ಬ್ರೇಕಿಂಗ್ ನ್ಯೂಸ್
25-04-24 09:57 pm HK News Desk ಕರ್ನಾಟಕ
ಕೊಪ್ಪಳ, ಏ 25: ರಾಜ್ಯದಲ್ಲಿ ಲೋಕಸಭೆ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಮೊದಲ ಹಂತದ ಮತದಾನಕ್ಕೆ ಕ್ಷಣಗಣನೆ ಶುರುವಾಗಿರುವ ಹೊತ್ತಿನಲ್ಲಿ ರಾಜಕಾರಣಿಗಳ ಮಾತಿನ ಭರಾಟೆ ಕೂಡ ಜೋರಾಗಿ ನಡೆಯುತ್ತಿದೆ. ಇದೀಗ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹಾಗೂ ಸಚಿವ ಶಿವರಾಜ್ ತಂಗಡಗಿ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದ್ದು, ಈಗ ಮತ್ತೊಂದು ಹಂತ ತಲುಪಿದೆ.
ಇತ್ತಿಚಿಗೆ ಬಿಜೆಪಿ ಅಭ್ಯರ್ಥಿ ಪರ ಮತಯಾಚನೆ ವೇಳೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ನರೇಂದ್ರ ಮೋದಿ ಹೆಸರು ಹೇಳುವ ಯುವಕರಿಗೆ ಕಪಾಳಕ್ಕೆ ಹೊಡೆಯಿರಿ ಎಂದಿರುವ ಸಚಿವ ಶಿವರಾಜ ತಂಗಡಗಿಯನ್ನು ಮಂತ್ರಿ ಎನ್ನಬೇಕೊ, ಕಂತ್ರಿ ಎನ್ನಬೇಕೋ ಎಂದು ಪ್ರಶ್ನಿಸಿದ್ದರು. ಜನಾರ್ದನ ರೆಡ್ಡಿ ಅವರ ಈ ಹೇಳಿಕೆ ಆಡಳಿತ ಮತ್ತು ವಿಪಕ್ಷದವರ ನಡುವೆ ಮಾತಿನ ಚಕಮಕಿಗೆ ಕಾರಣವಾಗಿತ್ತು.
ಶಾಸಕ ಜನಾರ್ದನ ರೆಡ್ಡಿ ಹೇಳಿಕೆಗೆ ಖಾರವಾಗಿ ಪ್ರತಿಕ್ರಿಯಿಸಿದ ಸಚಿವ ಶಿವರಾಜ್ ತಂಗಡಗಿ, ನಾನು ಮನಸ್ಸು ಮಾಡಿದರೆ ರೆಡ್ಡಿ ಇತಿಹಾಸ ಬಿಚ್ಚಿಡುತ್ತೇನೆ. ನನ್ನ ವೈಯಕ್ತಿಕ ಬದುಕಿನ ವಿಚಾರಗಳ ಬಗ್ಗೆ ಮಾತನಾಡಿದರೆ ನಿಮ್ಮನ್ನು ಎಲ್ಲಿ ಬೇಕಾದರೂ ಬೆತ್ತಲೆಯಾಗಿ ನಿಲ್ಲಿಸುವೆ ಎಂದು ಹೇಳುವ ಮೂಲಕ ತಿರುಗೇಟು ನೀಡಿದ್ದಾರೆ.
ಲೋಕಸಭಾ ಚುನಾವಣೆಯ ಮತದಾನಕ್ಕೆ ದಿನಗಣನೆ ಶುರುವಾಗಿರುವ ಹೊತ್ತಿನಲ್ಲಿ ಈ ಇಬ್ಬರು ನಾಯಕರ ನಡುವಿನ ವಾಕ್ಸಮರ ಮುಂದಿನ ದಿನಗಳಲ್ಲಿ ಯಾವ ಹಂತಕ್ಕೆ ತಲುಪಲಿದೆ ಎಂದು ಕಾದು ನೋಡಬೇಕಿದೆ. ಕರ್ನಾಟಕದಲ್ಲಿ ಮೊದಲ ಹಂತದ ಮತದಾನವು ಏಪ್ರಿಲ್ 26ರಂದು ಜರುಗಲಿದ್ದು, ಎರಡಣೇ ಹಂತದ ಮತದಾನವು ಮೇ 07ರಂದು ನಡೆಯಲಿದೆ.
ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ;
ಸಚಿವ ಶಿವರಾಜ್ ತಂಗಡಗಿ ವಿರುದ್ಧ ಮಾಜಿ ಸಚಿವ ಜನಾರ್ದನ ರೆಡ್ಡಿ ಲಘು ಹೇಳಿಕೆ ನೀಡಿದ್ದಾರೆ. ತಂಗಡಗಿಯನ್ನು ಮಂತ್ರಿ ಎನ್ನಬೇಕೋ, ಕಂತ್ರಿ ಎನ್ನಬೇಕೋ ಆ ಭಗವಂತನಿಗೆ ಗೊತ್ತು! ಅಂತ ರೆಡ್ಡಿ ಹೇಳಿದ್ದಾರೆ. ಹೀಗೆ ಮೋದಿ ವಿರುದ್ದ ಸಚಿವ ಶಿವರಾಜ್ ತಂಗಡಗಿ ಮಾತನಾಡಿದ್ರೆ, ಜನ್ರು ಮಂತ್ರಿ ಅಂತ ಕರೆಯೊಲ್ಲ ಕಂತ್ರಿ ಎಂದೇ ಕರೆಯುತ್ತಾರೆ ಅಂತ ಟೀಕಿಸಿದ್ದಾರೆ.
Shivaraj Tangadagi says will make Janardhana Reddy naked publically. This statement was made by Tangadagi after Reddy made a controversy remark on shivaraj.
10-01-26 10:28 pm
HK News Desk
"ಡ್ಯಾಡಿ ಈಸ್ ಹೋಮ್" ಎಐ ವಿಡಿಯೋ ರಿಲೀಸ್ ; ರಾಜ್ಯ ರಾ...
10-01-26 04:29 pm
ಚಾರ್ಮಾಡಿ ಘಾಟಿಯಲ್ಲಿ ರಸ್ತೆಗೆ ಅಡ್ಡ ನಿಂತ ಒಂಟಿ ಸಲಗ...
10-01-26 03:00 pm
Purushottam Bilimale, Legal Battle Against Ma...
10-01-26 01:17 pm
ಮಲಯಾಳ ಭಾಷಾ ಮಸೂದೆಯಿಂದ ಕಾಸರಗೋಡು ಕನ್ನಡಿಗರಿಗೆ ಧಕ್...
09-01-26 04:42 pm
11-01-26 06:07 pm
HK News
ವೆನಿಜುವೆಲಾ ತೈಲದ ನಿಯಂತ್ರಣಕ್ಕೆ ಮುಂದಾದ ಅಮೆರಿಕ ;...
10-01-26 03:22 pm
ಶಬರಿಮಲೆ ಚಿನ್ನ ಕಳವು ಪ್ರಕರಣ ; ಪ್ರಧಾನ ತಂತ್ರಿ ಕಂಠ...
09-01-26 11:00 pm
ಟ್ರಂಪ್ ಕೈಗಳು ಸಾವಿರಾರು ಇರಾನಿಗರ ರಕ್ತದಿಂದ ಒದ್ದೆಯ...
09-01-26 08:30 pm
ರಷ್ಯಾ ಹಡಗು ವಶಕ್ಕೆ ಪಡೆದ ಬೆನ್ನಲ್ಲೇ ಅಮೆರಿಕಕ್ಕೆ ತ...
08-01-26 11:21 pm
11-01-26 10:39 pm
Mangaluru Staffer
ಬಾಂಗ್ಲಾದಲ್ಲಿ ಹಿಂದುಗಳ ಹತ್ಯೆಯನ್ನು ಭಾರತ ನೋಡುತ್ತ...
11-01-26 07:06 pm
ಅಮೆರಿಕ ಬಿಟ್ಟು ಚೀನಾ ಜೊತೆಗೆ ಬಾಂಧವ್ಯ ಬೆಳೆಸಬೇಕಿದೆ...
11-01-26 12:56 pm
Cm Siddaramaiah, Mangalore: ಕರಾವಳಿ ಪ್ರವಾಸೋದ್ಯ...
10-01-26 10:45 pm
ಡೀಮ್ಡ್ ಯುನಿವರ್ಸಿಟಿಗಳಲ್ಲಿ ಭಾಷೆಯ ಅವಜ್ಞೆ ; ಸಾಹಿತ...
10-01-26 07:57 pm
12-01-26 01:31 pm
Bengaluru Staffer
ಅಯ್ಯಪ್ಪ ಸ್ವಾಮಿಗಳ ಪೂಜೆ ಸಂದರ್ಭದಲ್ಲಿ ಮುಸ್ಲಿಂ ವ್ಯ...
11-01-26 09:59 pm
ಆರು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆ ; ತಾಯಿ ಜಗಳ...
07-01-26 10:45 pm
ಸಮಾಧಿಯಲ್ಲಿ ಡ್ರಗ್ಸ್ ಬಚ್ಚಿಟ್ಟು ಮಾರಾಟ ; 3.5 ಕೋಟಿ...
06-01-26 07:04 pm
Kanachur Hospital, POSCO, Doctor: ಚಿಕಿತ್ಸೆಗೆ...
06-01-26 02:24 pm