ಬ್ರೇಕಿಂಗ್ ನ್ಯೂಸ್
25-04-24 02:19 pm HK News Desk ಕರ್ನಾಟಕ
ಹುಬ್ಬಳ್ಳಿ , ಏ 25: ಕೊಲೆಯಾದ ನೇಹಾ ಹಿರೇಮಠ ಮನೆಗೆ ಸಿಐಡಿ ಅಧಿಕಾರಿಗಳು ಭೇಟಿ ಕೊಟ್ಟು ಮಾಹಿತಿ ಪಡೆಯುತ್ತಿದ್ದಾರೆ.
ಸಿಐಡಿ ಎಸ್ಪಿ ವೆಂಕಟೇಶ್ ನೇತೃತ್ವದಲ್ಲಿ ನೇಹಾ ಹಿರೇಮಠ ಮನೆಗೆ ಆಗಮಿಸಿದ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ನಗರದ ಬಿಡ್ನಾಳದಲ್ಲಿರುವ ನಿವಾಸಕ್ಕೆ ಆಗಮಿಸಿದ ಅಧಿಕಾರಿಗಳು, ತಂದೆ ನಿರಂಜನ ಹಿರೇಮಠ, ತಾಯಿ ಗೀತಾ ಹಿರೇಮಠ ಅವರ ವಿಚಾರಣೆ ಮಾಡುವುದರ ಜೊತೆಗೆ ಮನೆಯಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ.
ಹುಬ್ಬಳ್ಳಿಯ ಬಿವಿಬಿ ಕಾಲೇಜ್ ಕ್ಯಾಂಪಸ್ನಲ್ಲಿ ಏಪ್ರಿಲ್ 18ರ ಸಂಜೆ ವಿದ್ಯಾರ್ಥಿನಿ ನೇಹಾ ಹಿರೇಮಠ ಕೊಲೆ ನಡೆದಿತ್ತು. ಪ್ರಕರಣದ ಆರೋಪಿ ಫಯಾಜ್ನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪತ್ತೆಗೆ ವಿಶೇಷ ತಂಡ ರಚಿಸಲಾಗಿತ್ತು. ಈ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ ಮುಂದುವರಿದಿದೆ. ಏಪ್ರಿಲ್ 22 ಸೋಮವಾರ ಸರ್ಕಾರ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಿ ಆದೇಶ ಹೊರಡಿಸಿತ್ತು.
ಆರೋಪಿ ಫಯಾಜ್ನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿರುವ ಸಿಐಡಿ ಅಧಿಕಾರಿಗಳು ನಿನ್ನೆ ಕೊಲೆ ನಡೆದ ಕಾಲೇಜು ಆವರಣಕ್ಕೆ ಆರೋಪಿಯನ್ನು ಕರೆತಂದು ಮಹಜರು ಮಾಡಿದರು. ಧಾರವಾಡ ಕೇಂದ್ರ ಕಾರಾಗೃಹದಿಂದ ಆರೋಪಿಯನ್ನು ಬುಧವಾರ ಸಿಐಡಿ ವಶಕ್ಕೆ ಪಡೆದಿದೆ. ಸಂಪೂರ್ಣ ಮಾಹಿತಿ ಸಂಗ್ರಹಕ್ಕೆ ಆರೋಪಿ ಫಯಾಜ್ನನ್ನು ತಮ್ಮ ವಶಕ್ಕೆ ನೀಡುವಂತೆ ಸಿಐಡಿ ತಂಡ ಜೆಎಂಎಫ್‌ಸಿ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಹಿನ್ನೆಲೆ 6 ದಿನಗಳ ಕಾಲ ಆರೋಪಿಯನ್ನು ಸಿಐಡಿ ಕಸ್ಟಡಿಗೆ ಒಪ್ಪಿಸಲಾಗಿದೆ. ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ಮಂಗಳವಾರದಿಂದ ಪ್ರಕರಣ ಸಂಬಂಧ ತನಿಖೆ ಕೈಗೊಂಡಿದೆ
CID team visits Neha House at Hubballi, talks to parents, searches house. A team of CID officials led by SP Venkatesh visited Neha’s house and collected the statement of Neha’s mother Geeta and father Niranjanaiah Hiremath on Thursday. The inquiry is still on.
03-09-25 09:00 pm
HK News Desk
ಧರ್ಮಸ್ಥಳ ಚಲೋ' ಬಿಜೆಪಿ ನಾಯಕರ ವಿಡಿಯೋ ಬಳಸಿ ಜಾಲತಾಣ...
03-09-25 08:35 pm
ಪ್ರೀಮಿಯಂ ಬ್ರಾಂಡ್ ಮದ್ಯಗಳ ಬೆಲೆ ಇಳಿಕೆಗೆ ಚಿಂತನೆ ;...
03-09-25 02:30 pm
Mangalore, Moodbidri Police, Constable Shanta...
03-09-25 01:36 pm
ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಅಸ್ತಿತ್ವಕ್ಕೆ ;...
02-09-25 11:04 pm
04-09-25 10:54 am
HK News Desk
ತಂದೆ ಸ್ಥಾಪಿಸಿದ ಬಿಆರ್ ಎಸ್ ಪಕ್ಷದಿಂದ ಮಗಳಿಗೆ ಗೇಟ್...
03-09-25 10:04 pm
ಹೊಳೆಯಂತಾದ ದೆಹಲಿಯ ಬೀದಿಗಳು, ನೀರಲ್ಲೇ ಮಾರ್ಕೆಟ್!...
03-09-25 09:59 pm
ಯಮ‘ಕಂಪನ’ ; ತಾಲಿಬಾನಿಗಳ ನೆಲೆ ಈಗ ಗಢಗಢ..ಭೂಕಂಪಕ್ಕೆ...
03-09-25 07:18 pm
ಅಮೆರಿಕನ್ ಕಂಪನಿಗಳನ್ನು ಬಹಿಷ್ಕರಿಸಲು ರಾಮದೇವ್ ಕರೆ...
01-09-25 01:06 pm
03-09-25 11:03 pm
Mangalore Correspondent
Kmc Attavar, Mangalore News: 43 ವರ್ಷದ ಮಹಿಳೆಗೆ...
03-09-25 10:52 pm
Sullia, Sampaje Accident: ಸಂಪಾಜೆ ಬಳಿ ಭೀಕರ ಅಪಘ...
03-09-25 08:09 pm
Sowjanya Case, SIT, Uday Jain: 13 ವರ್ಷಗಳ ಬಳಿಕ...
03-09-25 03:45 pm
College student Missing, Mangalore: ಮಂಗಳೂರಿನಲ...
03-09-25 11:53 am
04-09-25 01:10 pm
Udupi Correspondent
Udupi Crime, Baby Sale Racket: ಮಂಗಳೂರಿನ ಪ್ರತಿ...
04-09-25 12:25 pm
Bagalur Police, Drugs, Crime: ಬ್ಯುಸಿನೆಸ್ ವೀಸಾ...
03-09-25 05:40 pm
Gold Theft, Mangalore, Airport: ವಿಮಾನ ಪ್ರಯಾಣಿ...
02-09-25 07:09 pm
Valachil, Rape, College, Mangalore Crime: ಇನ್...
02-09-25 04:31 pm