ಬ್ರೇಕಿಂಗ್ ನ್ಯೂಸ್
20-04-24 10:48 pm Bangalore Correspondent ಕರ್ನಾಟಕ
ಬೆಂಗಳೂರು, ಏ 20: ಕೇಂದ್ರದಲ್ಲಿನ ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯ ಮಾಡುತ್ತಿದೆ ಎಂದು ಎಂದು ಆರೋಪಿಸಿದ ಕಾಂಗ್ರೆಸ್ ವಿಭಿನ್ನವಾಗಿ ಪ್ರತಿಭಟಿಸಿತು. ಬೆಂಗಳೂರಿನ ಮೇಖ್ರಿ ವೃತ್ತದಲ್ಲಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.
ಮೇಖ್ರಿ ಸರ್ಕಲ್‌ನಲ್ಲಿ ನಡೆದ ಪ್ರತಿಭಟನೆಯ ನೇತೃತ್ವವನ್ನು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ್ ವಹಿಸಿದ್ದರು. ರಾಜ್ಯಕ್ಕೆ ಕೇಂದ್ರದಿಂದ ಆಗಿರುವ ಅನ್ಯಾಯದ ವಿರುದ್ಧ ಅನ್ಯಾಯವಾಗಿದೆ ಎಂದು ಅವರು ಇದೇ ವೇಳೆ ಗುಡುಗಿದರು. ಇದೇ ವೇಳೆ ಕಾಂಗ್ರೆಸ್ ಮುಖಂಡರು ಖಾಲಿ ಚೊಂಬನ್ನು ಪ್ರದರ್ಶನ ಮಾಡಿ ಆಕ್ರೋಶವನ್ನು ಹೊರ ಹಾಕಿತು.
ಕೇಂದ್ರದಲ್ಲಿನ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಕರ್ನಾಟಕಕ್ಕೆ ಬರೀ ಖಾಲಿ ಚೊಂಬನ್ನು ನೀಡಿದೆ. ಬರ ಪರಿಹಾರ ವಿಚಾರದಲ್ಲೂ ಬಿಜೆಪಿ ಸರ್ಕಾರ ಮೋಸ ಮಾಡಿದೆ. 15ನೇ ಹಣಕಾಸು ಆಯೋಗದಿಂದ ರಾಜ್ಯಕ್ಕೆ ಬರಬೇಕಿದ್ದ 62 ಸಾವಿರ ಕೋಟಿ ಬದಲು ಕರ್ನಾಟಕಕ್ಕೆ ಖಾಲಿ ಚೊಂಬು ಸಿಕ್ಕಿದೆ ಎಂದು ಸುರ್ಜಿವಾಲ್
ಆರೋಪಿಸಿದರು.
ರಾಜ್ಯದ ಜನತೆ ಕಳೆದ ಲೋಕಸಭಾ ಚುನಾವಣೆಯಲ್ಲಿ 28ರಲ್ಲಿ 27 ಸ್ಥಾನಗಳನ್ನು ಬಿಜೆಪಿ ಹಾಗೂ ಜೆಡಿಎಸ್‌ಗೆ ನೀಡಿದೆ. ಸಂಸದರು ರಾಜ್ಯಕ್ಕೆ ಬರೀ ಚೊಂಬು ನೀಡಲಷ್ಟೇ ಶಕ್ತರಾಗಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಪಕ್ಷಕ್ಕೆ ರಾಜ್ಯದ ಮತದಾರ ಇದನ್ನೇ ನೀಡಲಿದ್ದಾರೆ ಎಂದು ಚೊಂಬನ್ನು ತೋರಿಸುತ್ತಾ ಸುರ್ಜಿವಾಲ್ ಹೇಳಿದರು.
ಎಲ್ಲರ ಖಾತೆಗೆ 15 ಲಕ್ಷ ರೂಪಾಯಿ ಹಾಕುತ್ತೇವೆ ಎಂದು ಹೇಳಿ ಮೋಸ ಮಾಡಿದ ಬಿಜೆಪಿ ಸರ್ಕಾರ ,ರೈತರ ಆದಾಯ ದ್ವಿಗುಣಗೊಳಿಸಲಿಲ್ಲ, ನಾವು ಕಟ್ಟುವ ಪ್ರತಿ 100 ರೂ. ತೆರಿಗೆಯಲ್ಲಿ 13 ರೂ. ಮಾತ್ರ ವಾಪಸ್ ನೀಡುವ ಮೂಲಕ ಚೊಂಬು ನೀಡಿದೆ.
