐಎ ಅಧಿಕಾರಿಗಳು ಬಿಜೆಪಿ ಪದಾಧಿಕಾರಿಯನ್ನು ಬಂಧಿಸಿದ್ದಾರೆ ಎಂದು ಪೋಸ್ಟ್ ಮಾಡಿದ್ದ ಸಚಿವರಿಗೆ ತಿರುಗೇಟು ನೀಡಿದ್ದಾರೆ.
ವಿಜಯಪುರದ ಬಿಜೆಪಿ ಕಚೇರಿ ಬಳಿ ಮಾತನಾಡಿದ ಅವರು, ನಮ್ಮ ಪದಾಧಿಕಾರಿ ಮೊಬೈಲ್ ಸಿಮ್ ವ್ಯಾಪಾರಿಗಳಿದ್ದಾರೆ. ಅವರ ಬಳಿ ಯಾರು ಬಂದಿರುತ್ತಾರೆ ಏನು ಗೊತ್ತಾಗುತ್ತದೆ. ಬಿಜೆಪಿ, ಕಾಂಗ್ರೆಸ್ ಇರಲಿ, ಯಾರೇ ಇರಲಿ ತನಿಖೆಗೆ ಸಹಕಾರ ನೀಡೋದಾಗಿ ಹೇಳಿದ್ದಾನೆ ಎಂದು ಹೇಳಿದರು.
ಕರಾವಳಿಯಲ್ಲಿ ಮೂರು ಕ್ಷೇತ್ರಗಳನ್ನು ಗೆಲ್ಲುತ್ತೇವೆ!
ಇನ್ನು, ಕರಾವಳಿ ಭಾಗದಲ್ಲಿ ಮೂರಕ್ಕೆ ಮೂರು ಲೋಕಸಭಾ ಕ್ಷೇತ್ರವನ್ನು ನಾವು ಗೆಲ್ಲುತ್ತೇವೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ - ಚಿಕ್ಕಮಗಳೂರು ಕ್ಷೇತ್ರಗಳನ್ನು ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಇಡೀ ದೇಶದಲ್ಲಿ ಪ್ರಧಾನಿ ನರೇಂದ್ರ ಅನಿವಾರ್ಯ ಮತ್ತು ಅವಶ್ಯ ಎಂಬುದು ಸಾಮಾನ್ಯ ಮತದಾರರಿಗೂ ಅನಿಸಿದೆ. ಕೆಲ ಕಾರ್ಯಕರ್ತರಲ್ಲಿ ವಿಚಾರದಲ್ಲಿ ಅಸಮಾಧಾನ ಇದ್ದರೂ ಸಹ ದೇಶದ ಹಿತ ದೃಷ್ಟಿಯಿಂದ ಎಲ್ಲರೂ ಒಕ್ಕಟ್ಟಾಗಿ ಬಿಜೆಪಿ ಗೆಲ್ಲಿಸುತ್ತಾರೆ. ರಾಜ್ಯದ 28 ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ವಿಶ್ವಾಸ ಇದೆ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು.
ಹುಚ್ಚು ಶಾಸಕ ಯತ್ನಾಳ್ ;
‘ಭಾರತೀಯ ಭ್ರಷ್ಟರ ಪಾರ್ಟಿಯಲ್ಲಿ ಯತ್ನಾಳ್ ಎಂಬ ಹುಚ್ಚು ಶಾಸಕ ಬಾಯಿಗೆ ಬಂದಂತೆ ಮಾತನಾಡುತ್ತಲೇ ಇರುತ್ತಾರೆ. ಯತ್ನಾಳ್‌ರಂತೆ ನಾವು ಮನೆ ಒಡೆಯುವ ಕೆಲಸ, ಕೀಳು ಭಾಷೆ ಬಳಕೆ ಮಾಡುವುದಿಲ್ಲ’ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
‘ಸಚಿವ ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನವಿದೆ. ದೇಶ ವಿರೋಧಿ ಹೇಳಿಕೆ ನೀಡುವುದು ಅವರ ಚಟವಾಗಿದೆ’ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರ ಹೇಳಿಕೆಗೆ ‘X’ (ಟ್ವೀಟ್) ಮೂಲಕ ಪ್ರತಿಕ್ರಿಯಿಸಿರುವ ದಿನೇಶ್, ‘ಮತಾಂಧತೆಯಲ್ಲಿ ಬಿದ್ದು ಹೊರಳಾಡುತ್ತಿರುವ ಯತ್ನಾಳ್ ಮಾತೆತ್ತಿದರೆ ಪಾಕಿಸ್ತಾನ, ಪಾಕಿಸ್ತಾನ ಎನ್ನುತ್ತಾರೆ. ಅವರಿಗೆ ಪಾಕಿಸ್ತಾನದ ಮೇಲೆ ಅಷ್ಟೊಂದು ಪ್ರೀತಿಯಿದ್ದರೆ ಅಲ್ಲಿಗೇ ಹೋಗಲಿ’ ಎಂದಿದ್ದಾರೆ.
Yatnal says Dinesh Gundu Rao house half of Pakistan sparks row. Karnataka BJP MLA Basanagouda Patil Yatnal took a personal jibe at Congress leader Dinesh Gundu Rao over his remarks questioning BJP's link to the March 1 Rameshwaram Cafe blast. Referring to Gundu Rao’s marriage to Tabu Rao, a Muslim woman, Yatnal claimed that the Congress leader’s house is “half of Pakistan”.
15-07-25 01:32 pm
Bangalore Correspondent
ನಟಿ ಸರೋಜಾ ದೇವಿ- ಎಸ್ಸೆಂ ಕೃಷ್ಣ ಪ್ರೇಮ ಪ್ರಸಂಗ ; ಮ...
15-07-25 12:27 pm
ಕೇವಲ 2 ಸಾವಿರ ಲಂಚ ಕೇಳಿ ಸಿಕ್ಕಿಬಿದ್ದ ಪಂಚಾಯತ್ ಪಿಡ...
15-07-25 10:35 am
ಧರ್ಮಸ್ಥಳದಲ್ಲಿ 20 ವರ್ಷಗಳಲ್ಲಾದ ಯುವತಿಯರ ನಾಪತ್ತೆ-...
14-07-25 10:44 pm
Shiradi Ghat Accident, Car: ಶಿರಾಡಿ ಘಾಟ್ ; ರಸ್...
14-07-25 01:43 pm
14-07-25 03:24 pm
HK News Desk
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
15-07-25 02:28 pm
HK News Desk
Mangalore Accident, Alto Car: ದೆಹಲಿಯಿಂದ ಬಂದ ಗ...
15-07-25 10:32 am
ಕಲ್ಲು ಮರಳಿನ ಸಮಸ್ಯೆಯಿಂದ ಜನರ ತಲೆಗೆ ಚಪ್ಪಡಿ ಕಲ್ಲು...
14-07-25 09:55 pm
Mrpl leakgae, Death, Fight: ಅನಿಲ ಸೋರಿಕೆಯಿಂದ ಇ...
14-07-25 07:56 pm
Mangalore, Help: ಅಪಘಾತದಲ್ಲಿ ಬಡ ಮಹಿಳೆಯ ತಲೆಗೆ ತ...
13-07-25 11:13 pm
15-07-25 06:07 pm
Mangalore Correspondent
ಹಿಂದು ಯುವತಿಯರನ್ನು ಮತಾಂತರ ಮಾಡುತ್ತಿದ್ದಾನೆಂದು ಸು...
15-07-25 05:21 pm
Mangalore Police, Arrest, NITTE College Stude...
15-07-25 01:13 pm
Mangalore Crime, Police: ದುಬೈನಲ್ಲಿ ವಹಿವಾಟು ;...
15-07-25 11:38 am
ಮ್ಯಾಟ್ರಿಮನಿ ಸೈಟಲ್ಲಿ ಸಿಕ್ಕ ಗೆಳತಿಯಿಂದಲೇ ಮೋಸ ; ಆ...
13-07-25 05:23 pm