ಬ್ರೇಕಿಂಗ್ ನ್ಯೂಸ್
19-04-24 01:41 pm HK News Desk ಕರ್ನಾಟಕ
ಶಿವಮೊಗ್ಗ, ಎ.19: ಶಿವಮೊಗ್ಗ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಎರಡು ಬಾರಿಯ ಸಂಸದ ಬಿ.ವೈ ರಾಘವೇಂದ್ರ ಒಟ್ಟು 73.71 ಕೋಟಿ ರೂಪಾಯಿ ಆಸ್ತಿ ಘೋಷಿಸಿದ್ದಾರೆ. ರಾಘವೇಂದ್ರ ಬಳಿ 55.85 ಕೋಟಿ ರೂಪಾಯಿ ಆಸ್ತಿ ಇದೆ. ಪತ್ನಿ ತೇಜಸ್ವಿನಿ ಹೆಸರಿನಲ್ಲಿ 17.86 ಕೋಟಿ ರೂಪಾಯಿ ಆಸ್ತಿಯಿದೆ.
ರಾಘವೇಂದ್ರ ಕೈಯಲ್ಲಿ 33,291 ರೂಪಾಯಿ ನಗದು ಇದ್ದು, ಅವರ ಪತ್ನಿ ತೇಜಸ್ವಿನಿ ಬಳಿ 9,39,109 ರೂಪಾಯಿ ಹಣವಿದೆ. ರಾಘವೇಂದ್ರ ವಿವಿಧ ಬ್ಯಾಂಕ್‌ಗಳಲ್ಲಿ 13 ಅಕೌಂಟ್ ಹೊಂದಿದ್ದಾರೆ. ಅಲ್ಲಿ ಒಟ್ಟಾರೆ 98,01,123 ರೂಪಾಯಿ ಡಿಪಾಸಿಟ್ ಆಗಿದೆ. ಪತ್ನಿ ತೇಜಸ್ವಿನಿ ಹೆಸರಿನಲ್ಲಿ ವಿವಿಧ ಬ್ಯಾಂಕ್‌ಗಳಲ್ಲಿ 8 ಅಕೌಂಟ್‌ಗಳಿದ್ದು 25,65,577 ರೂಪಾಯಿ ಹಣವಿದೆ ಎಂದು ಅಫಿಡವಿಟ್‌ನಲ್ಲಿ ಹೇಳಲಾಗಿದೆ.
ರಾಘವೇಂದ್ರ 15 ಕಂಪನಿಗಳಲ್ಲಿ 7.68 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ತೇಜಸ್ವಿನಿ ಆರು ಕಂಪನಿಗಳಲ್ಲಿ 1.22 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದಾರೆ. ಮ್ಯೂಚುವಲ್ ಫಂಡ್ಸ್ ಹಾಗೂ ವಿವಿಧ ಬಾಂಡ್‌ಗಳಲ್ಲಿ ರಾಘವೇಂದ್ರ 2.22 ಕೋಟಿ ರೂಪಾಯಿ ಹೂಡಿಕೆ ಮಾಡಿದ್ದು, ತೇಜಸ್ವಿನಿ 30 ಸಾವಿರ ರೂಪಾಯಿ ಹೂಡಿಕೆ ಮಾಡಿದ್ದಾರೆ.
ರಾಘವೇಂದ್ರ ತಮ್ಮ ಪತ್ನಿ ತೇಜಸ್ವಿನಿ, ಮಕ್ಕಳಾದ ಭಗತ್, ಸುಭಾಷ್ ಮತ್ತು ತಮ್ಮ ಸಹೋದರ ವಿಜಯೇಂದ್ರಗೆ ಸಾಲ ನೀಡಿದ್ದಾರೆ. ವಿಜಯೇಂದ್ರಗೆ 85 ಲಕ್ಷ ರೂಪಾಯಿ, ಪತ್ನಿ ತೇಜಸ್ವಿನಿಗೆ 5.49 ಕೋಟಿ ರೂಪಾಯಿ, ಪುತ್ರ ಭಗತ್‌ಗೆ 65 ಲಕ್ಷ ರೂಪಾಯಿ, ಮತ್ತೊಬ್ಬ ಪುತ್ರ ಸುಭಾಷ್‌ಗೆ 85 ಲಕ್ಷ ರೂಪಾಯಿ ಸಾಲ ನೀಡಿದ್ದಾರೆ. ವಿವಿಧ ಸಂಸ್ಥೆಗಳಿಗೆ ರಾಘವೇಂದ್ರರವರು 20.39 ಕೋಟಿ ರೂಪಾಯಿ ಸಾಲ ನೀಡಿದ್ದಾರೆ.
ಇದಲ್ಲದೆ, ರಾಘವೇಂದ್ರಗೆ 69.39 ಲಕ್ಷ ರೂಪಾಯಿ ಸಾಲವಿದೆ. ಪತ್ನಿ ತೇಜಸ್ವಿನಿಗೆ 12.91 ಕೋಟಿ ರೂಪಾಯಿ ಸಾಲವಿದೆ. 1988 ಮಾಡೆಲ್ ಅಂಬಾಸಿಡರ್, ಒಂದು ಟ್ರಾಕ್ಟರ್, ಟೊಯೊಟಾ ಫಾರ್ಚುನರ್ ಕಾರು ಇದೆ. ಇವುಗಳ ಒಟ್ಟು ಮೌಲ್ಯ 44.77 ಲಕ್ಷ ರೂಪಾಯಿ ಇದೆ. ರಾಘವೇಂದ್ರ ಬಳಿ 1021.50 ಗ್ರಾಂ ಚಿನ್ನವಿದೆ. 114.26 ಕ್ಯಾರೆಟ್ ವಜ್ರ, 8.6 ಕೆ.ಜಿ ಬೆಳ್ಳಿ, 42 ಬೆಲೆಬಾಳುವ ಹರಳು ಇದೆ. ಪತ್ನಿ ತೇಜಸ್ವಿನಿ ಬಳಿ 1395.92 ಗ್ರಾಂ ಚಿನ್ನ, 96.022 ಕ್ಯಾರೆಟ್ ವಜ್ರ, 5.1 ಕೆ.ಜಿ ಬೆಳ್ಳಿ ಇದೆ.
ರಾಘವೇಂದ್ರ ಹೆಸರಿನಲ್ಲಿ 11.33 ಎಕರೆ ಕೃಷಿ ಜಮೀನು ಇದೆ. ವಿವಿಧೆಡೆ 18 ಕೋಟಿ ರೂಪಾಯಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ಪತ್ನಿ ಹೆಸರಿನಲ್ಲಿ 8.07 ಕೋಟಿ ರೂಪಾಯಿ ಮೌಲ್ಯದ ಕೃಷಿಯೇತರ ಭೂಮಿ ಇದೆ. ರಾಘವೇಂದ್ರ ಹೆಸರಿನಲ್ಲಿ 1.24 ಕೋಟಿ ರೂಪಾಯಿ ಮೌಲ್ಯದ ಕಟ್ಟಡಗಳಿವೆ. ರಾಘವೇಂದ್ರ ಹೆಸರಿನಲ್ಲಿ ಶಿವಮೊಗ್ಗದ ವಿನೋಬನಗರ, ಶಿಕಾರಿಪುರದಲ್ಲಿ ವಾಸದ ಮನೆಗಳಿವೆ. ಪತ್ನಿ ತೇಜಸ್ವಿನಿ ಹೆಸರಲ್ಲಿ 6.82 ಕೋಟಿ ರೂಪಾಯಿ ಮೌಲ್ಯದ ವಾಸದ ಮನೆಗಳಿವೆ ಎಂದು ಅಫಿಡವಿಟ್‌ನಲ್ಲಿ ತಿಳಿಸಲಾಗಿದೆ.
Sitting MP and BJP candidate for Shivamogga, BY Raghavendra, has declared that he and his wife, Tejaswini, have assets worth Rs 73.41 crore. According to the affidavit he submitted along with his nomination papers in Shivamogga on Thursday, their total assets have increased by about Rs 6 crore compared to the 2019 Lok Sabha elections.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
27-07-26 08:24 pm
HK News Staffer
ಚಿನ್ನದ ರಿಂಗ್, ಡಾಲರ್ ಸಹಿತ ಬೆಲೆಬಾಳುವ ವಸ್ತುಗಳಿದ್...
26-07-26 09:57 pm
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
27-07-26 09:04 pm
HK News Staffer
ಬೆಂಗಳೂರು ಗ್ಯಾರೇಜ್ ನಲ್ಲಿ ಅಗ್ನಿ ಅವಘಡ ; ಜಾಗ್ವಾರ...
27-07-26 07:35 pm
ಎಪಿಎಂಸಿ ಕಾರ್ಯದರ್ಶಿ ವಿರುದ್ಧ ಲೈಂಗಿಕ ಕಿರುಕುಳ ಆರೋ...
27-07-26 01:09 pm
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm