ಬ್ರೇಕಿಂಗ್ ನ್ಯೂಸ್
21-04-24 05:42 pm Bangalore Correspondent ಕರ್ನಾಟಕ
ಮಂಗಳೂರು, ಎ.21: ರೌಡಿಗಳ ಜತೆ ಹಣದ ವ್ಯವಹಾರದ ಹೊಂದಿದ್ದ ಆರೋಪದಲ್ಲಿ ಬೆಂಗಳೂರು ಸಿಸಿಬಿ ಘಟಕದ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ಅವರನ್ನು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅಮಾನತುಗೊಳಿಸಿ ಆದೇಶಿಸಿದ್ದಾರೆ.
ಕೆಲವು ದಿನಗಳ ಹಿಂದೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಾರತ್ತಹಳ್ಳಿ ರೌಡಿ ರೋಹಿತ್‌ನನ್ನು ವಿಚಾರಣೆ ನಡೆಸಿದಾಗ ಖಾಕಿ ನಂಟು ಬಯಲಾಗಿದೆ. ಇಲಾಖಾ ಮಟ್ಟದ ವಿಚಾರಣೆ ನಡೆಸಿದ ಸಿಸಿಬಿ ಡಿಸಿಪಿ ಅವರು, ಸಿಸಿಬಿ ಓಸಿಡಬ್ಲ್ಯು ದಳದ ಇನ್‌ಸ್ಪೆಕ್ಟರ್ ಜ್ಯೋತಿರ್ಲಿಂಗ ಹೊನಕಟ್ಟಿ ವಿರುದ್ಧ ಶಿಸ್ತುಕ್ರಮಕ್ಕೆ ಶಿಫಾರಸು ಮಾಡಿದ್ದರು.
ಸಿಸಿಬಿಯ ಓಸಿಡಬ್ಲ್ಯು ದಳದ ಪೂರ್ವ ವಿಭಾಗದಲ್ಲಿ ಜ್ಯೋರ್ತಿಲಿಂಗ ಕಾರ್ಯ ನಿರ್ವಹಿಸುತ್ತಿದ್ದರು. ಮಾರತ್ತಹಳ್ಳಿ ರೌಡಿ ರೋಹಿತ್ ಮೇಲೆ ಕೊಲೆ ಹಾಗೂ ಜೀವ ಬೆದರಿಕೆ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ ಲೋಕಸಭಾ ಚುನಾವಣಾ ನಿಮಿತ್ತ ನಗರದ ರೌಡಿಗಳ ಮೇಲೆ ಪೊಲೀಸರು ನಿಗಾ ವಹಿಸಿದ್ದರು. ಅಲ್ಲದೆ ರೌಡಿಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಶೋಧ ಮಾಡಿದ್ದರು. ಆದರೆ ರೋಹಿತ್ ಪತ್ತೆಯಾಗಿರಲಿಲ್ಲ.
ರೋಹಿತ್‌ನನ್ನು ಕರೆದು ವಿಚಾರಣೆ ನಡೆಸುವಂತೆ ಅಧಿಕಾರಿಗಳಿಗೆ ಸಿಸಿಬಿ ವಿಭಾಗದ ಡಿಸಿಪಿ ಶ್ರೀನಿವಾಸ ಗೌಡ ಸೂಚಿಸಿದ್ದರು. ಅದರಂತೆ ಆತನನ್ನು ಚಾಮರಾಜಪೇಟೆಯ ಸಿಸಿಬಿ ಕಚೇರಿಗೆ ಕರೆಸಿ ಅಧಿಕಾರಿಗಳು ವಿಚಾರಣೆ ನಡೆಸಿದ್ದರು. ರೌಡಿ ಮೊಬೈಲನ್ನು ವಶಕ್ಕೆ ಪಡೆದು ಪರಿಶೀಲಿಸಿದಾಗ ಇನ್ಸ್ ಪೆಕ್ಟರ್ ಜ್ಯೋತಿರ್ಲಿಂಗ ಜತೆ ನಿಕಟ ನಂಟು ಇರುವುದು ಬೆಳಕಿಗೆ ಬಂದಿತ್ತು. ಹಲವು ಬಾರಿ ಪಿಐ ಜ್ಯೋತಿರ್ಲಿಂಗ ಅವರಿಗೆ ರೌಡಿ ರೋಹಿತ್ ಹಣ ಕೊಟ್ಟಿರುವುದು ತಿಳಿದುಬಂದಿದ್ದು ಅದರಂತೆ ಡಿಸಿಪಿ ವರದಿ ಆಧರಿಸಿ ಬೆಂಗಳೂರು ಕಮಿಷನರ್ ಅಮಾನತು ಆದೇಶ ಮಾಡಿದ್ದಾರೆ.
ಜ್ಯೋತಿರ್ಲಿಂಗ ಈ ಹಿಂದೆ ಮಂಗಳೂರಿನ ಬರ್ಕೆ ಠಾಣೆಯಲ್ಲಿ ಇನ್ಸ್ ಪೆಕ್ಟರ್ ಆಗಿದ್ದರು. ಆ ಸಂದರ್ಭದಲ್ಲಿಯೂ ಇವರ ಮೇಲೆ ಅವ್ಯವಹಾರ, ಬಾರ್, ಪಬ್ ಸೇರಿದಂತೆ ಹೆಚ್ಚಿನ ಕಡೆಗಳಿಂದ ಹಣ ಪಡೆದ ಆರೋಪ ಕೇಳಿಬಂದಿತ್ತು.
Bangalore Jyotirlinga ccb inspector suspended for alleged nexus with rowdy sheeter. Jyotirlinga was a circle inspector at Barke police station in Mangalore. The senior police officer explained that Jyotirlinga was suspected of aiding Rohith, who operates within the Whitefield jurisdiction, in his illegal activities and receiving substantial sums of money from him.
10-03-26 01:47 pm
HK News Staffer
ಗುರುಗ್ರಾಮ್ನಲ್ಲಿ ನಿರ್ಮಾಣ ಹಂತದ ಗೋಡೆ ಕುಸಿತ ; 7...
10-03-26 11:04 am
ಸ್ತ್ರೀ–ಪುರುಷರ ನಗ್ನ ಫೋಟೋಗಳು, ಕೊಳೆತ ಟೊಮೆಟೋ ; ಬೆ...
10-03-26 10:49 am
ಕಲಬುರಗಿ ಜಾತ್ರೆಯಲ್ಲಿ ಭೀಕರ ದುರಂತ; ರಥದ ಚಕ್ರಕ್ಕೆ...
09-03-26 09:51 pm
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
10-03-26 05:00 pm
HK News Staffer
ಬಿಸಿಲಿಗೆ ತತ್ತರಿಸಿದ ಅಳಿಲಿನ ದಣಿವು ನೀಗಿಸಿದ ಟ್ರಾಫ...
09-03-26 09:52 pm
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
10-03-26 08:32 pm
Mangaluru Staffer
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm