ಬ್ರೇಕಿಂಗ್ ನ್ಯೂಸ್
19-04-24 10:39 am HK News Desk ಕರ್ನಾಟಕ
ಧಾರವಾಡ, ಏ.19: ಶಿರಹಟ್ಟಿಯ ಫಕೀರೇಶ್ವರ ಮಠದ ದಿಂಗಾಲೇಶ್ವರ ಸ್ವಾಮೀಜಿ ಧಾರವಾಡ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಗುರುವಾರ ನಾಮಪತ್ರ ಸಲ್ಲಿಸಿದ್ದು, 9.74 ಕೋಟಿ ರೂ. ಮೌಲ್ಯದ ಆಸ್ತಿಯನ್ನು ಘೋಷಿಸಿಕೊಂಡಿದ್ದಾರೆ. ಇದರಲ್ಲಿ 1.22 ಕೋಟಿ ರೂ. ಚರಾಸ್ತಿಯಾಗಿದ್ದರೆ, 8.52 ಕೋಟಿ ರೂ. ಸ್ಥಿರಾಸ್ತಿಯನ್ನು ಘೋಷಿಸಿದ್ದಾರೆ. ವಿವಿಧ ಕಡೆ 39.68 ಲಕ್ಷ ರೂ. ಸಾಲವನ್ನು ದಿಂಗಾಲೇಶ್ವರ ಸ್ವಾಮೀಜಿ ಹೊಂದಿದ್ದು, ಮೂರು ಪ್ರಕರಣಗಳು ಸ್ವಾಮೀಜಿ ಮೇಲೆ ಇವೆ.
ನಾಮಪತ್ರ ಅಫಿಡವಿಟ್‌ನಲ್ಲಿ ತಿಳಿಸಿರುವಂತೆ ದಿಂಗಾಲೇಶ್ವರ ಸ್ವಾಮೀಜಿ ಕೈಯಲ್ಲಿ ಸದ್ಯ 1 ಲಕ್ಷದ 25 ಸಾವಿರ ರೂ. ನಗದು ಇದೆ. ವಿವಿಧ ಬ್ಯಾಂಕ್ ಖಾತೆಗಳಲ್ಲಿ 11 ಲಕ್ಷಕ್ಕೂ ಅಧಿಕ ಹಣ ಇದೆ. ಸುಮಾರು 4.75 ಲಕ್ಷ ರೂ. ಮೌಲ್ಯದ ಶೇರುಗಳು ಹಾಗೂ ಬಾಂಡ್‌ಗಳನ್ನು ವಿವಿಧ ಸಹಕಾರಿ ಬ್ಯಾಂಕ್‌ಗಳಲ್ಲಿ ಹೊಂದಿದ್ದಾರೆ. ಇನ್ನು, ಅಫಿಡವಿಟ್‌ನಲ್ಲಿ ಘೋಷಿಸಿರುವಂತೆ ಸ್ವಾಮೀಜಿ ಅವರು ಎರಡು ಟೊಯೊಟೊ ಇನೋವಾ ಕಾರು, ಒಂದು ಟ್ರಾಕ್ಟರ್ ಹಾಗೂ ಒಂದು ಬಸ್ ಅನ್ನು ಹೊಂದಿದ್ದಾರೆ.
ಇನ್ನು, ದಿಂಗಾಲೇಶ್ವರ ಸ್ವಾಮೀಜಿ 39.68 ಲಕ್ಷ ರೂ. ಸಾಲವನ್ನು ಹೊಂದಿದ್ದಾರೆ. ಅದರ ಜೊತೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಮೂರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿದ್ದು, ಮೂರು ಕೂಡ ಜಾತಿ ನಿಂದನೆ ಹಾಗೂ ಹಲ್ಲೆ ನಡೆಸಿರುವುದಕ್ಕೆ ಸಂಬಂಧಿಸಿವೆ. ದಿಂಗಾಲೇಶ್ವರ ಸ್ವಾಮೀಜಿ ತಮ್ಮ ಅಫಿಡವಿಟ್‌ನಲ್ಲಿ ತಾವು ಎಸ್‌ಎಸ್‌ಎಲ್‌ಸಿ ಅನುತ್ತೀರ್ಣಗೊಂಡಿದ್ದಾರೆ.
ಜೋಶಿ ವಿರುದ್ಧ ಸಿಡಿದೆದ್ದಿರುವ ಸ್ವಾಮೀಜಿ!
