ಬ್ರೇಕಿಂಗ್ ನ್ಯೂಸ್
18-04-24 06:42 pm HK News Desk ಕರ್ನಾಟಕ
ಮಂಡ್ಯ, ಎ.18: ಪತಿಯ ಮೇಲಿನ ದ್ವೇಷದಿಂದ ತಾಯಿಯೇ ತನ್ನ ಅವಳಿ ಜವಳಿ ಮಕ್ಕಳಿಗೆ ವಿಷ ಉಣಿಸಿದ್ದಲ್ಲದೆ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಮಂಡ್ಯದಲ್ಲಿ ನಡೆದಿದೆ. ಘಟನೆಯಲ್ಲಿ ಏನೂ ಅರಿಯದ ಇಬ್ಬರು ಮುಗ್ಧ ಕಂದಮ್ಮಗಳು ಅಸುನೀಗಿವೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ಪೂಜಾ ತನ್ನ ಪತಿ ಪ್ರಸನ್ನ ಮೇಲಿನ ಕೋಪದಲ್ಲಿ ಮಕ್ಕಳಿಗೆ ವಿಷ ಉಣಿಸಿದ್ದಾಳೆ. ತ್ರಿಶುಲ್ ಮತ್ತು ತ್ರಿಶಾ ಎಂಬ ಅವಳಿ ಮಕ್ಕಳು ಹಾಗೂ ಇನ್ನೊಬ್ಬ ಮಗಳು ಬೃಂದಾಗೆ ನಿನ್ನೆ ರಾತ್ರಿ ವಿಷ ಉಣಿಸಿದ್ದಳು. ಇಂದು ಬೆಳಗ್ಗೆ ಇಬ್ಬರು ಮಕ್ಕಳು ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಐಸ್ ಕ್ರೀಂ ತಿಂದು ಮಕ್ಕಳು ಅಸುನೀಗಿದ್ದಾರೆ ಎಂದು ಸ್ಥಳೀಯವಾಗಿ ಸುದ್ದಿ ಹಬ್ಬಿತ್ತು. ಆದರೆ ಪೊಲೀಸ್ ವಿಚಾರಣೆ ವೇಳೆ ನಿಜ ವಿಚಾರ ಬಯಲಾಗಿದೆ.
ಪೂಜಾ ಮತ್ತು ಆಕೆಯ ಪತಿ ಪ್ರಸನ್ನ ಪದೇ ಪದೇ ಜಗಳವಾಡುತ್ತಿದ್ದರು. ಜಗಳದಿಂದ ಬೇಸತ್ತ ಪೂಜಾ ನಿನ್ನೆ ಮಕ್ಕಳಿಗೆ ವಿಷ ಉಣಿಸಿ ತಾನೂ ತಿಂದಿದ್ದಳು. ಮನೆಯಲ್ಲಿ ಜಿರಳೆಗೆ ಹಾಕುತ್ತಿದ್ದ ಲಕ್ಷ್ಮಣ ರೇಖೆಯನ್ನು ಊಟಕ್ಕೆ ಹಾಕಿ ಮಕ್ಕಳಿಗೆ ತಿನ್ನಿಸಿದ್ದಳು. ಅಸ್ವಸ್ಥರಾಗಿದ್ದ ಪೂಜಾ ಮತ್ತು ಮಕ್ಕಳನ್ನು ಮಂಡ್ಯ ಮಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆಸ್ಪತ್ರೆಯಲ್ಲಿ ಅವಳಿ ಜವಳಿ ಕಂದಮ್ಮಗಳು ಸಾವನ್ನಪ್ಪಿದ್ದು ತಾಯಿ ಪೂಜಾ ಹಾಗೂ ಮೊದಲ ಮಗಳು ಬೃಂದಾಗೆ ಚಿಕಿತ್ಸೆ ನೀಡಲಾಗುತ್ತಿದೆ.
In a shocking incident, a mother allegedly poisoned her twin daughters and tried to commit suicide in Mandya.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm