ಬ್ರೇಕಿಂಗ್ ನ್ಯೂಸ್
23-04-24 09:24 pm HK News Desk ಕರ್ನಾಟಕ
ಶಿವಮೊಗ್ಗ, ಏ.23: ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಅಭಿನಂದನೆಗಳು ಎಂದು ಈಶ್ವರಪ್ಪ ಟಾಂಗ್ ಕೊಟ್ಟಿದ್ದಾರೆ.
ಇಂದು ತಮ್ಮ ಚುನಾವಣಾ ಕಾರ್ಯಾಲಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈಶ್ವರಪ್ಪ ಚುನಾವಣೆಗೆ ನಿಲ್ಲುತ್ತಾರೋ, ಇಲ್ಲವೋ ಎಂದು ಬಹಳಷ್ಟು ಜನರಲ್ಲಿ ಗೊಂದಲವಿತ್ತು. ಎಲ್ಲಾ ಗೊಂದಲಕ್ಕೂ ಈಗ ಉತ್ತರ ಸಿಕ್ಕಿದೆ. ಈ ಬಗ್ಗೆ ಯಡಿಯೂರಪ್ಪ, ವಿಜಯೇಂದ್ರ ಹಾಗೂ ರಾಘವೇಂದ್ರ ಗೊಂದಲ ಮೂಡಿಸುತ್ತಿದ್ದರು. ಅದಕ್ಕೂ ಉತ್ತರ ಸಿಕ್ಕಿದೆ. ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದರು. ಇವರು ಅವರ ಕಾಲು ಹಿಡಿದು ಮತ್ತೆ ಬಿಜೆಪಿಗೆ ಕರೆ ತಂದಿದ್ದಾರೆ. ಸದ್ಯ ತಾತ್ಕಾಲಿಕವಾಗಿ ನಾನು ಪಕ್ಷದಿಂದ ಹೊರಗಿದ್ದೇನೆ ಎಂದರು.
ನಾನು ಮತ್ತೆ ಬಿಜೆಪಿಗೆ ಸೇರುವವನೇ:
ಒಬ್ಬ ಎಳಸು ರಾಜ್ಯಾಧ್ಯಕ್ಷ ನನ್ನನ್ನು ಸಸ್ಪೆಂಡ್ ಮಾಡಿದ್ದಾರೆ. ಬಿಜೆಪಿ ಬಗ್ಗೆ ಏನೂ ಗೊತ್ತಿಲ್ಲದೇ ಇರುವ ಒಬ್ಬ ವ್ಯಕ್ತಿ ನನ್ನನ್ನು ಬಿಜೆಪಿಯಿಂದ ಹೊರ ಹಾಕಿದ್ದಾರೆ. ಈ ರೀತಿ ಹಲವಾರು ಜನರು ನನಗೆ ಫೋನ್ ಮಾಡಿ ಹೇಳುತ್ತಿದ್ದಾರೆ. ಇದು ತಾತ್ಕಾಲಿಕ ಬೆಳವಣಿಗೆಯಷ್ಟೇ. ನಾನು ಮತ್ತೆ ಬಿಜೆಪಿಗೆ ಸೇರುವವನೇ, ಇದನ್ನು ತಡೆಯಲು ಯಾರಿದಲೂ ಸಾಧ್ಯವಿಲ್ಲ ಎಂದು ಹೇಳಿದರು.
ವಿಜಯೇಂದ್ರಗೆ ನೈತಿಕತೆಯೇ ಇಲ್ಲ. ಯಡಿಯೂರಪ್ಪ ಕೆಜೆಪಿ ಜೊತೆಗೆ ಹೋದಾಗ ಟಿಪ್ಪು ಸುಲ್ತಾನ್ ಜಯಂತಿಯಂದು ಟೋಪಿ ಹಾಕಿಕೊಂಡು ಹೋಗಿದ್ದರು. ಇದರಿಂದ ಅವರಿಗೆ ನೈತಿಕತೆ ಇಲ್ಲ ಎಂಬುದು ಸಾಬೀತಾಗಿದೆ. ನಾನು ಗೆದ್ದ ಕೂಡಲೇ ಅವರಪ್ಪನೇ ನನ್ನನ್ನು ಬಿಜೆಪಿಗೆ ಕರೆದುಕೊಂಡು ಹೋಗುತ್ತಾರೆ. ನಾನು ಕಟ್ಟಿ ಬೆಳೆಸಿದ ಪಕ್ಷ ಇದು. ಯಡಿಯೂರಪ್ಪ ಕೆಜೆಪಿಗೆ ಹೋಗಿ ಬಂದಿದ್ದಾರೆ. ಅವರು ಡೂಪ್ಲಿಕೇಟ್, ನಾನು ಒರಿಜಿನಲ್ ಎಂದು ವಾಗ್ದಾಳಿ ನಡೆಸಿದರು.
ಹುಬ್ಬಳ್ಳಿಯ ನೇಹಾ ಹತ್ಯೆ ಪ್ರಕರಣ ಬಗ್ಗೆ ಮಾತನಾಡಿ, ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಉಸ್ತುವಾರಿ ಸುರ್ಜೇವಾಲಾ ಹೇಳಿಕೆ ನನಗೆ ಆಶ್ಚರ್ಯ ತಂದಿದೆ. ನಿನ್ನೆ ರಾಜ್ಯದಲ್ಲಿ ಮತ್ತೊಂದು ಯುವತಿ ಮೇಲೆ ಮುಸಲ್ಮಾನ್ ಯುವಕ ಹಲ್ಲೆ ಮಾಡಿದ್ದಾನೆ. ಎಲ್ಲಿಯವರೆಗೆ ಕಾಂಗ್ರೆಸ್ ಸರ್ಕಾರವಿರುತ್ತೋ, ಅಲ್ಲಿಯವರೆಗೆ ಮುಸಲ್ಮಾನರ ಓಲೈಕೆ ಮಾಡಲಾಗುತ್ತದೆ. ಕಾಂಗ್ರೆಸ್ ಪಕ್ಷವನ್ನು ಕಿತ್ತೊಗೆಯುವುದೇ ಇದಕ್ಕೆ ಪರಿಹಾರ ಎಂದರು.
Shivamogga Eshwarappa slams Vijayendra for putting him out of BJP. Says will make his father take me back to party soon after I will this lok sabha elections. Yedurappa has worn muslim hat when he was in KGP party, but I am a orginal Hindu he added.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm