ಬ್ರೇಕಿಂಗ್ ನ್ಯೂಸ್
24-04-24 07:10 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 24: ಸಾವಿನ ಮನೆಯಲ್ಲಿ ಚುನಾವಣಾ ರಾಜಕಾರಣ ಸರಿಯಲ್ಲ. ಅಂತಹ ಮನೆ ಹೊರತುಪಡಿಸಿ ಬೇರೆಡೆ ಎಲ್ಲಾದರೂ ನೀವು ರಾಜಕಾರಣ ಮಾಡಿ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲಾ ಹರಿಹಾಯ್ದರು.
ಮೃತ ನೇಹಾಳ ನಿವಾಸಕ್ಕೆ ಬುಧವಾರ ಭೇಟಿಕೊಟ್ಟ, ತಂದೆ-ತಾಯಿಗೆ ಸಾಂತ್ವನ ಹೇಳಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.
ಇವತ್ತು ನಮ್ಮ ಮಗಳು ನೇಹಾ ನಿವಾಸಕ್ಕೆ ಬಂದಿದ್ದೇವೆ. ನೇಹಾ ಕೇವಲ ನಿರಂಜನ ಹಿರೇಮಠರ ಪುತ್ರಿ ಅಲ್ಲ. ಇಡೀ ಕರ್ನಾಟಕದ ಪುತ್ರಿ. ನಿರಂಜನ ನಮ್ಮ ಕುಟುಂಬದ ಸದಸ್ಯರು. ಈ ಘಟನೆ ಬಗ್ಗೆ ಅತ್ಯಂತ ದುಃಖವಿದೆ. ನಾವೆಲ್ಲ ಅವರ ಜೊತೆ ಇರುತ್ತೇವೆ ಎಂದರು.
ನೇಹಾಳ ಕುಟುಂಬಕ್ಕೆ ಸಂಪೂರ್ಣ ನ್ಯಾಯ ಕೊಡಿಸುವುದು ಸರ್ಕಾರದ ಕರ್ತವ್ಯ. ಈ ಪ್ರಕರಣದಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಆಗಬೇಕೆಂದು ಈಗಾಗಲೇ ವಿಶೇಷ ನ್ಯಾಯಾಲಯ ಸ್ಥಾಪನೆ ಮಾಡಲಾಗಿದೆ. 90 ದಿನಗಳಲ್ಲಿ ನ್ಯಾಯ ಸಿಗಲಿದೆ ಅನ್ನುವ ವಿಶ್ವಾಸವಿದೆ ಎಂದರು.
ಆರೋಪಿಗೆ ಗಲ್ಲು ಶಿಕ್ಷೆ ಆಗಬೇಕು. ಆಕೆಯ ಸಾವಿಗೆ ನ್ಯಾಯ ಸಿಗಬೇಕು. ವಿಶೇಷ ಕೋರ್ಟ್ ಖಂಡಿತ ತ್ವರಿತ ನ್ಯಾಯ ನೀಡಲಿದೆ. ಗಲ್ಲಿಗಿಂತ ಕಡಿಮೆ ಶಿಕ್ಷೆ ಸಿಗಲ್ಲ. ನಮ್ಮ ಮಗಳು ಸಾವನ್ನಪ್ಪಿರುವಾಗ ರಾಜಕಾರಣ ಮಾಡಬೇಡಿ. ಚುನಾವಣೆ ವೇಳೆ ರಾಜಕೀಕರಣ ಬೇಡ ಎಂದರು.
ಬಿಜೆಪಿಯಿಂದ ಸಿಬಿಐ ತನಿಖೆಗೆ ಆಗ್ರಹ ವಿಚಾರವಾಗಿ ಪ್ರತಿಕ್ರಿಯಿಸುತ್ತ, ಸಿಐಡಿ ಮೇಲೆ ನಮಗೆ ನಂಬಿಕೆ ಇದೆ. ರಾಜ್ಯ ಪೊಲೀಸರ ಮೇಲೆ ವಿಶ್ವಾಸವಿದೆ. 90 ದಿನಗಳಲ್ಲಿ ಖಂಡಿತ ನ್ಯಾಯ ಸಿಗಲಿದೆ ಅನ್ನುವ ಖಾತ್ರಿಯಿದೆ ಎಂದರು.
Electoral politics is not right in the house of death. You should do politics anywhere other than such a house," AICC general secretary Randeep Singh Surjewala said. He was speaking to reporters after visiting neha's residence on Wednesday and consoling her parents.
17-05-25 01:44 pm
Bangalore Correspondent
Santosh Lad, Modi, Pak, War: ಮೋದಿ ತಾವೇ ಸುಪ್ರೀ...
16-05-25 10:04 am
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
17-05-25 10:51 pm
HK News Desk
Donald Trump, Asim Munir: ಡೊನಾಲ್ಡ್ ಟ್ರಂಪ್ ಕುಟ...
17-05-25 03:42 pm
ಡೊನಾಲ್ಡ್ ಟ್ರಂಪ್ ಟೀಕಿಸಿದ್ದ ಪೋಸ್ಟ್ ಡಿಲೀಟ್ ಮಾಡಿದ...
16-05-25 04:45 pm
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
18-05-25 12:42 pm
Mangalore Correspondent
Ullal, U T Khader, Mangalore: ಎರಡು ವರ್ಷವಾದರೂ...
17-05-25 10:09 pm
Mangalore Balmatta Accident, Bus, Video: ನಿಂತ...
17-05-25 08:52 pm
Sakleshpur Subrahmanya Railway Electrificatio...
17-05-25 01:01 pm
CM Siddaramaiah, New Dc Office Mangalore Inau...
16-05-25 10:27 pm
17-05-25 05:00 pm
Bangalore Correspondent
Mangalore Stabbing, Panemangalore, Crime, Att...
16-05-25 11:06 pm
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm