ಬ್ರೇಕಿಂಗ್ ನ್ಯೂಸ್
23-04-24 11:07 am Bangalore Correspondent ಕರ್ನಾಟಕ
ಬೆಂಗಳೂರು, ಏ 23: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಮಾನ ಆಸ್ತಿ ಹಂಚಿಕೆ ಮಾಡುತ್ತಾರೆ, ಮಹಿಳೆಯರ ಮಾಂಗಲ್ಯವನ್ನು ಮುಸ್ಲಿಂ ಮರಿಗೆ ಕೊಡುತ್ತಾರೆ ಎಂದು ಪ್ರಧಾನಮಂತ್ರಿ ಆರೋಪ ಮಾಡಿದ್ದಾರೆ. ಪ್ರಧಾನಿಯಾಗಿ ಅವರು ಇಷ್ಟು ಕೆಳಮಟ್ಟದಲ್ಲಿ ಮಾತನಾಡ ಬಾರದಿತ್ತು. ಹಿಂದೂಗಳ ಮಂಗಳಸೂತ್ರವನ್ನು ತೆಗೆದು ಮುಸ್ಲಿಮರಿಗೆ ನೀಡುತ್ತಾರೆ ಎನ್ನುವುದು ಅವರ ಸ್ಥಾನಕ್ಕೆ ಅಗೌರವ ತರುವಂಥ ಮಾತುಗಳು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಮಾತನಾಡಿದ ಅವರು, ದೇಶದ ಪ್ರಧಾನ ಮಂತ್ರಿಯಾಗಿ ಎಲ್ಲಾ ಜನಾಂಗವನ್ನು ಸಮಾನವಾಗಿ ನೋಡಿಕೊಳ್ಳುವ ಕರ್ತವ್ಯ ಅವರದ್ದು. ಇಂಥ ಮಾತುಗಳು ಅವರಿಗೆ ಶೋಭೆ ತರುವುದಿಲ್ಲ. ಸಮಾನವಾಗಿ ಆಸ್ತಿ ಹಂಚಿಕೆಯಾಗುವುದು ಸಾಮಾಜಿಕ ನ್ಯಾಯ, ಸಮಸಮಾಜ ನಿರ್ಮಾಣವಾಗಬೇಕಾದರೆ ಎಲ್ಲಾರೂ ಮುಖ್ಯವಾಹಿನಿಗೆ ಬರಬೇಕು. ಕೆಲವೇ ಜನರ ಕೈಯಲ್ಲಿ ಅಧಿಕಾರ, ಸಂಪತ್ತು ಇದ್ದರೆ ಇದು ಆಗುವುದಿಲ್ಲ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ದೇಶದ ಅಸಮಾನತೆ ಹೋಗಬೇಕಾದರೆ ಅಧಿಕಾರ ಮತ್ತು ಸಂಪತ್ತು ಕೆಲವರ ಕೈಯಲ್ಲಿ ಇರಬಾರದು, ಹಂಚಿಕೆಯಾಗಬೇಕೆಂದು ಹೇಳಿದ್ದಾರೆ. ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎಂಬ ತತ್ವದಲ್ಲಿ ನಮಗೆ ನಂಬಿಕೆ ಇದೆ ಎಂದರು.
ಕಾನೂನು ಪ್ರಕಾರ ಐಟಿ, ಇಡಿ ಸಂಸ್ಥೆಗಳು ದಾಳಿ ಮಾಡುವುದನ್ನು ನಾವು ಎಂದೂ ವಿರೋಧಿಸುವುದಿಲ್ಲ. ಆದರೆ ಬಿಜೆಪಿಯಲ್ಲಿ ಶ್ರೀಮಂತರಿಲ್ಲವೇ? ಯಡಿಯೂರಪ್ಪ, ವಿಜಯೇಂದ್ರ ಭ್ರಷ್ಟಾಚಾರ ಮಾಡಿಲ್ಲವೇ? ಶೋಭಾ ಕರಂದ್ಲಾಜೆ, ಅಶೋಕ್, ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿಯವರ ಮೇಲೆ ರೇಡ್ ಗಳು ಏಕೆ ಆಗುತ್ತಿಲ್ಲ? ಎಂದು ಪ್ರಶ್ನಿಸಿದ್ದಾರೆ.
ಸಂಪತ್ತಿನ ಹಂಚಿಕೆಗೆ ಸಂಬಂಧಿಸಿದ ತಮ್ಮ ಹೇಳಿಕೆ ಬಗ್ಗೆ ವಿರೋಧ ಪಕ್ಷಗಳ ಖಂಡನೆ, ಟೀಕೆ, ದೂರುಗಳ ನಡುವೆಯೂ ಪ್ರಧಾನಿ ನರೇಂದ್ರ ಮೋದಿ ಅವರು ತಾವು ಮಾಡಿದ್ದ ಆರೋಪವನ್ನು ಪುನರುಚ್ಚರಿಸಿದ್ದಾರೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮರುಹಂಚಿಕೆ ಮಾಡುತ್ತದೆ, ಮಂಗಳಸೂತ್ರವನ್ನೂ ಒಳಗೊಂಡಂತೆ ಜನರ ಚಿನ್ನವನ್ನು ಕಸಿದುಕೊಳ್ಳುತ್ತದೆ ಎಂದು ಸೋಮವಾರವೂ ಹೇಳಿಕೆ ನೀಡಿದರು. ಆದರೆ, ಸಂಪತ್ತು ಮುಸ್ಲಿಮರಿಗೆ ಹೋಗುತ್ತದೆ ಎನ್ನುವುದನ್ನು ಈ ಬಾರಿ ಅವರು ಪ್ರಸ್ತಾಪಿಸಲಿಲ್ಲ.
ರಾಜಸ್ಥಾನದ ಚುನಾವಣಾ ರ್‍ಯಾಲಿಯಲ್ಲಿ ಭಾನುವಾರ ಮಾತನಾಡಿದ್ದ ಮೋದಿ, ಕಾಂಗ್ರೆಸ್ ಪಕ್ಷವು ಜನರ ಕಷ್ಟದ ದುಡಿಮೆಯ ಫಲವನ್ನು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳು ಇರುವವರಿಗೆ ನೀಡಲು ಯೋಜಿಸಿದೆ ಎಂದು ಆರೋಪಿಸಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ 2006ರ ಹೇಳಿಕೆಯೊಂದನ್ನು ಪ್ರಸ್ತಾಪಿಸಿದ್ದರು.
ತೀವ್ರವಾಗಿ ಖಂಡಿಸಿದ್ದವು. ಪ್ರಧಾನಿ ಮೋದಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಕಾಂಗ್ರೆಸ್ ನಿಯೋಗ ಚುನಾವಣಾ ಆಯೋಗಕ್ಕೆ ದೂರು ನೀಡಿದೆ. ಬಿಜೆಪಿಯು ಪ್ರಧಾನಿ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದು, ‘ಅವರು ಜನರ ಮನಸ್ಸಿನಲ್ಲಿರುವುದನ್ನೇ ಹೇಳಿದ್ದಾರೆ’ ಎಂದಿದೆ.
Modi remarks disrespectful of his position says Siddaramaiah over mangalsutra to Muslims. statement that if Congress comes to power, it will distribute the wealth of Hindus, including women’s mangalsutras, among Muslims, Chief Minister Siddaramaiah on Monday said such remarks coming from a person holding the position of prime minister are highly disrespectful.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm