ಬ್ರೇಕಿಂಗ್ ನ್ಯೂಸ್
13-04-24 02:53 pm HK NEWS ಕರ್ನಾಟಕ
ವಿಜಯಪುರ, ಏ 13: ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿ ಡಿಕ್ಕಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದ ಬಳಿ ಘಟನೆ ನಡೆದಿದೆ. ಎಲ್ಲರೂ ಒಂದೇ ಕುಟುಂಬದವರಾಗಿದ್ದು, ಸಂಬಂಧಿಗಳಾಗಿದ್ದರು ಎಂದು ತಿಳಿದು ಬಂದಿದೆ.
ಮೃತರನ್ನು ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಬರಟಗಿ ತಾಂಡಾದ ಅರ್ಜುನ ರಜಪೂತ (32), ಬಾಗಲಕೋಟೆ ಜಿಲ್ಲೆಯ ಮುಧೋಳ ಪಟ್ಟಣದ ರವಿನಾಥ ಸುನಿಲಾಲ್ ಪತ್ತಾರ (52), ಪುಷ್ಟಾ ರವಿನಾಥ ಪತ್ತಾರ (40) ಹಾಗೂ ಮುಧೋಳ ಪಟ್ಟಣದ ಮೇಘರಾಜ ರಜಪೂತ (12) ಎಂದು ಗುರುತಿಸಲಾಗಿದೆ. ಗಂಭೀರವಾಗಿ ಗಾಯಗೊಂಡ ಮೂವರನ್ನು ವಿಜಯಪುರದ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳನ್ನು ಜಯಶ್ರೀ ರಜಪೂತ, ನಯಾರಾ ರಜಪೂತ ಹಾಗೂ ಪ್ರೇಮಸಿಂಗ್ ರಜಪೂತ ಎಂದು ಗುರುತಿಸಲಾಗಿದೆ. ಇವರಲ್ಲಿ ಬಾಲಕಿ ನಯಾರಾ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ವಿಜಯಪುರದಿಂದ ಜಮಖಂಡಿಯ ದೇವಸ್ಥಾನಕ್ಕೆ ಕಾರಿನಲ್ಲಿ ಈ 7 ಜನರು ತೆರಳುತ್ತಿದ್ದರು. ಜಮಖಂಡಿಯಿಂದ ಸಿಮೆಂಟ್ ಲೋಡ್ ತುಂಬಿದ್ದ ಲಾರಿಯು ವಿಜಯಪುರದತ್ತ ಬರುತ್ತಿದ್ದ ವೇಳೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಬಬಲೇಶ್ವರ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಸಿಬ್ಬಂದಿ, ಅಪಘಾತದ ರಭಸಕ್ಕೆ ಕಾರಿನಲ್ಲೇ ಸಿಲುಕಿಕೊಂಡಿದ್ದ ಶವಗಳನ್ನು ಸ್ಥಳೀಯರ ನೆರವಿನೊಂದಿಗೆ ಹೊರಗೆ ತೆಗೆದಿದ್ದಾರೆ.
ಈ ಬಗ್ಗೆ ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಎಸ್ಪಿ ಶಂಕರ ಮಾರಿಹಾಳ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಶವಗಳನ್ನು ಮರಣೋತ್ತರ ಪರೀಕ್ಷೆಗೆಂದು ವಿಜಯಪುರ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ಸಾಗಿಸಲಾಗಿದೆ. ಮೃತಪಟ್ಟ ಅರ್ಜುನ ಮತ್ತು ರವಿನಾಥ ಇಬ್ಬರೂ ಬ್ಯಾಂಕ್ ಸಿಬ್ಬಂದಿಯಾಗಿದ್ದು, ವರಸೆಯಲ್ಲಿ ಅಳಿಯ ಮಾವ ಆಗಿದ್ದರು. ಮಾವ ರವಿನಾಥನಿಗೆ ವಿಜಯಪುರಕ್ಕೆ ವರ್ಗವಾಗಿದ್ದು, ಅವರ ಮನೆಯ ವಸ್ತುಗಳನ್ನ ಮುಧೋಳದಿಂದ ವಿಜಯಪುರಕ್ಕೆ ಶಿಫ್ಟ್ ಮಾಡಲೆಂದು ತೆರಳುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ ಎಂದು ಸಂಬಂಧಿಕರು ಮಾಹಿತಿ ನೀಡಿದ್ದಾರೆ.
Four persons were killed on the spot in a road accident at Arjunagi village in Vijayapura district in Karnataka, on Saturday morning. According to police, the accident took place following a head-on collision between their car and a truck. All the deceased were travelling to a temple in Jamkhandi town from Vijayapura city.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 12:24 pm
Mangalore Correspondent
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
Siddaramaiah, Priyank Kharge Mangalore, D K S...
22-02-25 05:21 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm