ಬ್ರೇಕಿಂಗ್ ನ್ಯೂಸ್
10-04-24 06:19 pm HK News Desk ಕರ್ನಾಟಕ
ವಿಜಯಪುರ, ಏ 10: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಕಲಾ ವಿಭಾಗ ಕನ್ನಡ ಮಾಧ್ಯಮದಲ್ಲಿ ವಿಜಯಪುರ ನಗರದ ಎಸ್.ಎಸ್. ಪಿ.ಯು ಕಾಲೇಜಿನ ವಿದ್ಯಾರ್ಥಿ ವೇದಾಂತ ಜ್ಞಾನೋಬಾ ನಾವಿ 596 ಅಂಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಕಲಬೀಳಗಿ ಗ್ರಾಮದವರಾದ ವೇದಾಂತ ನಾವಿ ವಿಜಯಪುರ ನಗರದ ಶಾಸ್ತ್ರಿನಗರದ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯದಲ್ಲಿ ಇದ್ದುಕೊಂಡು ಎಸ್.ಎಸ್. ಪಿಯು ಕಾಲೇಜಿನಲ್ಲಿ ಓದಿದರು.
ರಾಜ್ಯಕ್ಕೆ ಪ್ರಥಮ ಬರುತ್ತೇನೆ ಎಂಬ ನಿರೀಕ್ಷೆ ಇರಲಿಲ್ಲ, ಖುಷಿಯಾಗಿದೆ. ಓದಿಗಾಗಿ ಹೆಚ್ಚು ಸಮಯ ಮೀಸಲಿಟ್ಟಿರಲಿಲ್ಲ. ಅವಕಾಶ ಸಿಕ್ಕಾಗ ಓದುತ್ತಿದ್ದೆ. ಯಾವುದೇ ಟ್ಯೂಷನ್‌ಗೆ ಹೋಗಿಲ್ಲ, ಪ್ರತಿ ದಿನ ಕಾಲೇಜಿನಲ್ಲಿ ಮಾಡುವ ಪಾಠಗಳನ್ನು ಅಂದಂದೆ ಓದಿಕೊಳ್ಳುತ್ತಿದ್ದೆ’ ಎಂದು ವೇದಾಂತ ತಿಳಿಸಿದರು.
ಪದವಿ ಓದಿದ ಬಳಿಕ ಐಎಎಸ್, ಕೆಎಎಸ್‌ನಂತಹ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಆದ್ಯತೆ ನೀಡುತ್ತೇನೆ ಎಂದು ಹೇಳಿದರು.
ಕ್ಷೌರಿಕ ಕೆಲಸ ಮಾಡುತ್ತಿದ್ದ ತಂದೆ ಕೋವಿಡ್ ಸಂದರ್ಭದಲ್ಲಿ ತೀರಿಕೊಂಡ ಪರಿಣಾಮ ಕುಟುಂಬ ಆರ್ಥಿಕ ಸಂಕಷ್ಟಕ್ಕೆ ಒಳಗಾಯಿತು. ಬಡತನದಲ್ಲೇ ತಾಯಿ, ಅಕ್ಕ ನೀಡಿದ ಸಹಕಾರ ಹಾಗೂ ಕಾಲೇಜಿನ ಉಪನ್ಯಾಸಕರ ಮಾರ್ಗದರ್ಶನದಿಂದ ಹೆಚ್ಚು ಅಂಕಗಳಿಸಲು ಸಹಾಯವಾಯಿತು ಎಂದು ವೇದಾಂತ ತಿಳಿಸಿದರು.
ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ ವೇದಾಂತ ನಾವಿ ಅವರನ್ನು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲ್ ಅವರು ಸಿಹಿ ತಿನ್ನಿಸಿ, ಸನ್ಮಾನಿಸಿ ಶುಭ ಹಾರೈಸಿದರು.
ಕಲಬೀಳಗಿಯ ಬಂಜಾರ ವಿದ್ಯಾ ವರ್ದಕ ಸಂಘದ ಪ್ರೌಢಶಾಲೆಯಲ್ಲಿ ಎಸ್‌ಎಸ್‌ಎಲ್‌ಸಿ ಓದಿರುವ ವೇದಾಂತ ನಾವಿ ಶೇ 96.96 ರಷ್ಟು ಅಂಕಗಳಿಸಿ, ಉತ್ತಮ ಸಾಧನೆ ಮಾಡಿದ್ದರು.
The Arts stream of the 2nd PUC annual examination has been conducted in Kannada medium by S.S. Vedanta Gyanoba Navi, a student of PU College, topped the state with 596 marks.
28-07-26 08:12 pm
HK News Staffer
ಶಿಕ್ಷಕರ ಕೊರತೆ ಇರುವ ಸರ್ಕಾರಿ ಶಾಲೆಗಳನ್ನು ಖಾಸಗಿ ಶ...
25-07-26 03:06 pm
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
28-07-26 11:56 am
HK News Staffer
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
28-07-26 10:28 pm
HK News Desk
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
ಜಾಲತಾಣದಲ್ಲಿ ಜೆನ್ ಜೀಗಳ ಅಬ್ಬರ ; ಕಾಕ್ರೋಚ್ ಬೆನ್ನಲ...
27-07-26 09:48 pm
ಕ್ಯಾನ್ಸರ್ ವಿರುದ್ಧ ಹೋರಾಟದ ನಡುವೆಯೇ ಸೇವಾ ಕೈಂಕರ್ಯ...
27-07-26 08:24 pm
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
28-07-26 08:11 pm
HK News Staffer
Lavanya Murder Case, News: ಲಾವಣ್ಯ ಹತ್ಯೆ ಪ್ರಕರ...
28-07-26 07:07 pm
ವಿಚ್ಛೇದಿತ ಮಹಿಳೆಗೆ ಫೇಸ್ಬುಕ್ನಲ್ಲಿ ಪ್ರೀತಿಯ ನಾಟ...
28-07-26 12:28 pm
12 ವರ್ಷಗಳ ಹಿಂದಿನ ಗಂಗಾಧರ ಪಾಂಗಾಳ ಕೊಲೆ ಪ್ರಕರಣ ;...
27-07-26 11:07 pm
ಕಾಪುವಿನಲ್ಲಿ ಎಕ್ಸ್ಪ್ರೆಸ್ ಬಸ್ಗಳ ದರ್ಪ! ಟೈಮಿಂಗ್...
27-07-26 10:21 pm