ಬ್ರೇಕಿಂಗ್ ನ್ಯೂಸ್
10-04-24 07:59 pm Bangalore Correspondent ಕರ್ನಾಟಕ
ಬೆಂಗಳೂರು, ಎ.10: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಬಗ್ಗೆ ಅವಹೇಳನಕಾರಿಯಾಗಿ ಬರೆದ ಪತ್ರಿಕಾ ತುಣುಕು ಮಾದರಿಯನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಬಗ್ಗೆ ಬೆಂಗಳೂರು ಪಶ್ಚಿಮ ಸೈಬರ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಹಿಂದುಗಳ ಮತ ನಮಗೆ ಬೇಡ, ಮುಸ್ಲಿಮರ ಮತ ಸಾಕು ; ಸಿದ್ದರಾಮಯ್ಯ ಎಂಬ ಹೆಸರಲ್ಲಿ ಬರೆದ ಪತ್ರಿಕಾ ವರದಿ ಮಾದರಿಯ ಫೇಕ್ ತುಣುಕನ್ನು ವಾಟ್ಸಪ್, ಫೇಸ್ಬುಕ್, ಟ್ವಿಟರ್ ಜಾಲತಾಣದಲ್ಲಿ ಹಾಕಲಾಗಿತ್ತು. ಈ ಬಗ್ಗೆ ನಾಗರಾಜು ಎಂಬವರು ಪೊಲೀಸರಿಗೆ ದೂರು ನೀಡಿದ್ದರು. ಈ ಕುರಿತು ಎಫ್ಐಆರ್ ದಾಖಲಾಗುತ್ತಿದ್ದಂತೆ ಸಿಎಂ ಸಿದ್ದರಾಮಯ್ಯ ತಮ್ಮ ಟ್ವಿಟರ್ ನಲ್ಲಿ ಎಫ್ಐಆರ್ ಪ್ರತಿ ಹಾಕ್ಕೊಂಡು ಹೀಗೆ ಬರೆದಿದ್ದಾರೆ.

'ವಾರ್ತಾ ಪತ್ರಿಕೆಯನ್ನೇ ಹೋಲುವ ನಕಲಿ ಸುದ್ದಿ ತುಣುಕೊಂದನ್ನು ಸೃಷ್ಟಿಸಿ, ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಕುಕೃತ್ಯದಲ್ಲಿ ಭಾಗಿಯಾದ ಪ್ರಭಾಕರ್ ರೆಡ್ಡಿ, ವಸಂತ ಗಿಳಿಯಾರ್, ವಿಜಯ್ ಹೆರಗು ಮುಂತಾದ ಕಿಡಿಗೇಡಿಗಳ ವಿರುದ್ಧ ದೂರು ದಾಖಲಾಗಿದೆ.
ಫೇಕ್ ನ್ಯೂಸ್‌ಗಳ ಸೃಷ್ಟಿ ಮತ್ತು ಹರಡುವಿಕೆಯನ್ನು ನಮ್ಮ ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಯಾರೂ ಕೂಡ ಅಂತಹ ಕಾನೂನುಬಾಹಿರ ಕೃತ್ಯಕ್ಕೆ ಕೈಹಾಕಬಾರದು ಎಂದು ಹಲವು ಬಾರಿ ಎಚ್ಚರಿಕೆಯನ್ನೂ ನೀಡಿದ್ದೆವು. ಆದರೂ ನನ್ನ ವಿರುದ್ಧವೇ ಸುಳ್ಳು ಸುದ್ದಿ ಸೃಷ್ಟಿಸಿ, ಜನರ ದಾರಿ ತಪ್ಪಿಸಲು ಯತ್ನಿಸಿದ್ದಾರೆ. ಕಾನೂನಿನ ಮೂಲಕ ಈ ಪ್ರಕರಣವನ್ನು ತಾರ್ಕಿಕ ಅತ್ಯಂಕ್ಕೆ ಕೊಂಡೊಯ್ಯುತ್ತೇವೆ ' ಎಂದು ಮುಖ್ಯಮಂತ್ರಿ ಟ್ವಿಟರ್ ನಲ್ಲಿ ಪೋಸ್ಟ್ ಬರೆದಿದ್ದಾರೆ.
ಎಫ್ಐಆರ್ ನಲ್ಲಿ ಪ್ರಭಾಕರ ರೆಡ್ಡಿ, ವಸಂತ ಗಿಲಿಯಾರ್, ವಿಜಯ್ ಹೆರಗು, ಪಾಂಡು ಮೋದಿ ಪರಿವಾರ ಹಾಗೂ ಫೇಸ್ಬುಕ್ ಪೇಜ್ ಗಳಾದ ಬಿಎಸ್ವೈ ಸಪೋರ್ಟರ್ಸ್, ದಾವಣಗೆರೆ ಬಿಜೆಪಿ, ದಾತ್ರಿ ಗೋಶಾಲೆ ಗೋಳೂರು ವಿರುದ್ಧ ಪ್ರಕರಣ ದಾಖಲಾಗಿದೆ.
Fake video circulation of CM Siddaramaiah viral, Journalist Vasanth Giliyar and many others booked. Case filed at Bangalore Cyber crime police station.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
12-01-26 05:01 pm
Mangaluru Staffer
ಎಕ್ಸ್ ನಲ್ಲಿ ಅಶ್ಲೀಲ ಕಂಟೆಂಟ್ ; ಐಟಿ ಸಚಿವಾಲಯದ ಒತ್...
11-01-26 06:07 pm
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 06:28 pm
Mangaluru Staffer
Mangalore Crime: ಬಾಂಗ್ಲಾದವನೆಂದು ಹೇಳಿ ವಲಸೆ ಕಾರ...
12-01-26 01:54 pm
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm