ಬ್ರೇಕಿಂಗ್ ನ್ಯೂಸ್
18-04-24 07:28 pm HK News Desk ಕರ್ನಾಟಕ
ಹುಬ್ಬಳ್ಳಿ, ಏ 18: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಸದಸ್ಯರ ಮಗಳನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.
ಪಾಲಿಕೆ ಸದಸ್ಯ ನಿರಂಜನ ಹಿರೇಮಠ ಎನ್ನುವರ ಪುತ್ರಿ ನೇಹಾಳನ್ನು ಕಾಲೇಜ್ ಅವರಣದಲ್ಲೇ ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ಹಾಡಹಗಲೆ ಹುಬ್ಬಳ್ಳಿಯ ಬಿವಿಬಿ ಕಾಲೇಜ್ ನಲ್ಲಿರುವಾಗಲೇ ಹತ್ಯೆ ನಡೆದಿರುವುದು ಇಡೀ ನಗರವನ್ನೇ ಬೆಚ್ಚಿಬೀಳಿಸಿದೆ.
ಸದ್ಯ ಮೃತದೇಹವನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಹುಬ್ಬಳ್ಳಿಯ ವಿದ್ಯಾನಗರ ಠಾಣೆಯ ಪೊಲೀಸರು, ಕೊಲೆ ಆರೋಪಿ ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಫಯಾಜ್ ಎನ್ನುವಾತನ್ನು ಬಂಧಿಸಿದ್ದಾರೆ.
ಪ್ರೀತಿ ನಿರಾಕರಿಸಿದ್ದಕ್ಕೆ ಮರ್ಡರ್ :
ಕೊಲೆಯಾದ ನೇಹಾ ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದಳು. ಇನ್ನು ಕೊಲೆ ಆರೋಪಿ ಫಯಾಜ್ ಸಹ ಅದೇ ಕಾಲೇಜಿನಲ್ಲಿ ಬಿಸಿಎ ವ್ಯಾಸಂಗ ಮಾಡುತ್ತಿದ್ದ. ಪ್ರೀತಿ ಮಾಡಲು ನಿರಾಕರಿಸಿದ್ದಕ್ಕೆ ನೇಹಾಳನ್ನು ಕೊಲೆ ಮಾಡಿದ್ದಾನೆ. ಕೆಲ ದಿನಗಳಿಂದ ಪ್ರೀತಿಸುವಂತೆ ನೇಹಾಳ ಬೆನ್ನುಬಿದ್ದಿದ್ದ. ಆದ್ರೆ, ನೇಹಾ ಪ್ರೀತಿಗೆ ನಿರಾಕರಿಸಿದ್ದಳು. ಇದರಿಂದ ಕೋಪಗೊಂಡು ಫಯಾಜ್, ನೇಹಾಳ ಕುತ್ತಿಗೆಯ 2 ಕಡೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಶಾಸಕ ಪ್ರಸಾದ್ ಅಬ್ಬಯ್ಯ ಭೇಟಿ ನೀಡಿ ಪರಿಶೀಲಿಸಿದರು. ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಈಗಾಗಲೇ ಕೊಲೆ ಮಾಡಿರುವ ಆರೋಪಿಯನ್ನ ಬಂಧನ ಮಾಡಲಾಗಿದೆ. ನಿರಂಜನ ಹಿರಮೇಠ ನಮ್ಮ ಪಕ್ಷದ ಪಾಲಿಕೆ ಸದಸ್ಯರು. ಬಹಳ ಒಳ್ಳೆಯ ಹುಡಗಿ, ಯಾವಾಗಲೂ ಅಂಕಲ್ ಎಂದು ಕರೆಯುತ್ತಿದ್ದಳು. ಹುಬ್ಬಳ್ಳಿಯಲ್ಲಿ ಹೀಗಾಗಬಾರದಿತ್ತು ಎಂದರು.
In a shocking incident, Neha Hiremath, daughter of councillor of Hubballi Dharwad Municipal Corporation Niranjan Hiremath, was stabbed to death on the campus of her college in Hubballi on Thursday.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:54 pm
Mangaluru Staffer
Sharmila Death, Murder, Bangalore: ಮಂಗಳೂರಿನ ಟ...
12-01-26 01:31 pm
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm