ಬ್ರೇಕಿಂಗ್ ನ್ಯೂಸ್
18-04-24 01:42 pm Bangalore Correspondent ಕರ್ನಾಟಕ
ಬೆಂಗಳೂರು, ಎ.18: ಲೋಕಸಭೆ ಚುನಾವಣೆ ಇನ್ನೇನು ಒಂದು ವಾರವಷ್ಟೇ ಬಾಕಿ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಎ.24ರಂದು ಉಡುಪಿಗೆ ಆಗಮಿಸಲಿದ್ದಾರೆ. ಸಂಜೆ 4ಕ್ಕೆ ಮಲ್ಪೆಯ ಸಮುದ್ರ ತೀರದಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ ಎಂದು ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ತಿಳಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಚುನಾವಣೆ ಪ್ರಚಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಏ.20ಕ್ಕೆ, ಅಮಿತ್ ಶಾ 23 ಮತ್ತು 24ರಂದು ಆಗಮಿಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ರಾಜನಾಥ್ ಸಿಂಗ್ ಅವರೂ ಬರಲಿದ್ದು ದಿನಾಂಕ ನಿಗದಿ ಆಗಬೇಕಾಗಿದೆ ಎಂದು ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಏ. 20ರಂದು ಮಧ್ಯಾಹ್ನ 3.30ಕ್ಕೆ ಚಿಕ್ಕಬಳ್ಳಾಪುರದಲ್ಲಿ ಮತ್ತು ಸಂಜೆ 5.30ಕ್ಕೆ ಬೆಂಗಳೂರು ಅರಮನೆ ಮೈದಾನದಲ್ಲಿ ‘ವಿಜಯ ಸಂಕಲ್ಪ’ ಸಮಾವೇಶಗಳಲ್ಲಿ ಭಾಗವಹಿಸಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಏ.23ರಂದು ಬೆಳಗ್ಗೆ 10ಕ್ಕೆ ಯಶವಂತಪುರದಲ್ಲಿ ರೋಡ್ ಶೋ, 12.30ಕ್ಕೆ ಯಲಹಂಕದಲ್ಲಿ ಸಾರ್ವಜನಿಕ ಸಭೆ, ಸಂಜೆ 4ಕ್ಕೆ ಬೊಮ್ಮನಹಳ್ಳಿಯಲ್ಲಿ ರೋಡ್ ಶೋ, ರಾತ್ರಿ 7ಕ್ಕೆ ಮಹದೇವಪುರದಲ್ಲಿ ರೋಡ್ ಶೋ ಮಾಡಲಿದ್ದಾರೆ.
24ರಂದು ಬೆಳಗ್ಗೆ 10ಕ್ಕೆ ಅಮಿತ್ ಷಾ ಚಿಕ್ಕಮಗಳೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಮಾತನಾಡಲಿದ್ದಾರೆ. ಮಧ್ಯಾಹ್ನ 1ಕ್ಕೆ ತುಮಕೂರಿನಲ್ಲಿ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದು, ಸಂಜೆ 5ಕ್ಕೆ ಹುಬ್ಬಳ್ಳಿಯಲ್ಲಿ ರೋಡ್ ಶೋನಲ್ಲಿ ಪಾಲ್ಗೊಳ್ಳುವರು ಎಂದು ಸುನಿಲ್ ಕುಮಾರ್ ತಿಳಿಸಿದ್ದಾರೆ. ಯೋಗಿ ಆದಿತ್ಯನಾಥ ಏ. 24ರಂದು ಬೆಳಗ್ಗೆ 10ಕ್ಕೆ ಬೆಂಗಳೂರಿನ ಆರ್.ಆರ್.ನಗರದಲ್ಲಿ ರೋಡ್ ಶೋ ನಡೆಸಲಿದ್ದಾರೆ. ಮಧ್ಯಾಹ್ನ 12ಕ್ಕೆ ಮಡಿಕೇರಿಯಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಹಿಸಲಿದ್ದಾರೆ, ಏ.21 ಮತ್ತು 28ರಂದು ‘ನಾನು ಮೋದಿ ಪರಿವಾರ, ಮೋದಿಗಾಗಿ ಮೀಸಲು ಈ ಭಾನುವಾರ' ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಏ.21ರಂದು ರಾಜ್ಯದ ವಿವಿಧೆಡೆ 15 ಲಕ್ಷಕ್ಕೂ ಹೆಚ್ಚು ಮೋದಿ ಅಭಿಮಾನಿಗಳು ಮತ್ತು ಬೆಂಬಲಿಗರು ಪ್ರಚಾರದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 21ರಂದು, ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 24ರಂದು ರಾಜ್ಯ ಪ್ರವಾಸ ಮಾಡಲಿದ್ದಾರೆ ಎಂದರು. ಬೆಂಗಳೂರಿನ ವಿವಿಧ ಬಡಾವಣೆಗಳು, ಬೀದಿ, ಉದ್ಯಾನಗಳಲ್ಲಿ ಪ್ರಚಾರ ನಡೆಸಲಿದ್ದಾರೆ. ಮೊದಲ ಹಂತದ ಚುನಾವಣೆ ನಡೆಯುವ 28 ಸಾವಿರ ಬೂತ್‌ಗಳಲ್ಲಿ ಪ್ರತಿ ಬೂತ್‌ನಲ್ಲಿ ತಲಾ 50 ಕಾರ್ಯಕರ್ತರು ಕಾರ್ಯ ನಿರ್ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.
Bengaluru, Apr 17 (PTI) Prime Minister Narendra Modi will be in Karnataka on April 20 to address a public meeting in Bengaluru and Chikkaballapura, BJP election management committee state coordinator and state general secretary V Sunil Kumar said on Wednesday.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm