ಬ್ರೇಕಿಂಗ್ ನ್ಯೂಸ್
12-04-24 03:29 pm HK NEWS ಕರ್ನಾಟಕ
ಬೆಂಗಳೂರು, ಏ 12: ತಮಿಳುನಾಡಿನ ಧರ್ಮಪುರಿಗೆ ಚುನಾವಣಾ ಕರ್ತವ್ಯಕ್ಕೆ ತೆರಳುತ್ತಿದ್ದ ಕರ್ನಾಟಕ ಮೀಸಲು ಪಡೆಯ ಹಿರಿಯ ಅಧಿಕಾರಿ ಮತ್ತು ಕಾನ್ಸ್ಟೇಬಲ್ಗಳು ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಹಾಗೂ ಮತ್ತೊಬ್ಬ ಕಾನ್ಸ್ಟೇಬಲ್ ಗಾಯಗೊಂಡಿದ್ದಾರೆ.
ಕರ್ನಾಟಕ ಮೀಸಲು ಪಡೆಯ ಕೋರಮಂಗಲದಲ್ಲಿರುವ 3ನೇ ಬೆಟಾಲಿಯನ್‌ನ 3ನೇ ಸಹಾಯಕ ಕಮಾಂಡೆಂಟ್ ಟಿ.ಪ್ರಭಾಕರ್ ಮತ್ತು ವಿಜಯಪುರದ ಐಆರ್‌ಬಿ (ಇಂಡಿಯನ್ ರಿಸರ್ವ್ ಬೆಟಾಲಿಯನ್)ನ ಕಾನ್ಸ್ಟೇಬಲ್ ವಿಠಲ್ ಗಡಾಧರ್, ತಮಿಳುನಾಡಿನ ಮೀಸಲು ಪಡೆಯ ಕಾನ್ಸ್ಟೇಬಲ್ ದಿನೇಶ್ ಎಂಬವವರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ವಿಜಯಪುರದ ಐಆರ್‌ಬಿ ಡೆಪ್ಯೂಟಿ ಕಮಾಂಡೆಂಟ್ ಯು.ಎನ್.ಹೇಮಂತ್ ಕುಮಾರ್ ಮತ್ತು ಕಾನ್ಸ್ಟೇಬಲ್ ಜಯಕುಮಾರ್ ಎಂಬುವವರಿಗೆ ಗಂಭೀರ ಗಾಯಗಳಾಗಿದ್ದು, ಸಮೀಪದ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಕೆಎಸ್‌ಆರ್‌ಪಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
10 ದಿನಗಳ ಹಿಂದೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿಯ ತುಕಡಿಯನ್ನು ತಮಿಳುನಾಡಿನ ಧರ್ಮಪುರಿಗೆ ನಿಯೋಜಿಸಲಾಗಿತ್ತು. ಅದಕ್ಕೆ ಹೇಮಂತ್ ಕುಮಾರ್ ಮುಂದಾಳತ್ವ ವಹಿಸಿದ್ದರು. ಗುರುವಾರ ಸಂಜೆ 5.30ರ ಸುಮಾರಿಗೆ ತಿರುವಣ್ಣಾಮಲೈನಿಂದ ದಿಂಡಿವಣ್ಣಂ ಕಡೆಗೆ ಜೀಪ್‌ನಲ್ಲಿ ಐವರು ಅಧಿಕಾರಿ ಮತ್ತು ಸಿಬ್ಬಂದಿ ತೆರಳುತ್ತಿದ್ದರು. ಕಮಾಂಡೆಂಟ್ ಪ್ರಭಾಕರ್ ಜೀಪ್‌ನ ಮುಂಭಾಗ ಕುಳಿತಿದ್ದರು. ಹಿಂಭಾಗದಲ್ಲಿ ಕಾನ್ಸ್ಟೇಬಲ್ ವಿಠಲ್, ಡೆಪ್ಯೂಟಿ ಕಮಾಂಡೆಂಟ್ ಹೇಮಂತ್ ಹಾಗೂ ತಮಿಳುನಾಡಿನ ಸಿಬ್ಬಂದಿ, ಕಾನ್ಸ್ಟೇಬಲ್ ಇದ್ದರು.
ಮಾರ್ಗ ಮಧ್ಯೆ ಅತಿ ವೇಗವಾಗಿ ಬಂದ ತಮಿಳುನಾಡಿನ ಬಸ್ ಇವರ ಜೀಪಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರಭಾಕರ್, ವಿಠಲ್, ತಮಿಳುನಾಡಿನ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆ ಬಗ್ಗೆ ಸಂಪೂರ್ಣ ಮಾಹಿತಿ ಸಂಗ್ರಹಿಸಲು ಕೆಎಸ್‌ಆರ್‌ಪಿಯ ಹಿರಿಯ ಅಧಿಕಾರಿ ಭೀಮಪ್ಪ ಎಂಬವರನ್ನು ನಿಯೋಜಿಸಲಾಗಿದ್ದು, ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಬಳಿಕ ಅಧಿಕಾರಿ-ಸಿಬ್ಬಂದಿಯ ಮರಣೋತ್ತರ ಪರೀಕ್ಷೆ ಹಾಗೂ ಮೃತದೇಹಗಳನ್ನು ರಾಜ್ಯಕ್ಕೆ ತರುವ ವ್ಯವಸ್ಥೆ ಮಾಡಲಿದ್ದಾರೆ ಎಂದು ಕೆಎಸ್‌ಆರ್‌ಪಿಯ ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
A KSRP police officer on duty from Karnataka is killed in a road accident in Tamil Nadu. The deceased has been identified as Hemanth Kumar from Vijayapura. He was on his way to the election duty in Tamil Nadu
26-02-25 10:43 pm
Bangalore Correspondent
Yellow alert, heatwave threat, Mangalore: ಬಿಸ...
26-02-25 06:14 pm
Minister Ishwara Khandre, Elephant Sanctuary...
25-02-25 10:30 pm
Belagavi Accident, Kumbh Mela: ಬಸ್ ಗೆ ಡಿಕ್ಕಿ...
24-02-25 01:36 pm
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
26-02-25 05:38 pm
HK News Desk
Corruption, Amit Shah, MK Stalin: ಕ್ಷೇತ್ರ ಪುನ...
26-02-25 05:11 pm
CBI raid, Gain Bitcoin: 6,600 ಕೋಟಿ ರೂ. ಕ್ರಿಸ್...
26-02-25 12:47 pm
Vijay Wardhan, UPSC story: Success story 35 ಬ...
24-02-25 10:14 pm
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
26-02-25 10:15 pm
Mangalore Correspondent
Mangaluru-Kabaka Train, Brijesh Chowta: ಮಂಗಳೂ...
26-02-25 03:40 pm
Urwa Police, Mangalore, Selfie, Suspend: ಸೈಬರ...
25-02-25 10:58 pm
C-Band Doppler Weather Radar, Mangalore: ಮಂಗಳ...
25-02-25 09:34 pm
Bantwal accident, Mangalore: ಚಾಲಕಿಯ ಧಾವಂತಕ್ಕೆ...
25-02-25 02:34 pm
26-02-25 10:48 pm
HK News Desk
Sirsi Crime, stabbing: ಶಿವರಾತ್ರಿ ಹಬ್ಬಕ್ಕೆ ಮನೆ...
26-02-25 01:27 pm
Urwa Police, Mangalore Crime, online Fraud: ಕ...
25-02-25 08:10 pm
Mangalore, Kotekar bank robbery, Bhaskar Belc...
25-02-25 05:18 pm
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm