ಬ್ರೇಕಿಂಗ್ ನ್ಯೂಸ್
20-04-24 06:48 pm Bangalore Correspondent ಕರ್ನಾಟಕ
ಬೆಂಗಳೂರು, ಏ 20: ಭಾಷೆ ವಿಚಾರವಾಗಿ ನಿಂದಿಸಿ ಹಲ್ಲೆ ಯತ್ನ ಆರೋಪ ಸಂಬಂಧ ನಟಿ ಹರ್ಷಿಕಾ ಪೂಣಚ್ಚ ಹಾಗೂ ಅವರ ಪತಿ ಭುವನ್ ಕಿಡಿಗೇಡಿಗಳ ವಿರುದ್ಧ ಇಂದು ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತ ರಮಣ್ ಗುಪ್ತಾ ಅವರಿಗೆ ದೂರು ನೀಡಿದ್ದಾರೆ.
ದೂರು ನೀಡಿದ ಬಳಿಕ ಮಾತನಾಡಿದ ನಟ ಭುವನ್, "ಪೊಲೀಸ್ ಕಮಿಷನರ್ ಇಲ್ಲದ ಕಾರಣ ಪೂರ್ವ ವಿಭಾಗದ ಹೆಚ್ಚುವರಿ ಆಯುಕ್ತರನ್ನ ಭೇಟಿಯಾಗಿದ್ದೇವೆ. ಎಫ್ಐಆರ್ ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಭರವಸೆ ನೀಡಿದ್ದಾರೆ. ಘಟನೆ ನಡೆದಾಗ ದೂರು ಕೊಡುವುದರಿಂದ ಬೇರೆ ರೂಪ ಪಡೆದುಕೊಳ್ಳಲಿದೆ ಎಂಬ ಕಾರಣಕ್ಕಾಗಿ ದೂರು ಕೊಟ್ಟಿರಲಿಲ್ಲ. ಈ ಬಗ್ಗೆ ಸಂಬಂಧಿಕರು ಹಾಗೂ ಹಿತೈಷಿಗಳು ನೀಡಿದ ಸಲಹೆ ಹಿನ್ನೆಲೆಯಲ್ಲಿ ನಿನ್ನೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿ ಇಂದು ಪೊಲೀಸರಿಗೆ ದೂರು ಕೊಡಲಾಗಿದೆ" ಎಂದರು.
ಪುಲಕೇಶಿನಗರದಲ್ಲಿರುವ ರೆಸ್ಟೋರೆಂಟ್ಗೆ ಹೋಗಿ ಊಟ ಮುಗಿಸಿಕೊಂಡು ಪಾರ್ಕಿಂಗ್ನಲ್ಲಿ ಕಾರು ರಿವರ್ಸ್ ತೆಗೆದುಕೊಳ್ಳುವಾಗ ವ್ಯಕ್ತಿಯೋರ್ವ ಅನಾವಶ್ಯಕವಾಗಿ ಮಾತನಾಡಿ ಜಗಳ ತೆಗೆದಿದ್ದ. ಪ್ರತಿರೋಧ ತೋರಿದರೂ ವಾಕ್ಸಮರ ಮುಂದುವರೆಸಿದ್ದ. ನನ್ನ ಪಕ್ಕದಲ್ಲಿದ್ದ ಹರ್ಷಿಕಾಳನ್ನ ಕಂಡು "ದೇಕ್ ನೇಕೊ ಹಮಾರ ಚೋಕ್ರಿ ಜೈಸಾ ಹೈ. ಕಿಸಿಕೋ ಲೇಕ್ ಹೈ (ನೋಡುವುದಕ್ಕೆ ನಮ್ಮ ಸಮುದಾಯ ಹುಡುಗಿಯಾಗಿದ್ದು, ಈತ ಕರೆದುಕೊಂಡು ಬಂದಿದ್ದ) ಎಂದು ಉರ್ದುವಿನಲ್ಲಿ ಹೇಳಿದ್ದಾನೆ. ನನ್ನ ತಂಟೆಗೆ ಬರಬೇಡಿ ಎಂದು ಭುವನ್ ಗದರಿಸಿದ್ದಕ್ಕೆ ಕ್ಷಣಾರ್ಧದಲ್ಲಿ ಹುಡುಗರನ್ನ ಕರೆಯಿಸಿ ತಮ್ಮ ಮೇಲೆ ಹಲ್ಲೆಗೆ ಯತ್ನಿಸಿದ್ದರು. ಈ ಬಗ್ಗೆ ಸ್ಥಳದಲ್ಲಿದ್ದ ಎಎಸ್ಐ ಸಹ ನಮ್ಮ ನೆರವಿಗೆ ಬಂದಿರಲಿಲ್ಲ. ಕನ್ನಡ ಮಾತನಾಡುವ ವಿಚಾರಕ್ಕೆ ಕ್ಯಾತೆ ತೆಗೆದಿದ್ದರು" ಎಂದು ತಮಗಾದ ಕಹಿ ಅನುಭವ ಬಿಚ್ಚಿಟ್ಟರು.
ನಟಿ ಹರ್ಷಿಕಾ ಪೂರ್ಣಚ್ಚ ಮಾತನಾಡಿ, "ತಮಗಾಗಿರುವ ಕಹಿ ಅನುಭವನವನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದೇನೆ. ಘಟನೆ ನಡೆದಾಗ ದೂರು ಕೊಡುವ ಮನಸ್ಥಿತಿಯಲ್ಲಿ ಇರಲಿಲ್ಲ. ಹಿತೈಷಿಗಳ ಸಲಹೆ ಮೇರೆಗೆ ಇಂದು ಪೊಲೀಸರಿಗೆ ದೂರು ನೀಡಿದ್ದೇನೆ. ದೂರಿನ ಹಿಂದೆ ಯಾವುದೇ ರಾಜಕೀಯ ಅಜೆಂಡಾ ಇಲ್ಲ. ಅಲ್ಲದೆ ದೂರನ್ನು ಯಾರೂ ನಮಗೆ ಬರೆದುಕೊಟ್ಟಿಲ್ಲ. ಇಲ್ಲಿ ಹುಟ್ಟಿಬೆಳೆದ ನಾನು ಕನ್ನಡ ಮಾತನಾಡಬಾರದೆ ಎಂದು ಅಸಮಾಧಾನದಲ್ಲಿ ಪಾಕಿಸ್ತಾನದಲ್ಲಿ ಇದ್ದೇವಾ ಎಂಬ ರೀತಿಯಲ್ಲಿ ನನ್ನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದೇ ವಿನಃ ಬೆಂಗಳೂರು ಹಾಗೂ ಇಲ್ಲಿನ ಕಾನೂನು ಸುವ್ಯವಸ್ಥೆ ದೂಷಣೆ ಮಾಡಿಲ್ಲ" ಎಂದು ಸ್ಪಷ್ಟಪಡಿಸಿದರು.
#Karnataka: Attack on actress #HarshikaPoonach: Attack on husband Bhuvan who was with actress Harshika Poonach
— Siraj Noorani (@sirajnoorani) April 19, 2024
'Snatched Gold Chain, Damaged Car': Actress #HarshikaPoonacha, Husband ATTACKED In #Bengaluru For Speaking In #Kannada
1/9 pic.twitter.com/fsjnmkVkIR
Actor Bhuvann Ponnannaa and wife Harshika Poonacha alleges of attack near resturant in Bangalore by Muslim men for speaking in kannada. Kannada actor Harshika Poonacha has alleged an attack by a mob in Bengaluru for speaking in Kannada. Sharing a video of her ordeal, she claimed that miscreants even attempted to rob her husband.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am