ಬೆಂಗಳೂರಿನಲ್ಲಿ ಮೋದಿ ; ಭಾರೀ ಬಂದೋಬಸ್ತ್ ಮಧ್ಯೆ ಚೊಂಬು ಹಿಡಿದು ರಸ್ತೆಗಿಳಿದ ಮೊಹಮ್ಮದ್ ನಲಪಾಡ್ ಅಂಡ್ ಫ್ರೆಂಡ್ಸ್,  ಎತ್ತಾಕೊಂಡ ಹೋದ ಪೊಲೀಸರು

20-04-24 10:13 pm       Bangalore Correspondent   ಕರ್ನಾಟಕ

ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಭದ್ರತಾ ಲೋಪ ಉಂಟಾಗಿದೆ.

ಬೆಂಗಳೂರು, ಏ 20: ಲೋಕಸಭೆ ಚುನಾವಣೆ ಪ್ರಚಾರದಲ್ಲಿ ತೊಡಗಿರುವ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಬೆಂಗಳೂರಿಗೆ ಆಗಮಿಸಿದ್ದ ವೇಳೆ ಭದ್ರತಾ ಲೋಪ ಉಂಟಾಗಿದೆ.

ಅರಮನೆ ಮೈದಾನದಿಂದ ಎಚ್‌ಕ್ಯುಟಿಸಿ ಹೆಲಿಪ್ಯಾಡ್‌ಗೆ ತೆರಳುವಾಗ ಮೇಕ್ರಿ ಸರ್ಕಲ್‌ ಬಳಿ ರಾಜ್ಯ ಯುವ ಕಾಂಗ್ರೆಸ್‌ ಘಟಕದ ಅಧ್ಯಕ್ಷ ಮೊಹಮ್ಮದ್‌ ನಲಪಾಡ್‌ ಹಾಗೂ ಬೆಂಬಲಿಗರು ರಸ್ತೆಗೆ ನುಗ್ಗಿ ಪ್ರಧಾನಿ ಮೋದಿಗೆ ಚೆಂಬು ಪ್ರದರ್ಶಿಸಿದ್ದಾರೆ. ಹೀಗಾಗಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ನಂತರ ಪ್ರಧಾನಿ ಮೋದಿ ಎಚ್‌ಕ್ಯುಟಿಸಿ ಹೆಲಿಪ್ಯಾಡ್‌ಗೆ ತೆರಳುತ್ತಿದ್ದಾಗ ನಲಪಾಡ್ ಗ್ಯಾಂಗ್ ರಸ್ತೆಗೆ ಇಳಿದು ಚೊಂಬು ಪ್ರದರ್ಶಿಸಲು ಮುಂದಾಗಿದ್ದಾರೆ. ಈ ವೇಳೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರು ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದಿದ್ದಾರೆ.

ಭಾರೀ ಬಂದೋಬಸ್ತ್ ಇದ್ದರೂ ಭದ್ರತಾ ಲೋಪ ; 

ಹೆಚ್ಚುವರಿ ಪೊಲೀಸ್ ಆಯುಕ್ತರಾದ ಸತೀಶ್ ಕುಮಾರ್, ರಮನ್ ಗುಪ್ತಾ ನೇತೃತ್ವದಲ್ಲಿ ಭದ್ರತೆ ಹೆಚ್ಚಿಸಲಾಗಿತ್ತು. ಅಲ್ಲದೆ ಬಂದೋಬಸ್ತ್ಗಾಗಿ ನಾಲ್ವರು ಡಿಸಿಪಿ, ಎಸಿಪಿ, ಇನ್ಸ್ ಪೆಕ್ಟರ್, ಸಬ್ ಇನ್ಸ್ಪೆಕ್ಟರ್, ಹೆಡ್ ಕಾನ್ಸ್ಟೇಬಲ್, ಪೊಲೀಸ್ ಪೇದೆ, ಸಂಚಾರ ಪೊಲೀಸ್ ಸಿಬ್ಬಂದಿ ಸೇರಿ ಒಟ್ಟು ಎರಡು ಸಾವಿರಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಆದರೂ ನಲಪಾಡ್ ಗ್ಯಾಂಗ್ ಭದ್ರತೆಯನ್ನು ಲೆಕ್ಕಿಸದೆ ಆಟಾಟೋಪ ಮೆರೆದಿದ್ದಾರೆ.

ಅರಮನೆ ಮೈದಾನದಲ್ಲಿ ಪ್ರಚಾರ ಸಭೆಯ ನಂತರ ಮೋದಿ ಅವರ ಬೆಂಗಾವಲು ಪಡೆ ತೆರಳಬೇಕಿದ್ದ ಮಾರ್ಗದ ಸಮೀಪವಿರುವ ಬೈ-ಲೇನ್‌ನಲ್ಲಿ ಖಾಲಿ 'ಚೊಂಬು' ಹಿಡಿದು ಪ್ರತಿಭಟನೆ ನಡೆಸಲು ಮೊಹಮ್ಮದ್ ನಲಪಾಡ್ ಹಾಗೂ ಸಂಗಡಿಗರು ಪ್ರಯತ್ನಿಸಿದರು. ಹೀಗಾಗಿ ನಾವು ಇಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ವಶಕ್ಕೆ ತೆಗೆದುಕೊಂಡಿದ್ದೇವೆ. ಇಲ್ಲಿ ಯಾವುದೇ ರೀತಿಯ ಭದ್ರತಾ ಉಲ್ಲಂಘನೆಯಾಗಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Youth Congress Mohammed Nalapad Trying To Protest Near PM modi Convoy Route Detained in Bangalore. Two persons including Karnataka Youth Congress President Mohammed Haris Nalapad were taken into preventive custody on Saturday as they tried to protest near Mekhri circle here, some 300 metres from the route where Prime Minister Narendra Modi's convoy was about to move, police said.