ಬಿಜೆಪಿ ಸರ್ಕಾರ ಎಲ್ಲರ ಖಾತೆಗೆ 15 ಲಕ್ಷ ರೂ. ನೀಡುತ್ತದೆ ಎಂದು ಹೇಳಿಕೆ ನೀಡಿ ಮೋಸ ಮಾಡಿದೆ. ನರೇಂದ್ರ ಮೋದಿ ನೇತೃತ್ವದ ಸರ್ಕಾರ ರೈತರ ಆದಾಯವನ್ನು ದ್ವಿಗುಣಗೊಳಿಸುವುದಾಗಿ ತಿಳಿಸಿತ್ತು. ಇದನ್ನು ಮಾಡಿಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಅನ್ಯಾಯವನ್ನು ಮಾಡುತ್ತಿದೆ ಎಂದು ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜಿವಾಲ್ ಗುಡುಗಿದರು.
Congress workers protest against Centre over non-release of relief funds ahead of PM Modi's visit. They tried to stage a protest holding an empty ‘Chombu’ (a small, round water container) on a by-lane which was near the route where Modi’s convoy was scheduled to move after the campaign rally on the Palace grounds here.
24-02-25 01:36 pm
HK News Desk
Kumar Bangarappa, BJP President: ಬಿಜೆಪಿ ರಾಜ್ಯ...
23-02-25 06:38 pm
Telangana Model, Pramod Muthalik, CM Siddaram...
21-02-25 10:47 pm
Rohini Sindhuri, Roopa moudgil, latest news:...
21-02-25 10:12 pm
Santosh Lad, Modi, Nitin Gadkari: ಬಿಜೆಪಿ ಅಧಿಕ...
21-02-25 04:36 pm
24-02-25 10:14 pm
HK News Desk
India Pak Match 2025 Live: ಪಾಕ್ ತಂಡವನ್ನು ಚಾಂಪ...
23-02-25 11:22 pm
ಗಂಗಾ ನದಿಗಿದೆ ಸ್ವಯಂ ಶುದ್ಧೀಕರಣದ ಶಕ್ತಿ ; ಕೋಟ್ಯಂತ...
23-02-25 09:52 pm
ದುಬೈನಲ್ಲಿ ಕ್ರಿಮಿನಲ್ ಇನ್ವೆಸ್ಟಿಗೇಶನ್ ಅಧಿಕಾರಿಗಳ...
22-02-25 09:48 pm
ದುಬೈ ಉದ್ಯಮಿ ಬಿ.ಆರ್ ಶೆಟ್ಟಿಗೆ ದುಬೈ ಕೋರ್ಟಿನಿಂದ ಮ...
22-02-25 07:51 pm
25-02-25 02:34 pm
Mangalore Correspondent
Puttur doctor, C Section, Mangalore: ಸಿಸೇರಿಯನ...
25-02-25 12:24 pm
Puttur News, Dr Anil Baipadithaya, hospital:...
24-02-25 02:50 pm
Mangalore accident, Surathkal, Raichur: ಸುರತ್...
23-02-25 03:20 pm
Rani Abbakka, Mamata Ballal, Mangalore: ಐನೂರು...
23-02-25 01:12 pm
25-02-25 05:18 pm
Mangalore Correspondent
Kerala Murder, Crime, Affan: ತಿರುವನಂತಪುರ ; ಒಂ...
25-02-25 01:37 pm
Delhi crime, Wife Murder: ತ್ರಿವೇಣಿ ಸಂಗಮದಲ್ಲಿ...
24-02-25 10:51 pm
Illegal drug supply, Mangalore: ಮಂಗಳೂರು ಜೈಲಿಗ...
24-02-25 09:43 pm
Bangalore crime, Police constable, Rape, Bomm...
24-02-25 07:08 pm