ದಿಂಗಾಲೇಶ್ವರ ಸ್ವಾಮೀಜಿ ಅವರು ಬಿಜೆಪಿ ಅಭ್ಯರ್ಥಿ ಹಾಗೂ ಹಾಲಿ ಸಂಸದ ಪ್ರಹ್ಲಾದ್ ಜೋಶಿ ವಿರುದ್ಧ ಸಿಡಿದೆದ್ದಿದ್ದು, ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದಾರೆ. ಇಲ್ಲಿ ಮೇ 7ರಂದು ಮತದಾನ ನಡೆಯಲಿದ್ದು, ಜೂನ್ 4ರಂದು ಫಲಿತಾಂಶ ಬರಲಿದೆ. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಕುರುಬ ಸಮುದಾಯದ ವಿನೋದ್ ಅಸೂಟಿ ಅವರಿಗೆ ಟಿಕೆಟ್ ನೀಡಿದ್ದು, ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ
ನಾಡಿಗೆ ಆದರ್ಶವಾಗುವ ಬದಲಿಗೆ ನಾಡಿಗೆ ಮಾರಕವಾಗಿದ್ದಾರೆ. ನಮ್ಮ ಯಾವ ಪ್ರಶ್ನೆಗೂ ಅವರಿಗೆ ಉತ್ತರ ಕೊಡುವ ಮನಸ್ಥಿತಿ ಇಲ್ಲ. ಇವರು ನಾಡಿಗೆ ಕಂಟಕವಾಗಿದ್ದಾರೆ. ಇವರ ಬದಲಾವಣೆಯೇ ನಮ್ಮ ಮೂಲ ಉದ್ದೇಶ. ಜನ ಹಣ ಭಯಕ್ಕೆ ಮತ ಚಲಾಯಿಸದೇ ಸ್ವಾಭಿಮಾನಕ್ಕಾಗಿ ಮತ ಚಲಾಯಿಸಬೇಕು ಎಂದು ಸ್ವಾಮೀಜಿ ಮನವಿ ಮಾಡಿದರು.
ಮಠದಲ್ಲಿ ಗೂಂಡಾಗಿರಿ ;
ಬುಧವಾರ ರಾತ್ರಿ 20 ಜನ ಹೋಗಿ ನಮ್ಮ ಹಿರಿಯ ಗುರುಗಳಿಗೆ ಮಾನಸಿಕ ತೊಂದರೆ ಕೊಟ್ಟಿದ್ದಾರೆ. ಕೊನೆಗೆ ಅಲ್ಲಿನ ಭಕ್ತರು ಅವರನ್ನು ಹೊರಗೆ ಕಳುಹಿಸಿದ್ದಾರೆ. ರಾತ್ರಿ ಹೋಗಿ ಹಿರಿಯರಿಗೆ ತೊಂದರೆ ಕೊಡುತ್ತಿದ್ದಾರೆ ಎಂದು ಆರೋಪಿಸಿದರು. ನೀವು ಯಾವುದೇ ಪ್ರಯತ್ನ ಮಾಡಿದರೂ ಚುನಾವಣೆ ಕಣದಿಂದ ಹಿಂದೆ ಸರಿಯಲ್ಲ. ಕರ್ನಾಟಕದ ಬಹುತೇಕ ಎಲ್ಲ ಸ್ವಾಮೀಜಿ ನಮ್ಮ ವಿಚಾರ ಬೆಂಬಲಿಸಿದ್ದಾರೆ ಎಂದು ಹೇಳಿದರು.
ಜೈನ್ ಮುನಿ ಹೇಳಿಕೆ ವಿಚಾರದಲ್ಲಿ ಅವರನ್ನು ನೇರವಾಗಿ ಫೋನ್ ನಲ್ಲಿ ಸಂಪರ್ಕಿಸಿದ್ದೆ. ನಾನು ಹಾಗೆ ಹೇಳಿಯೇ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ ಎಂದರು.
ವಿರೋಧಿಗಳು ತಮಗೆ ಬೇಕಾದ ಮಾಧ್ಯಮಗಳ ಮೂಲಕ ಆ ಹೇಳಿಕೆ ತಿರುಚಿದ್ದಾರೆ. ಚುನಾವಣೆ ನಿಲ್ಲುವಾಗ ಅವರನ್ನು ಸೋಲಿಸುವ ವಿಚಾರದಲ್ಲಿದ್ದೆ, ಈಗ ಗೆಲ್ಲಬೇಕು ಅನಿಸುತ್ತಿದೆ ಎಂದರು.
Sri Dingaleshwara Swamiji files nomination in dharwad against pralad Joshi, says need to eliminate this coming elections. Declares wealth around 9 crores.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 01:37 pm
HK News Desk
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm
Sirsi Murder, KSRTC Bus, crime: ಶಿರಸಿ ; ಹತ್ತು...
23-02-25 03:42 pm